Breaking News

ಅಂಗಡಿ ಮುಚ್ಚಿ ಎಂದ ಪೊಲೀಸ್ ಸಿಬ್ಬಂದಿ ಮೇಲೆಯೇ ಹಲ್ಲೆ ಮಾಡಿದ ಅಪ್ಪ-ಮಕ್ಕಳ ಬಂಧನ

Spread the love

ಹುಬ್ಬಳ್ಳಿ: ಲಾಕ್​ಡೌನ್​ ಸಂದರ್ಭದಲ್ಲಿ ನಿಗದಿತ ಸಮಯ ಮೀರಿಯೂ ತೆರೆದಿದ್ದ ಅಂಗಡಿಯನ್ನು ಮುಚ್ಚಿ ಎಂದಿದ್ದಕ್ಕೆ ಅಂಗಡಿ ಮಾಲೀಕ ಹಾಗೂ ಆತನ ಇಬ್ಬರು ಮಕ್ಕಳು ಸೇರಿ ಪೊಲೀಸ್ ಮೇಲೆಯೇ ಹಲ್ಲೆ ನಡೆಸಿದ್ದಾರೆ. ಇಂಥದ್ದೊಂದು ಪ್ರಕರಣ ಹುಬ್ಬಳ್ಳಿಯಲ್ಲಿ ಇಂದು ನಡೆದಿದೆ.

ಹುಬ್ಬಳ್ಳಿಯ ತಾರಿಹಾಳ ಗ್ರಾಮದಲ್ಲಿ ಈರಪ್ಪ ಹನುಮಸಾಗರ ಎಂಬವರು ಬೆಳಗ್ಗೆ 10 ಗಂಟೆ ಕಳೆದರೂ ಅಂಗಡಿಯನ್ನು ಮುಚ್ಚದೆ ತೆರೆದೇ ಇರಿಸಿದ್ದರು. ಸಮಯ ಮೀರಿದೆ, ಅಂಗಡಿಯನ್ನು ಮುಚ್ಚಿ ಎಂದು ಆ ಪ್ರದೇಶದಲ್ಲಿ ಕರ್ತವ್ಯದಲ್ಲಿದ್ದ ಪೊಲೀಸ್ ಕಾನ್​ಸ್ಟೆಬಲ್​ ಗಿರೀಶ್ ತಿಪ್ಪಣ್ಣವರ ಹೇಳಿದ್ದಾರೆ.

ಇದರಿಂದ ಸಿಟ್ಟಾದ ಈರಪ್ಪ ಪೊಲೀಸ್ ಪೇದೆಗೆ ಅಸಭ್ಯ ಪದಗಳಿಂದ ನಿಂದಿಸಿದ್ದಾರೆ. ಮಾತ್ರವಲ್ಲ ತಮ್ಮಿಬ್ಬರು ಪುತ್ರರೊಂದಿಗೆ ಪೊಲೀಸ್ ಮೇಲೆರಗಿ ಹಲ್ಲೆ ನಡೆಸಿ, ಸಮವಸ್ತ್ರ ಹರಿದು ಹಾಕಿದ್ದರು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಮೂವರೂ ಆರೋಪಿಗಳನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.


Spread the love

About Laxminews 24x7

Check Also

ದಾನವೀರ ಶರಣ ಸಿರಸಂಗಿ ಲಿಂಗರಾಜ ದೇಸಾಯಿ ಅವರ 165ನೇ ವರ್ಷದ ಜಯಂತ್ಯೋತ್ಸವ ಆಚರಣೆ

Spread the loveಸವದತ್ತಿ; ದಾನವೀರ ಶರಣ ಸಿರಸಂಗಿ ಲಿಂಗರಾಜ ದೇಸಾಯಿ ಅವರ 165ನೇ ವರ್ಷದ ಜಯಂತ್ಯೋತ್ಸವ ಆಚರಣೆ ಧಾರವಾಡದ ಮುರುಗಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ