Breaking News

ಸಿಎಂ ಬಿಎಸ್‌ವೈ ಸುದ್ದಿಗೋಷ್ಠಿ: ಲಾಕ್​ಡೌನ್ ವಿಸ್ತರಣೆ ಜೊತೆಗೆ ಪರಿಹಾರದ ಪ್ಯಾಕೇಜ್ ಘೋಷಣೆ ಸಾಧ್ಯತೆ

Spread the love

ಬೆಂಗಳೂರು, ಮೇ 19: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮೇ 19ರಂದು ಬೆಳಗ್ಗೆ 11.30ಕ್ಕೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಚಿವ ಸಂಪುಟದ ಹಿರಿಯ ಸಹದ್ಯೋಗಿಗಳೊಂದಿಗೆ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ.

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ರಾಜ್ಯದಲ್ಲಿ ಮೇ 24ರವರೆಗೆ ಜಾರಿಯಲ್ಲಿರುವ ಲಾಕ್‍ಡೌನ್ ಅನ್ನು ವಿಸ್ತರಣೆ ಮಾಡುವುದು ಹಾಗೂ ಆರ್ಥಿಕವಾಗಿ ದುರ್ಬಲವಾಗಿರುವ ವರ್ಗಗಳಿಗೆ ಪರಿಹಾರದ ಪ್ಯಾಕೇಜ್ ಘೋಷಣೆ ಮಾಡುವ ಸಾಧ್ಯತೆಗಳಿವೆ.

ಗ್ರಾಮೀಣ ಪ್ರದೇಶದಲ್ಲಿ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಮೇ 24ರ ಬೆಳಗ್ಗೆ 6 ಗಂಟೆಯವರೆಗೆ ಜಾರಿಯಲ್ಲಿರುವ ಲಾಕ್‍ಡೌನ್ ಅನ್ನು ಮೇ 31ರವರೆಗೆ ವಿಸ್ತರಿಸುವ ಸಾಧ್ಯತೆಗಳನ್ನು ಅಲ್ಲಗೆಳೆಯುವಂತಿಲ್ಲ.

ಬಡವರು, ಕೂಲಿ ಕಾರ್ಮಿಕರು ಹಾಗೂ ಶ್ರಮಿಕ ವರ್ಗದವರಿಗೆ ಸರಕಾರ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು ಎಂದು ಪ್ರತಿಪಕ್ಷಗಳು ಪಟ್ಟು ಹಿಡಿದಿವೆ. ಈ ಹಿನ್ನೆಲೆಯಲ್ಲಿ ಕೋವಿಡ್ ಮೊದಲ ಅಲೆ ಸಂದರ್ಭದಲ್ಲಿ ಸಮಾಜದ ವಿವಿಧ ಶ್ರಮಿಕ ವರ್ಗಗಳಿಗೆ ಆರ್ಥಿಕ ನೆರವನ್ನು ಘೋಷಿಸಿದ್ದ ಮಾದರಿಯಲ್ಲೆ ಈ ಬಾರಿಯೂ ಮುಖ್ಯಮಂತ್ರಿ ಪ್ಯಾಕೇಜ್ ಘೋಷಣೆ ಮಾಡುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ