Breaking News
Home / ಜಿಲ್ಲೆ / ಬೆಂಗಳೂರು / ಸ್ಮಶಾನ ಕಾರ್ಮಿಕರ ಬೇಡಿಕೆ ಈಡೇರಿಸುವಂತೆ ಸರ್ಕಾರಕ್ಕೆ ನಟ ಚೇತನ್ ಮನವಿ

ಸ್ಮಶಾನ ಕಾರ್ಮಿಕರ ಬೇಡಿಕೆ ಈಡೇರಿಸುವಂತೆ ಸರ್ಕಾರಕ್ಕೆ ನಟ ಚೇತನ್ ಮನವಿ

Spread the love

ಬೆಂಗಳೂರು: ದೇಶದಲ್ಲಿ ಕೋವಿಡ್ 2ನೇ ಅಲೆ ಸೃಷ್ಟಿಸಿರುವ ಭೀಕರ ಪರಿಸ್ಥಿತಿಗೆ ಜನರು ಅದ್ರಲ್ಲು ಬಡವರು ತತ್ತರಿಸಿಹೋಗಿದ್ದಾರೆ. ಒಂದೆಡೆ ಆಕ್ಸಿಜನ್ ಕೊರೆತ, ಬೆಡ್ ಕೊರತೆ ಮತ್ತೊಂದೆಡೆ , ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ , ಚಿಕಿತ್ಸೆಗೆ ಹಣವಿಲ್ಲದೇ ಪರದಾಡುವ ಸ್ಥಿತಿ ಇದೆ.. ದಿನೇ ದಿನೇ , ಸೋಂಕಿತರ ಸಂಖ್ಯೆ , ಸಾವಿನ ಸಂಖ್ಯೆ ಹೆಚ್ಚಾಗ್ತಲೇ ಇದೆ.. ಈ ನಡುವೆ ಸ್ಯಾಂಡಲ್ ವುಡ್ , ಬಾಲಿವುಡ್ , ಟಾಲಿವುಡ್ , ಕಾಲಿವುಡ್ ನ ಅನೇಕ ಸಿನಿಮಾ ತಾರೆಯರು ಬಡವರಿಗೆ , ಕೋವಿಡ್ ಸೋಂಕಿತರಿಗೆ ತಮಗೆ ತೋಚಿದ ಸಹಾಯಗಳನ್ನ ಮಾಡುತ್ತಿದ್ದಾರೆ. ಕಿಚ್ಚ ಸುದೀಪ್ , ಶ್ರೀಮುರುಳಿ, ರಾಗಿಣಿ, ಅಕ್ಷಯ್ ಕುಮಾರ್ , ಸಲ್ಮಾನ್ ಖಾನ್ , ಸೋನು ಸೂದ್ , ಹೀಗೆ ಹಲವರು ಕಷ್ಟದ ಸಂದರ್ಭದಲ್ಲಿ ಸಹಾಯಾಸ್ತ ಚಾಚಿದ್ದಾರೆ.

ಇನ್ನೂ ಕೋವಿಡ್ ಮುಂಚೆಯಿಂದಲೂ ಸಮಾಜಮುಖಿ ಕೆಲಸಗಳಲ್ಲಿಯೇ ತಮ್ಮನ್ನ ತಾವು ತೊಡಗಿಸಿಕೊಂಡಿರುವ ಆದಿನಗಳು ಚೇತನ್ ಇದೀಗ ಸ್ಮಶಾನ ಕಾರ್ಮಿಕರ ಪರ ಕೆಲ ಬೇಡಿಕೆಗಳನ್ನ ಈಡೇರಿಸುವಂತೆ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಕೊರೊನಾ ವೈರಸ್ ಸಂಕಷ್ಟದ ಸಮಯದಲ್ಲಿ ಸ್ಮಶಾನ ಕಾರ್ಮಿಕರು ಸಹ ಕೋವಿಡ್ ವಾರಿಯರ್ಗಳಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ರಾತ್ರಿ-ಹಗಲು ಚಿತಗಾರ ಹಾಗೂ ಸ್ಮಶಾನಗಳಲ್ಲಿ ಕೆಲಸ ಮಾಡುವ ಮೂಲಕ ಬಿಕ್ಕಟ್ಟಿನ ಸಂದರ್ಭದಲ್ಲಿ ಸರ್ಕಾರಕ್ಕೆ ಜೊತೆಯಾಗಿದ್ದಾರೆ.
ಇಂತಹ ಸ್ಮಶಾನ ಕಾರ್ಮಿಕರ ತಕ್ಷಣದ ಮತ್ತು ದೀರ್ಘಕಾಲದ ಬೇಡಿಕೆಗಳನ್ನು ಅನುಷ್ಠಾನಗೊಳಿಸಬೇಕು ಎಂದು ಮುಖ್ಯಮಂತ್ರಿ ಹಾಗೂ ಸಮಾಜಕಲ್ಯಾಣ ಸಚಿವರಿಗೆ ಪತ್ರದ ಮುಖಾಂತರ ಚೇತನ್ ಮನವಿ ಮಾಡಿದ್ದಾರೆ.

ಕರ್ನಾಟಕದಾದ್ಯಂತ ಸ್ಮಶಾನ ಕಾರ್ಮಿಕರು ಈ ಘೋರ ಬಿಕ್ಕಟ್ಟಿನ ಸಂದರ್ಭದಲ್ಲಿ ನಮ್ಮ ರಾಜ್ಯದ ಜನರಿಗೆ ಮುಂಚೂಣಿಯ ಕೋವಿಡ್ ಯೋಧರಾಗಿ ದಣಿವರಿಯದೆ ಮತ್ತು ನಿಸ್ವಾರ್ಥವಾಗಿ ಕೆಲಸ ಮಾಡುತ್ತಿದ್ದಾರೆ. ಈ ಸ್ಮಶಾನ ಕಾರ್ಮಿಕರು ತಲೆಮಾರುಗಳಿಂದ ನಮ್ಮ ಸಮಾಜದ ಸಾಮಾಜಿಕ ಮತ್ತು ಆರ್ಥಿಕವಾಗಿ ಅಳಿವಿನಂಚಿನಲ್ಲಿರುವ ಸದಸ್ಯರು. ಈ ಸಾಂಕ್ರಾಮಿಕ ರೋಗ ಹರಡುತ್ತಿರುವ ಸಮಯದಲ್ಲಿ ಅಸಾಧಾರಣ ವೈದ್ಯಕೀಯ ಅಪಾಯಗಳನ್ನು ಎದುರಿಸುತ್ತಿದ್ದಾರೆ. ದುರಾದೃಷ್ಟವಶಾತ್, ಅವರ ತಕ್ಷಣದ ಮತ್ತು ದೀರ್ಘಕಾಲದ ಅಗತ್ಯಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಸರ್ಕಾರಗಳು ಸತತವಾಗಿ ನಿರ್ಲಕ್ಷ್ಯಿಸಿದೆ. ನಮ್ಮ ಸ್ಮಶಾನ ಕಾರ್ಮಿಕರಿಗೆ ಹೆಚ್ಚು ಅಗತ್ಯವಿರುವ ಈ ಬೇಡಿಕೆಗಳನ್ನು ನೀವು ವಾಸ್ತವಿಕಗೊಳಿಸಬೇಕೆಂದು ನಾವು ಕೇಳುತ್ತೇವೆ.

ಎಲ್ಲಾ ಸ್ಮಶಾನ/ಶವಗಾರ ಕಾರ್ಮಿಕರಿಗೆ ತಕ್ಷಣದ ಅಗತ್ಯೆಗಳು, ವೈದ್ಯಕೀಯ ವಿಮೆ, ಕೋವಿಡ್ ಸಂತ್ರಸ್ಥರಿಗೆ ಆದ್ಯತೆಯ ಆಸ್ಪತ್ರೆಯ ಹಾಸಿಗೆ ಹಂಚಿಕೆ, ಆದ್ಯತೆಯ ವ್ಯಾಕ್ಸಿನೇಷನ್, ಈಗಾಗಲೇ ಒದಗಿಸಿರುವ ಪಿಪಿಇ ಕಿಟ್ಗಳ ಜೊತೆಗೆ ಕೈಗವಸುಗಳು ಮತ್ತು ಮುಖವಾಡಗಳು, ತಮ್ಮ ಕೆಲಸದ ಅವಧಿಗಿಂತ ಹೆಚ್ಚು ಸಮಯ ಕೆಲಸ ಮಾಡಿದರೆ ಅದಕ್ಕೆ ಅವರ ಪಾವತಿಯನ್ನು ಹೆಚ್ಚಿಸಬೇಕು, ಕೆಲಸದ ಹೊರೆ ಹೆಚ್ಚಿಗೆಯಾದ ಕಾಅರಣ ಅವರನ್ನು ಸಹಾಯ ಮಾಡಲು ಉದ್ಯೋಗಿಗಳ ಸಂಖ್ಯೆಯನ್ನು ಹೆಚ್ಚಿಸಬೇಕು, ಎಲ್ಲಾ ಸ್ಮಶಾನ ಕಾರ್ಮಿಕರಿಗೆ ಶಾಶ್ವತ ಪರಿಹಾರಗಳು, 4ನೇ ದರ್ಜೆಯ, ಡಿ-ಗ್ರೂಪ್ ಸರ್ಕಾರಿ ನೌಕರರಾಗಿ ಶಾಶ್ವತ ಉದ್ಯೋಗ ಕಲ್ಪಿಸಬೇಕು, ಇಎಸ್ ಐ ಮತ್ತು ಪಿಎಪ್ ಗೆ ಅವಕಾಶ ಕಲ್ಪಿಸಿಕೊಡಬೇಕು. ಸ್ಮಶಾನ/ಶವಾಗರದ ಆವರಣದ ಹೊರಗೆ ವಸತಿ ಕಲ್ಪಿಸಬೇಕು. ಕೆಲಸದ ಸಮಯವನ್ನು 8 ಗಂಟೆಗಳ ಶಿಫ್ಟ್ಗಳಿಗೆ ಸೀಮಿತಗೊಳಿಸಬೇಕು. ಸ್ಮಶಾನ ಕಾರ್ಮಿಕರ ಮಕ್ಕಳಿಗೆ ಗುಣಮಟ್ಟದ ಶಾಲೆಗಳಲ್ಲಿ ಉಚಿತ ಶಿಕ್ಷಣ ನೀಡಬೇಕು. ಎಲ್ಲಾ ಧಾರ್ಮಿಕ ಸಮುದಾಯಗಳ (ಹಿಂದೂ, ಮುಸ್ಲಿಂ ಕ್ರಿಶ್ಚಿಯನ್, ಇತರೆ) ಸ್ಮಶಾನ ಕಾರ್ಮಿಕರಿಗೆ ಸರ್ಕಾರದ ಸೌಲಭ್ಯಗಳು ದೊರೆಯಬೇಕು. ಸ್ಮಶಾನ ಕಾರ್ಮಿಕರಿಗೆ ನಿರ್ದಿಷ್ಟವಾದ ಸಾಮಾಜಿಕ ಮತ್ತು ಶೈಕ್ಷಣಿಕೆ ಉನ್ನತಿಗಾಗಿ ಹೊಸ ನೀತಿಗಳನ್ನು ಅನುಷ್ಠಾನಗೊಳಿಸಬೇಕು ಸೇರಿ ಇನ್ನೂ ಹಲವು ಬೇಡಿಕೆಗಳ ಈಡೇರಿಸುವಂತೆ ಮನವಿ ಮಾಡಿಕೊಂಡಿದ್ದಾರೆ.

ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ