Home / ಜಿಲ್ಲೆ / ಬೆಂಗಳೂರು / ಕೊರೊನಾ ಸೋಂಕಿಗೆ ಶಿಕ್ಷಕರು ಬಲಿಯಾಗುತ್ತಿದ್ದರೂ ಶಿಕ್ಷಕರ ಹಿತ ಕಾಯುವಲ್ಲಿ ಮುಂದಾಗದ ರಾಜ್ಯ ಸರ್ಕಾರ: ಹೊರಟ್ಟಿ ಆಕ್ರೋಶ

ಕೊರೊನಾ ಸೋಂಕಿಗೆ ಶಿಕ್ಷಕರು ಬಲಿಯಾಗುತ್ತಿದ್ದರೂ ಶಿಕ್ಷಕರ ಹಿತ ಕಾಯುವಲ್ಲಿ ಮುಂದಾಗದ ರಾಜ್ಯ ಸರ್ಕಾರ: ಹೊರಟ್ಟಿ ಆಕ್ರೋಶ

Spread the love

ಬೆಂಗಳೂರು: ಕೊರೊನಾ ಸೋಂಕಿಗೆ ಶಿಕ್ಷಕರು ಬಲಿಯಾಗುತ್ತಿದ್ದರೂ ಶಿಕ್ಷಕರ ಹಿತ ಕಾಯುವಲ್ಲಿ ಮುಂದಾಗದ ರಾಜ್ಯ ಸರ್ಕಾರ ನಿರ್ಲಕ್ಷಕ್ಕೆ ಕಿಡಿಕಾರಿರುವ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ, ಸಿಎಂ ಯಡಿಯೂರಪ್ಪನವರಿಗೆ ಪತ್ರ ಬರೆದಿದ್ದಾರೆ. ಇದೇ ವೇಳೆ ಶಿಕ್ಷಕರ ಸಂಕಷ್ಟ ಪರಿಹರಿಸುವ ನಿಟ್ಟಿನಲ್ಲಿ ಕೆಲ ಸಲಹೆ ನೀಡಿದ್ದಾರೆ.

ಮೊದಲಿನಿಂದಲೂ ಚುನಾವಣೆಗಳು, ಜನಗಣತಿ ಸೇರಿದಂತೆ ಎಲ್ಲ ಆಪತ್ತುಗಳ ಸಂದರ್ಭದಲ್ಲಿ ಸರಕಾರದ ಎಲ್ಲ ಕೆಲಸಗಳಿಗೂ ಶಿಕ್ಷಕರನ್ನು ತೊಡಗಿಸಿಕೊಳ್ಳಲಾಗುತ್ತಿದೆ. ಆದರೆ ಅಂತಹ ಕೆಲಸ ನಿರ್ವಹಣೆಯಲ್ಲಿ ಅವರಿಗೆ ಏನಾದರೂ ತೊಂದರೆ ಅನಾಹುತ ಸಂಭವಿಸಿದಲ್ಲಿ ಅವರಿಗೆ ನೀಡಬೇಕಾಗಿರುವ ಸುರಕ್ಷತೆ, ಆರೋಗ್ಯ ಸೌಲಭ್ಯ ಹಾಗೂ ಇತರೆ ಸೌಲತ್ತುಗಳನ್ನು ನೀಡುವಲ್ಲಿ ಸರಕಾರ ಆಸಕ್ತಿ ವಹಿಸದೇ ಇರುವುದು ವಿಷಾದದ ಸಂಗತಿ.

ಕಳೆದ ವರ್ಷ ಕೋವಿಡ್ ಸಾಂಕ್ರಾಮಿಕ ರೋಗ ಬಂದಾಗಿನಿಂದ ಶಿಕ್ಷಕರನ್ನು ಕೋವಿಡ್ ಸೋಂಕಿತರನ್ನು ಗುರುತಿಸುವ ಕಾರ್ಯಕ್ಕೆ, ಸರ್ವೆ ಕಾರ್ಯಕ್ಕೆ, ಆರೈಕೆ ಕೇಂದ್ರಗಳ ಉಸ್ತುವಾರಿಗೆ, ಚೆಕ್ ಪೋಸ್ಟಗಳಲ್ಲಿ, ಡಾಟಾ ಎಂಟ್ರಿ ಕಾರ್ಯಕ್ಕೆ ಹಾಗೂ ಜನ ಜಾಗೃತಿ ಕಾರ್ಯ ಸೇರಿದಂತೆ ಹಲವು ಕೆಲಸಗಳಿಗೆ ನಿಯೋಜಿಸಲಾಗುತ್ತಿದೆ. ಅಲ್ಲದೇ ಕೋವಿಡ್‍ನ ಭೀಕರತೆ ಮಧ್ಯೆ ಇತ್ತೀಚೆಗೆ ರಾಜ್ಯದಲ್ಲಿ ನಡೆದ ಲೋಕಸಭೆಯೂ ಸೇರಿದಂತೆ ವಿಧಾನ ಸಭೆಯ ಉಪಚುನಾವಣೆಗಳಿಗೆ ಚುನಾವಣಾ ಕಾರ್ಯ ಮತ್ತು ಬಿ.ಎಲ್.ಓ. ಕೆಲಸಕ್ಕೆ ಶಿಕ್ಷಕರನ್ನು ನಿಯೋಜಿಸಲಾಗಿತ್ತು.

ಈ ಉಪಚುನಾವಣಾ ಕಾರ್ಯದಲ್ಲಿ ತೊಡಗಿದ್ದ ಹಲವು ಶಿಕ್ಷಕರು ಸಂಪರ್ಕದ ಕಾರಣದಿಂದ ಕೋವಿಡ್ ಸೋಂಕಿತರಾಗಿ ತೀವ್ರವಾಗಿ ಅಸ್ವಸ್ಥರಾಗಿ ಬಳಲುತ್ತಿದ್ದಾರೆ. ಅವರಲ್ಲಿ ಹಲವು ಶಿಕ್ಷಕರು ಅಸುನೀಗಿದ ದಾರುಣ ಘಟನೆಯು ಜರುಗಿದೆ. ಅಲ್ಲದೇ ಬಸವ ಕಲ್ಯಾಣ ಉಪಚುನಾವಣೆಯಲ್ಲಿ ಚುನಾವಣಾ ಕಾರ್ಯಕ್ಕೆ ನಿಯೋಜನೆಗೊಂಡಿದ್ದ ಶಿಕ್ಷಕರ ಪೈಕಿ ಸುಮಾರು 55 ಜನ ಶಿಕ್ಷಕರು ಕೋವಿಡ್ ಸೋಂಕಿಗೆ ಒಳಗಾಗಿ ಮೃತಪಟ್ಟಿದ್ದಾರೆಂಬುದು ಅಂಕಿ ಅಂಶ ಸಮೇತ ತಿಳಿದು ಬಂದಿದ್ದು, ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ಸುಮಾರು 2 ಸಾವಿರಕ್ಕೂ ಹೆಚ್ಚು ಜನ ಶಿಕ್ಷಕರನ್ನು ಚುನಾವಣಾ ಕಾರ್ಯಕ್ಕೆ ನಿಯೋಜಿಸಲಾಗಿತ್ತು. ಅವರಲ್ಲಿ ಹಲವರಿಗೆ ಸೋಂಕು ತಗುಲಿದ್ದು ಸುಮಾರು 17 ಜನ ಮೃತಪಟ್ಟಿದ್ದಾರೆ. ಅಲ್ಲದೇ ಇಡೀ ಬೆಳಗಾವಿ ಜಿಲ್ಲೆಯಲ್ಲಿ ಇದುವರೆಗೆ 51 ಜನ ಶಿಕ್ಷಕರು ಕೋವಿಡ್‍ಗೆ ಬಲಿಯಾಗಿದ್ದಾರೆ. ಮಸ್ಕಿ ವಿಧಾನಸಭೆ ಉಪಚುನಾವಣೆಯಲ್ಲಿಯೂ ಶಿಕ್ಷಕರನ್ನು ನಿಯೋಜಿಸಲಾಗಿತ್ತು ಅವರಲ್ಲಿ ಸುಮಾರು ಜನ ಸೋಂಕಿಗೆ ತುತ್ತಾಗಿದ್ದು 9 ಜನ ಶಿಕ್ಷಕರು ಮೃತರಾಗಿದ್ದಾರೆ ಆದರೂ ಸರ್ಕಾರ ಶಿಕ್ಷಕರ ಬಗ್ಗೆ ಗಮನ ಹರಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ