Breaking News

ಕೋವಿಡ್‌ನಿಂದ ಮೃತಪಟ್ಟವರ ಕುಟುಂಬಕ್ಕೆ ಪರಿಹಾರ ಘೋಷಣೆ: 50 ಸಾವಿರ ರೂ. ವೈಯಕ್ತಿಕ ನೆರವು; ಸಚಿವ ಬಿ.ಸಿ. ಪಾಟೀಲ್

Spread the love

ಬೆಂಗಳೂರು: ಹಿರೇಕರೂರು ಮತಕ್ಷೇತ್ರದ ಹಿರೇಕೆರೂರು ಹಾಗೂ ರಟ್ಟಿಹಳ್ಳಿ ತಾಲೂಕಿನ ವ್ಯಾಪ್ತಿಯಲ್ಲಿ ಕೋವಿಡ್ ಎರಡನೇ ಅಲೆ ಸೋಂಕಿನಿಂದ ಮೃತಪಟ್ಟವರ ಕುಟುಂಬಕ್ಕೆ ತಲಾ 50 ಸಾವಿರ ರೂ. ಪರಿಹಾರ ಧನ ನೀಡುವುದಾಗಿ ಕೃಷಿ ಸಚಿವರಾದ ಹಿರೇಕೆರೂರು ವಿಧಾನಸಭಾ ಕ್ಷೇತ್ರದ ಶಾಸಕ ಬಿ.ಸಿ.ಪಾಟೀಲ್ ಘೋಷಿಸಿದ್ದಾರೆ.

ಹಿರೇಕೆರೂರು ಮತ ಕ್ಷೇತ್ರದಲ್ಲಿ ಇಲ್ಲಿಯವರೆಗೆ ಸುಮಾರು 18 ಮಂದಿ‌ ಸೋಂಕಿನಿಂದ ಮೃತಪಟ್ಟಿದ್ದು, ಮೃತಪಟ್ಟವರ ಕುಟುಂಬದ ಸದಸ್ಯರನ್ನು ನಾಳೆ ಬಿ.ಸಿ. ಪಾಟೀಲ್ ಭೇಟಿಯಾಗಿ ಪರಿಹಾರ ಧನ ವಿತರಿಸಲಿದ್ದಾರೆ.

ಇನ್ನು ಕೆಲವು ದಿನಗಳ ಹಿಂದೆ ಹಿರೇಕೆರೂರು ಮತಕ್ಷೇತ್ರ ವ್ಯಾಪ್ತಿಯಲ್ಲಿನ ಬಡತನ ರೇಖೆಗಿಂತ ಕೆಳಗಿರುವ ಕುಟುಂಬದ ಸದಸ್ಯರು ಹಿರೇಕೆರೂರು ಸೇರಿದಂತೆ ಹಾವೇರಿ ಜಿಲ್ಲೆಯ ಸರ್ಕಾರಿ ಅಥವಾ ಖಾಸಗಿ ಆಸ್ಪತ್ರೆಯಲ್ಲಿ ಕೋವಿಡ್ ಸೋಂಕಿಗೆ ದಾಖಲಾಗಿ ಚಿಕಿತ್ಸೆ ಪಡೆದಲ್ಲಿ ಅವರ ಚಿಕಿತ್ಸಾ ವೆಚ್ಚವನ್ನು ವೈಯಕ್ತಿಕವಾಗಿ ಭರಿಸುವುದಾಗಿ ಘೋಷಿಸಿದ್ದರು.


Spread the love

About Laxminews 24x7

Check Also

ಕರ್ನಾಟಕ ಹವಾಮಾನ ವರದಿ: ರಾಜ್ಯದ ಹಲವೆಡೆ ಇಂದು ಗುಡುಗು ಸಹಿತ ಲಘು ಮಳೆಯ ಸೂಚನೆ

Spread the loveಬೆಂಗಳೂರು: ರಾಜ್ಯದಲ್ಲಿ ಹಲವು ದಿನಗಳಿಂದ ಶುಷ್ಕ ವಾತಾವರಣವೇ ಆವರಿಸಿದ್ದು, ಇನ್ನು ಕೆಲ ದಿನಗಳಲ್ಲಿ ಬೆಂಗಳೂರು ಬಿಸಿಲಿನ ಬೇಗೆಯಿಂದ ತತ್ತರಿಸಲಿದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ