ಬೆಂಗಳೂರು : ಕೊರೊನಾ ವೈರಸ್ ಇದೀಗ ಗ್ರಾಮೀಣ ಪ್ರದೇಶಗಳಲ್ಲೂ ತನ್ನ ಕಬಂದ ಬಾಹುಗಳನ್ನು ಚಾಚಿದೆ.
ಈ ಹಿನ್ನೆಲೆಯಲ್ಲಿ ಕೋವಿಡ್ ನಿರ್ವಹಣೆಗೆ ರಾಜ್ಯದ ಪ್ರತಿ ಗ್ರಾಮ ಪಂಚಾಯಿತಿಗಳಿಗೆ ಹಣ ನೀಡುವುದಾಗಿ ಸಿಎಂ ಬಿ.ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸುತ್ತಿರುವ ಅವರು, ಕೋವಿಡ್ ನಿರ್ವಹಣೆಗೆ ಗ್ರಾ.ಪಂ ಗಳಿಗೆ ಹಣ ನೀಡುವುದಾಗಿ ತಿಳಿಸಿದರು.
ಗ್ರಾಮ ಪಂಚಾಯಿತಿಗಳಿವೆ 50,000 ಮುಂಗಡ ಹಣ ಪಾವತಿ ಮಾಡಲಾಗುವುದು. ಇದರಿಂದ 6 ಸಾವಿರ ಗ್ರಾ.ಪಂ ಗಳಿಗೆ ಲಾಭವಾಗಲಿದೆ ಎಂದು ವಿವರಸಿದರು.
ಎಪಿಎಲ್ ಕಾರ್ಡ್ ದಾರರಿಗೆ ಕೆಜಿ 15 ರೂ.ಯಂತೆ ಅಕ್ಕಿ ನೀಡುವುದಾಗಿ ತಿಳಿಸಿದ್ದಾರೆ. ಜೊತೆಗೆ ಶಿಕ್ಷಕರು, ಸಿಲಿಂಡರ್ ಡಿಲಿವರಿ ಬಾಯ್ಸ್, ಲೈನ್ ಮೆನ್ ಗಳನ್ನು ಫ್ರಂಟ್ ಲೈನ್ ವಾರಿಯರ್ಸ್ ಎಂದು ಪರಿಗಣಿಸಲಾಗುವುದು.
ಇವರಿಗೆ ಆದ್ಯತೆ ಮೇರೆಗೆ ಕೊರೊನಾ ಲಸಿಕೆ ಹಾಕಲಾಗುವುದು ಎಂದು ತಿಳಿಸಿದ್ದಾರೆ.