ಬೆಂಗಳೂರು: ದೆಹಲಿ ಭೇಟಿ ಕುರಿತು ಸ್ಪಷ್ಟೀಕರಣ ನೀಡಿರುವ ಡಿಸಿಎಂ ಲಕ್ಷಣ ಸವದಿ ನಾವೆಲ್ಲರೂ ಪಕ್ಷಕ್ಕೆ ನಿಷ್ಠರು ಹಾಗೂ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧರು.ಅನಗತ್ಯವಾದ ಪ್ರಚಾರ ಬೇಡ ಎಂದು ಅಭಿಮಾನಿಗಳಲ್ಲಿ ಹಾಗೂ ಮಾಧ್ಯಮ ಮಿತ್ರರಲ್ಲಿ ಮನವಿ ಮಾಡಿದ್ದಾರೆ.
ತಮ್ಮ ಸಾಮಾಜಿಕ ಜಾಲತಾಣಗಳ ಖಾತೆ ಮೂಲಕ ಈ ಕುರಿತು ಬರೆದುಕೊಂಡಿರುವ ಅವರು ನನ್ನ ದೆಹಲಿ ಭೇಟಿಯ ಬಗ್ಗೆ ಅನಗತ್ಯವಾದ ಪ್ರಚಾರ ಬೇಡ ದೆಹಲಿಯಲ್ಲಿ ವರಿಷ್ಠರೊಂದಿಗಿನ ಭೇಟಿ ಪೂರ್ವ ನಿರ್ಧಾರಿತವಾಗಿದ್ದ ಕಾರ್ಯಕ್ರಮ ಅದರ ಬಗ್ಗೆ ಕಲ್ಪಿತ ವರದಿ ದಯವಿಟ್ಟು ಬೇಡ ಎಂದು ಹೇಳಿದ್ದಾರೆ.
ನನ್ನ ಕ್ಷೇತ್ರದ ಹಿತೈಷಿಗಳೇ ಸಾಮಾಜಿಕ ಜಾಲತಾಣಗಳಲ್ಲಿ ದಯವಿಟ್ಟು ಆಧಾರ ರಹಿತ ಪೋಸ್ಟ್ ಗಳನ್ನು ಮಾಡದಿರಿ
ಕ್ಷೇತ್ರದ ಜನತೆ ಪೋಸ್ಟ್ ಗಳನ್ನು ಹಾಕಿದ್ದಾರೆ ಎನ್ನುತ್ತಾ ಸತ್ಯಕ್ಕೆ ದೂರವಾದ ಸುದ್ದಿಗಳನ್ನು ಪ್ರಸಾರ ಮಾಡದಿರುವಂತೆ ಜವಾಬ್ದಾರಿಯುತ ಮಾಧ್ಯಮಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಕೋವಿಡ್ ಸಮಸ್ಯೆಯನ್ನು ಎದುರಿಸಿ ಒಂದು ವರ್ಷ ಉತ್ತಮ ಆಡಳಿತ ನೀಡಿರುವ ನಾವೆಲ್ಲರೂ ಪಕ್ಷಕ್ಕೆ ನಿಷ್ಠರು ಹಾಗೂ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧರು ಎಂದು ತಿಳಿಸಿದ್ದಾರೆ.