Breaking News

ಚಿಕ್ಕಮಗಳೂರಿನಲ್ಲೂ ಆಕ್ಸಿಜನ್ ಬಸ್ ಸೇವೆ ಪ್ರಾರಂಭ: ಡಿಸಿಎಂ ಸವದಿ

Spread the love

ಬೆಂಗಳೂರಿನಲ್ಲಿ ಬಿ.ಎಂ.ಟಿ.ಸಿ. ವತಿಯಿಂದ ಪ್ರಾರಂಭಿಸಲಾದ ಆಕ್ಸಿಜನ್ ಬಸ್ ಸೇವೆಯು ಅತ್ಯಂತ ಯಶಸ್ವಿಯಾಗಿರುವ ಹಿನ್ನೆಲೆಯಲ್ಲಿ ಈ ಸೇವಾ ಸೌಲಭ್ಯವನ್ನು ಜಿಲ್ಲಾ ಕೇಂದ್ರಗಳಿಗೂ ವಿಸ್ತರಿಸಲಾಗುತ್ತಿದೆ. ಇದರ ಅಂಗವಾಗಿ ಚಿಕ್ಕಮಗಳೂರಿನಲ್ಲಿಯೂ ಕೆ. ಎಸ್. ಆರ್. ಟಿ.ಸಿ.ಯು ಸ್ವಯಂ ಸೇವಾ ಸಂಸ್ಥೆಗಳ ಸಹಭಾಗಿತ್ವದಲ್ಲಿ ನಾಳೆಯಿಂದ ( ಸೋಮವಾರ) ಬಸ್ಸಿನಲ್ಲಿಯೇ ಆಕ್ಸಿಜನ್ ಘಟಕವನ್ನು ಪ್ರಾರಂಭಿಸಲು ಮುಂದಾಗಿದೆ ಎಂದು ಉಪಮುಖ್ಯಮಂತ್ರಿಗಳು ಮತ್ತು ಸಾರಿಗೆ ಸಚಿವರಾದ ಶ್ರೀ ಲಕ್ಷ್ಮಣ ಸವದಿಯವರು ತಿಳಿಸಿದ್ದಾರೆ.

ಪ್ರಸ್ತುತ ಬಹುತೇಕ ಎಲ್ಲಾ ಆಸ್ಪತ್ರೆಗಳಲ್ಲೂ ಕೋವಿಡ್ ರೋಗಿಗಳ ದಟ್ಟಣೆ ಹೆಚ್ಚಾಗಿದೆ. ಇದರಿಂದಾಗಿ ಹೊಸ ರೋಗಿಗಳು ಆಸ್ಪತ್ರೆಗೆ ಬಂದಾಗ ಅವರಿಗೆ ಆಸ್ಪತ್ರೆಯಲ್ಲಿ ಆಕ್ಸಿಜನ್ ನೀಡುವುದು ವಿಳಂಬವಾಗಿ ತೀವ್ರ ತೊಂದರೆಯಾಗುತ್ತಿದೆ. ಅಷ್ಟೇ ಅಲ್ಲ, ಆಸ್ಪತ್ರೆಯಲ್ಲಿ ಸ್ಥಳಾಭಾವದಿಂದ ರೋಗಿಗಳಿಗೆ ಅಲ್ಲಿ ಕುಳಿತು ಕಾಯುವುದಕ್ಕೂ ಕಷ್ಟವಾಗುತ್ತಿದೆ. ಇದನ್ನು ತಪ್ಪಿಸುವ ಉದ್ದೇಶದಿಂದ ಸಾರ್ವಜನಿಕರಿಗೆ ಉಚಿತವಾಗಿ ಬಸ್ಸಿನಲ್ಲಿಯೇ ತುರ್ತು ಆಕ್ಸಿಜನ್ ಸೌಲಭ್ಯ ಒದಗಿಸಲು ಈ ನೂತನ ವ್ಯವಸ್ಥೆ ಕಲ್ಪಿಸಲಾಗುತ್ತಿದೆ ಎಂದು ಶ್ರೀ ಸವದಿಯವರು ವಿವರಿಸಿದ್ದಾರೆ.

ಆಕ್ಸಿಜನ್ ಪೂರೈಸಲು ಅನುಕೂಲವಾಗುವಂತೆ ವಿಶೇಷವಾಗಿ ವಿನ್ಯಾಸಗೊಳಿಸಿರುವ ಈ ಕೆ.ಎಸ್. ಆರ್. ಟಿ. ಸಿ. ಬಸ್ಸನ್ನು ಚಿಕ್ಕಮಗಳೂರಿನ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ನಿಲ್ಲಿಸಲಾಗುವುದು. ಹೊರಗಿನಿಂದ ಕೋವಿಡ್ ಪೀಡಿತರು ಬಂದಾಗ ತಕ್ಷಣಕ್ಕೆ ಆಸ್ಪತ್ರೆಯ ಒಳಗೆ ಆಕ್ಸಿಜನ್ ಸಿಗದಿದ್ದರೆ ಆತಂಕ ಪಡದೇ ಈ ಆಕ್ಸಿಜನ್ ಮೊಬೈಲ್ ಬಸ್ಸಿನಲ್ಲಿಯೇ ತುರ್ತಾಗಿ ವಿಶ್ರಮಿಸಿ ಅಗತ್ಯ ಆಕ್ಸಿಜನ್ ಪಡೆದುಕೊಳ್ಳಲು ಸಾಧ್ಯವಾಗುವಂತೆ ವೈದ್ಯಕೀಯ ಉಪಕರಣಗಳನ್ನು ಇದರಲ್ಲಿ ಅಳವಡಿಸಲಾಗಿದೆ.


Spread the love

About Laxminews 24x7

Check Also

ಸಿಎಂ ಹುದ್ದೆಯ ರೇಸಿನಿಂದ ಹಿಂದೆ ಸರಿದವರು

Spread the love ಕಳೆದ ವಾರ ವಿದಾನಮಂಡಲ ಅಧಿವೇಶನ ನಡೆಯುತ್ತಿದ್ದ ಸಂದರ್ಭದಲ್ಲಿ ಕುತೂಹಲಕಾರಿ ವಿಷಯವೊಂದು ಹೊರಬಿತ್ತು.ಅದರ ಪ್ರಕಾರ ಕರ್ನಾಟಕದಲ್ಲಿ ಮತ್ತೊಮ್ಮೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ