ಚಿಕ್ಕೋಡಿ(ಬೆಳಗಾವಿ): ಇನ್ನೂ 20 ವರ್ಷ ನಾನು ರಾಜಕಾರಣದಲ್ಲಿ ಇರುತ್ತೇನೆ. ಈ 20 ವರ್ಷದ ಒಳಗೆ ನಾನು ಮುಖ್ಯಮಂತ್ರಿ ಆಗಿಯೇ ಆಗುತ್ತೆನೆ ಎಂದು ಬಿಜೆಪಿ ಹಿರಿಯ ಶಾಸಕ ಉಮೇಶ್ ಕತ್ತಿ ಹೇಳಿದ್ದಾರೆ.
ಬೆಳಗಾವಿ ಜಿಲ್ಲೆ ಹುಕ್ಕೇರಿ ಪಟ್ಟಣದ ಈಶ್ವರಲಿಂಗ ಸಮುದಾಯ ಭವನದ ಶೀಲಾನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಯಡಿಯೂರಪ್ಪ ಯಾವತ್ತೂ ನಮ್ಮ ನಾಯಕರು. ಅದರಲ್ಲಿ ಎರಡು ಮಾತಿಲ್ಲ. ಅತಿವೃಷ್ಟಿ, ಅನಾವೃಷ್ಟಿ ಕೋವಿಡ್ ಸೇರಿದಂತೆ ಎಂತಹ ಪರಿಸ್ಥಿತಿ ಬಂದರೂ ನಿಭಾಯಿಸುವ ಶಕ್ತಿ ದೇಶದಲ್ಲಿ ಯಡಿಯೂರಪ್ಪನವರಿಗೆ ಮಾತ್ರ ಇದೆ ಎಂದು ನುಡಿದರು.
ದೇಶದಲ್ಲಿ ಬಿಜೆಪಿ ಸರ್ಕಾರ 10 ವರ್ಷಗಳ ಕಾಲ ಕೇಂದ್ರ ಹಾಗೂ ರಾಜ್ಯದಲ್ಲಿ ಅಧಿಕಾರದಲ್ಲಿ ಇದ್ದು, ಜನಪರ ಕಾರ್ಯ ಮಾಡಲಿದೆ. ಸಚಿವ ಸ್ಥಾನ ನೀಡುವುದು ಮುಖ್ಯಮಂತ್ರಿಗಳ ವಿವೇಚನೆಗೆ ಬಿಟ್ಟಿದ್ದು ಎಂದರು.
ಒಂದು ವಾರ ಅಥವಾ 10 ದಿನದಲ್ಲಿ ಸಚಿವ ಸಂಪುಟ ವಿಸ್ತರಣೆ ಆಗಲಿದೆ ಎಂದು ಹೇಳಿದ ಅವರು, ಡಿಸಿಎಂ ಸವದಿ ಹಾಗೂ ಸಚಿವೆ ಜೊಲ್ಲೆ ತಮ್ಮ ಇಲಾಖೆಯ ಕೆಲಸಕ್ಕಾಗಿ ದೆಹಲಿಗೆ ಹೋಗಿದ್ದಾರೆ ಎಂದು ಕತ್ತಿ ತಿಳಿಸಿದರು. ಇದಕ್ಕೂ ಮೊದಲು ನೂತನವಾಗಿ ರಾಜ್ಯಸಭೆಗೆ ಆಯ್ಕೆಯಾದ ಈರಣ್ಣ ಕಡಾಡಿ ಅವರಿಗೆ ಶಾಸಕ ಉಮೇಶ್ ಕತ್ತಿ ಅವರು ಈಶ್ವರಲಿಂಗ ದೇವಸ್ಥಾನ ಕಮೀಟಿ ವತಿಯಿಂದ ಸತ್ಕರಿಸಿದರು.