Breaking News

ರಾಯಚೂರು ಹಾಗೂ ಹುಬ್ಬಳ್ಳಿಯಲ್ಲಿ ಕಂಡುಬಂದ ಬ್ಲ್ಯಾಕ್ ಫಂಗಸ್ ಕಾಯಿಲೆ

Spread the love

ರಾಯಚೂರು: ನಿರಂತರ ಆಕ್ಸಿಜನ್ ಬಳಕೆ ಜತೆಗೆ ಇನ್ನಿತರ ಕಾರಣಗಳಿಂದ ಬರುವ ಅಪಾಯಕಾರಿ ಬ್ಲ್ಯಾಕ್ ಫಂಗಸ್ ಕಾಯಿಲೆ ಜಿಲ್ಲೆಯ ಇದೀಗ ರಾಜ್ಯದ ಇನ್ನು ಹಲವು ಕಡೆಗಳಲ್ಲಿ ಕಂಡುಬರುತ್ತಿದ್ದು, ಕರ್ನಾಟಕದಲ್ಲಿಯೂ ಇದು ವೇಗವಾಗಿ ಹಬ್ಬುತ್ತಿರುವುದು ತಲೆನೋವಾಗಿ ಪರಿಣಮಿಸಿದೆ.

ಇದುವರೆಗೂ ಬೆಂಗಳೂರಿನಲ್ಲಿ ಮಾತ್ರ ಕಾಣಿಸಿಕೊಂಡಿದ್ದ ಈ ಕಾಯಿಲೆ ರಾಯಚೂರು ಹಾಗೂ ಹುಬ್ಬಳ್ಳಿಯಲ್ಲಿ ಕಂಡುಬಂದಿದೆ.

ರಾಯಚೂರಿನಲ್ಲಿ ನಾಲ್ವರಲ್ಲಿ ಕಾಣಿಸಿಕೊಂಡಿದ್ದು, ಒಪೆಕ್ ಕೋವಿಡ್ ಕೇಂದ್ರದಲ್ಲಿ ದಾಖಲಾದ ಮೂವರು ಹಾಗೂ ಖಾಸಗಿ ಆಸ್ಪತ್ರೆಯ ಒಬ್ಬ ರೋಗಿಯಲ್ಲಿ ಈ ಕಾಯಿಲೆ ಕಂಡು ಬಂದಿದೆ.

ಲಭ್ಯವಿರುವ ಚಿಕಿತ್ಸೆ ನೀಡಿದ ಹಿನ್ನೆಲೆಯಲ್ಲಿ ರೋಗಿಗಳು ತುಸು ಗುಣಮುಖರಾಗಿದ್ದಾರೆ. ಕೋವಿಡ್ ಸೋಂಕಿತರಿಗೆ ನಿರಂತರವಾಗಿ ಆಕ್ಸಿಜನ್ ನೀಡಬೇಕಿದ್ದು, ಅಂಥವರಲ್ಲಿ ಈ ಬ್ಲ್ಯಾಕ್ ಫಂಗಸ್ ಕಾಣಿಸಿಕೊಳ್ಳುವ ಸಾಧ್ಯತೆಯಿದ್ದು , ಜಿಲ್ಲೆಯಲ್ಲಿ ನಾಲ್ಕು ಕೇಸ್ ಪತ್ತೆಯಾಗಿದೆ ಎಂದು ಡಿಎಚ್ ಒ ಡಾ.ರಾಮಕೃಷ್ಣ ತಿಳಿಸಿದ್ದಾರೆ.

ಇನ್ನು ಹುಬ್ಬಳ್ಳಿ ಕೋವಿಡ್ ಗುಣಮುಖರಾದರಲ್ಲಿ ಕಂಡು ಬಂದ ಬ್ಲ್ಯಾಕ್ ಫಂಗಸ್ 12 ಜನರಲ್ಲಿ ಕಂಡುಬಂದಿದ್ದು, ಇಲ್ಲಿನ ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ನಾಲ್ವರು ಗುಣಮುಖರಾಗಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ