Breaking News

24 ರ ನಂತರ ಲಾಕ್ ಡೌನ್ ವಿಸ್ತರಣೆ ಬಗ್ಗೆ ಸಿಎಂ ಹೇಳಿದ್ದು ಇದು

Spread the love

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಮೇ.24ರ ನಂತ್ರ ಕೊರೋನಾ ನಿಯಂತ್ರಣಕ್ಕಾಗಿ ಲಾಕ್ ಡೌನ್ ವಿಸ್ತರಣೆ ಕುರಿತಂತೆ ಅಂದೇ ನಿರ್ಧಾರ ಪ್ರಕಟಿಸೋದಾಗಿ ಸಿಎಂ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.

ಈ ಕುರಿತಂತೆ ಸಚಿವರೊಂದಿಗೆ ಸಭೆ ನಡೆಸಿದ ಬಳಿಕ, ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, ಕೋವಿಡ್ 19 ಸಾಂಕ್ರಾಮಿಕ 2ನೇ ಅಲೆಯ ತೀವ್ರತೆಯಿಂದಾಗಿ ಹೆಚ್ಚುತ್ತಿರುವಂತ ಸೋಂಕಿತರ ಸಂಖ್ಯೆ ನಿಯಂತ್ರಿಸುವ ಸಲುವಾಗಿ ಮೇ.24ರವರೆಗೆ ವಾಣಿಜ್ಯ ಮತ್ತು ಇತರೆ ಚಟುವಟಿಕೆಗಳಿಗೆ ನಿರ್ಬಂಧ ವಿಧಿಸೋದು ಅನಿವಾರ್ಯವಾಗಿತ್ತು. ಈ ನಿರ್ಬಂಧದ ನಡುವೆಯು ಕೆಲವು ಸೇವೆಗೆ ಅವಕಾಶ ಕಲ್ಪಿಸಲಾಗಿತ್ತು. ಬೆಳಿಗ್ಗೆ 6-10ರವರೆಗೆ ದಿನಸಿ, ಹೂ, ತರಕಾರಿ, ಹಾಲು ಖರೀದಿಗೆ ಅವಕಾಶ ಮಾಡಿಕೊಡಲಾಗಿತ್ತು. ಕೊರೋನಾ ತಂದ ಬಿಕ್ಕಟ್ಟಿನಿಂದಾಗಿ ವಾಣಿಜ್ಯ ಚಟುವಟಿಕೆ ನಿರ್ಬಂಧಿಸಲಾಗಿತ್ತು ಎಂದರು.

ಮೇ.24ರ ನಂತ್ರ ಲಾಕ್ ಡೌನ್ ವಿಸ್ತರಣೆ ಬಗ್ಗೆ, ಮೇ.24ರಂದೇ ಚರ್ಚಿಸಿ, ತೀರ್ಮಾನ ಕೈಗೊಳ್ಳಲಾಗುತ್ತದೆ. ಸದ್ಯಕ್ಕೆ ಇಂದು ಯಾವುದೇ ನಿರ್ಧಾರವನ್ನು ಕೈಗೊಂಡಿಲ್ಲ ಎಂಬುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದರು.


Spread the love

About Laxminews 24x7

Check Also

ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಇಲ್ಲಿನ ತಾಲೂಕು ಆಡಳಿತಗಳು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿವೆ.

Spread the loveಶಿವಮೊಗ್ಗ/ಉತ್ತರಕನ್ನಡ: ರಾಜ್ಯದ ಮಲೆನಾಡು ಭಾಗದ ಹಲವೆಡೆ ಮತ್ತೆ ಮಳೆಯ ಆರ್ಭಟ ಮುಂದುವರೆದಿದೆ. ಭಾರಿ ವರ್ಷಧಾರೆ ಹಿನ್ನೆಲೆಯಲ್ಲಿ ಶಿವಮೊಗ್ಗ ಹಾಗೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ