Breaking News

ರೆಮ್‌ಡಿಸಿವಿರ್‌ ಸಂಗ್ರಹಿಸುವವರ ವಿರುದ್ಧ ಗೂಂಡಾ ಕಾಯ್ದೆ: ಸ್ಟಾಲಿನ್‌ ಎಚ್ಚರಿಕೆ

Spread the love

ಚೆನ್ನೈ: ‘ಕೋವಿಡ್‌ ಚಿಕಿತ್ಸೆಗೆ ಬಳಸಲಾಗುತ್ತಿರುವ ರೆಮ್‌ಡಿಸಿವಿರ್‌ ಔಷಧಿಯನ್ನು ಸಂಗ್ರಹಿಸುವುದು ಮತ್ತು ಆಮ್ಲಜನಕ ಸಿಲಿಂಡರ್‌ಗಳನ್ನು ದುಬಾರಿ ಬೆಲೆಗೆ ಮಾರಾಟ ಮಾಡುವವರ ವಿರುದ್ಧ ಗೂಂಡಾ ಕಾಯ್ದೆಯಡಿ ಕ್ರಮಕೈಗೊಳ್ಳಲಾಗುವುದು’ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್‌ ಶನಿವಾರ ಹೇಳಿದರು.

‘ಕೋವಿಡ್‌ ಪ್ರಸರಣವನ್ನು ತಡೆಯಲು ಹೇರಲಾಗಿರುವ ಲಾಕ್‌ಡೌನ್‌ ಎಂಬ ‘ಕಹಿ ಗುಳಿಗೆ’ಯನ್ನು ಸಾರ್ವಜನಿಕರು ಸ್ವೀಕರಿಸಿದ್ದಾರೆ. ಇಂತಹ ಸಂದರ್ಭದಲ್ಲೂ ಕೆಲವು ಸಮಾಜ ಘಾತುಕ ವ್ಯಕ್ತಿಗಳು ರೆಮ್‌ಡಿಸಿವಿರ್‌ ಔಷಧಿಯನ್ನು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದಾರೆ. ಅಲ್ಲದೆ ಆಮ್ಲಜನಕ ಸಿಲಿಂಡರ್‌ಗಳನ್ನು ಹೆಚ್ಚಿನ ಬೆಲೆಯಲ್ಲಿ ಮಾರಾಟ ಮಾಡಲಾಗುತ್ತಿದೆ ಎಂಬ ದೂರುಗಳು ಬಂದಿವೆ’ ಎಂದು ಅವರು ತಿಳಿಸಿದರು.

‘ಈ ಸಾಂಕ್ರಾಮಿಕದ ಸಂದರ್ಭದಲ್ಲಿ ಇಂತಹ ಕೃತ್ಯಗಳನ್ನು ದೊಡ್ಡ ಅಪರಾಧವೆಂದು ಪರಿಗಣಿಸಲಾಗುವುದು. ನಾನು ಈಗಾಗಲೇ ಈ ರೀತಿಯ ಕೃತ್ಯ ಎಸಗುವವರ ವಿರುದ್ಧ ಗೂಂಡಾ ಕಾಯ್ದೆಯಡಿ ಕ್ರಮಕೈಗೊಳ್ಳುವಂತೆ ಪೊಲೀಸರಿಗೆ ನಿರ್ದೇಶಿಸಿದ್ದೇನೆ’ ಎಂದು ಅವರು ಮಾಹಿತಿ ನೀಡಿದರು.


Spread the love

About Laxminews 24x7

Check Also

ಧರ್ಮಸ್ಥಳ ಪ್ರಕರಣ: ಬಂಧನದ ಭೀತಿಯಲ್ಲಿದ್ದ ಯೂಟ್ಯೂಬರ್ ಸಮೀರ್ ಎಂಡಿಗೆ ಬಿಗ್ ರಿಲೀಫ್

Spread the loveಮಂಗಳೂರು (ಆಗಸ್ಟ್ .21):  ಧರ್ಮಸ್ಥಳ ವಿರುದ್ಧ ವಿಡಿಯೋ ಮೂಲಕ ಅಪಪ್ರಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಯೂಟ್ಯೂಬರ್ ಸಮೀರ್ ಎಂಡಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ