Breaking News
Home / ಜಿಲ್ಲೆ / ಬೆಂಗಳೂರು / ಶಾಕಿಂಗ್ ನ್ಯೂಸ್: ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಸಿಗದೆ ಮನೆಯಲ್ಲೇ 600 ಮಂದಿ ಸಾವು..!

ಶಾಕಿಂಗ್ ನ್ಯೂಸ್: ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಸಿಗದೆ ಮನೆಯಲ್ಲೇ 600 ಮಂದಿ ಸಾವು..!

Spread the love

ಬೆಂಗಳೂರು, ಮೇ 15- ಸಮಯಕ್ಕೆ ಸರಿಯಾಗಿ ಸಿಗದ ಬೆಡ್, ಚಿಕಿತ್ಸೆ ವಿಳಂಬದಿಂದಾಗಿ ಕಳೆದ 1 ತಿಂಗಳಿಂದ ರಾಜ್ಯದಲ್ಲಿ ಸುಮಾರು 600 ರೋಗಿಗಳು ಮನೆಯಲ್ಲಿಯೇ ಸಾವನ್ನಪ್ಪಿದ್ದಾರೆ ಎಂಬ‌ ಆಘಾತಕಾರಿ ಸುದ್ದಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ‌ಇಲಾಖೆಯಿಂದ ಹೊರಬಿದ್ದಿದೆ.

ಏಪ್ರಿಲ್ 13 ರಿಂದ 30ರವರೆಗೆ ಸುಮಾರು 120 ಇದ್ದ ಸಾವಿನ ಸಂಖ್ಯೆ ಮೇ 1 ರಿಂದ ಮೇ 13ರವರೆಗೆ ಇದ್ದಕ್ಕಿದ್ದಂತೆ 479ಕ್ಕೇರಿದೆ, ಮೇ 12 ರಂದು ಅತಿ ಹೆಚ್ಚು ಸಾವು ದಾಖಲಾಗಿದ್ದು, ಆರೋಗ್ಯ ಇಲಾಖೆ ಅಂಕಿ ಅಂಶಗಳ ಪ್ರಕಾರ 88 ಮಂದಿ ಸಾವನ್ನಪ್ಪಿದ್ದಾರೆ ಎಂದು ಇಲಾಖೆಯೇ ಬಹಿರಂಗಪಡಿಸಿದೆ.ಆಸ್ಪತ್ರೆಯಲ್ಲಿ ಹಾಸಿಗೆಗಾಗಿ ಹುಡುಕಾಟ, ಸರಿಯಾದ ಸಮಯದಲ್ಲಿ ಸೂಕ್ತ ಚಿಕಿತ್ಸೆ ಸಿಗದೇ ಸಾವನ್ನಪ್ಪಿದ್ದಾರೆ ಎಂದು ತಜ್ಞರು ತಿಳಿಸಿದ್ದಾರೆ. ಕೋವಿಡ್ ಸಂಖ್ಯೆ ಹೆಚ್ಚಾದಂತೆ ಅದಕ್ಕೆ ಸರಿಯಾಗಿ ಬೆಡ್ ವ್ಯವಸ್ಥೆ ಆಕ್ಸಿಜನ್, ಹಾಗೂ ಚಿಕಿತ್ಸೆ ದೊರೆಯದ ಹಿನ್ನೆಲೆಯಲ್ಲಿ ಈ ಸಾವುಗಳಾಗಿವೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಹಾಸಿಗೆ ಕೊರತೆ ಹಿನ್ನೆಲೆಯಲ್ಲಿ ರೋಗಿಗಳು ಸರಿಯಾದ ಸಮಯಕ್ಕೆ ಆಸ್ಪತ್ರೆ ತಲುಪಲಾಗಲಿಲ್ಲ, ಇದರ ಜೊತೆಗೆ ರೂಪಾಂತರಿ ವೈರಸ್ ನಿಂದಾಗಿ ಸಾವಿನ ಸಂಖ್ಯೆ ದುಪ್ಪಟ್ಟಾಗಿದೆ, ಈ ಮೊದಲು ರೋಗದ ತೀವ್ರತೆ ಹೆಚ್ಚಾಗಲು ಆರರಿಂದ 8 ದಿನ ತೆಗೆದುಕೊಳ್ಳುತ್ತಿತ್ತು, ಆದರೆ ಈಗ ಕೇವಲ ಮೂರರಿಂದ ನಾಲ್ಕು ದಿನಗಳಲ್ಲೇ ಸೋಂಕು ತೀವ್ರವಾಗುತ್ತಿದೆ. ನ್ಯುಮೋನಿಯಾ, ಶ್ವಾಸಕೋಶ ಮತ್ತು ಉಸಿರಾಟದ ತೊಂದರೆ ಹೆಚ್ಚುತ್ತಿದೆ. ಆರಂಭಿಕ ಹಂತದಲ್ಲೇ ಚಿಕಿತ್ಸೆ ಪಡೆದರೇ ಸಾವಿನ ಪ್ರಮಾಣ ತಗ್ಗಲಿದೆ ಎಂದು ಹೇಳಿದ್ದಾರೆ.

ಕೊರೋನಾ ಸೋಂಕಿತರ ಸಂಖ್ಯೆ ಮಿತಿಮೀರುತ್ತಿದೆ, ಆದರೆ ಅದಕ್ಕೆ ಅನುಗುಣವಾಗಿ ಬೆಡ್ ಸಿಗುತ್ತಿಲ್ಲ.ಹೀಗಾಗಿ ಇಂತಹ ಅವಘಡಗಳು ಸಂಭವಿಸಿವೆ‌ ಎಂದು ತಿಳಿಸಿದ್ದಾರೆ.

ಕೆಲವು ರೋಗಿಗಳಿಗೆ 2-3 ದಿನಗಳವರೆಗೆ ಐಸಿಯು ಹಾಸಿಗೆ ಸಿಗುತ್ತಿಲ್ಲ, ಆಮ್ಲಜನಕದ ಶುದ್ಧತ್ವ ಮಟ್ಟ ಕಡಿಮೆ ಮತ್ತು ಉಸಿರಾಟದ ತೊಂದರೆಯಿಂದಾಗಿ ಅವರು ಬಳಲುತ್ತಾರೆ, ಇದು ರೋಗಿಗಳಿಗೆ ಸಾಕಷ್ಟು ಆಘಾತವನ್ನುಂಟುಮಾಡುತ್ತದೆ ಮತ್ತು ಕೆಲವು ಸಂದರ್ಭಗಳಲ್ಲಿ ಅವರು ಮನೆಯಲ್ಲಿ ಹೃದಯಾಘಾತಕ್ಕೊಳಗಾಗುತ್ತಾರೆ. ಈ ಮೊದಲು ಮನೆಯಲ್ಲೇ ಆರೈಕೆ ಸೇವೆಗಾಗಿ ವೈದ್ಯರನ್ನು ರೋಗಿಯ ಮನೆಗೆ ಕಳುಹಿಸಲಾಗುತ್ತಿತ್ತು, ಆದರೆ ಅದು ಈಗ ಲಭ್ಯವಿಲ್ಲ “ಎಂದು ಮಾಹಿತಿ ನೀಡಿದ್ದಾರೆ.


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ