Breaking News

ಒಂದೇ ದಿನದಲ್ಲಿ 50 ಸಾವಿರಕ್ಕೂ ಅಧಿಕ ಮಂದಿಗೆ ಸೋಂಕು – 10 ಲಕ್ಷ ಮಂದಿ ಕೊರೊನಾದಿಂದ ಗುಣಮುಖ

Spread the love

ನವದೆಹಲಿ: ಕಳೆದ 24 ಗಂಟೆಯಲ್ಲಿ ದೇಶದ 52,123 ಮಂದಿಯಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಈವರೆಗಿನ ಎಲ್ಲ ದಾಖಲೆಗಳನ್ನು ಪುಡಿಗಟ್ಟಿದೆ.

ಇದೇ ಮೊದಲು ಬಾರಿಗೆ ಒಂದೇ ದಿನಕ್ಕೆ ಐವತ್ತು ಸಾವಿರ ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು, ನಿನ್ನೆ 775 ಮಂದಿ ಸಾವನ್ನಪ್ಪಿದ್ದಾರೆ. ಸದ್ಯ ದೇಶದಲ್ಲಿ ಕೊರೊನಾ ಪೀಡಿತರ ಸಂಖ್ಯೆ 15,83,792ಕ್ಕೆ ಏರಿಕೆಯಾಗಿದ್ದು, ಕೊರೊನಾದಿಂದ ಸಾವನ್ನಪ್ಪಿದವರ ಸಂಖ್ಯೆ 34,968ಕ್ಕೆ ಏರಿದೆ. ಸದ್ಯ 5,28,242 ಮಂದಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ

.ದಾಖಲೆಯ ಸೋಂಕಿತರ ಏರಿಕೆಯ ನಡುವೆ ಕೊರೊನಾದಿಂದ ಚೇತರಿಸಿಕೊಂಡವರ ಸಂಖ್ಯೆ 10,20,582ಕ್ಕೆ ಏರಿದ್ದು, 64-65% ಮಂದಿ ಕೊರೊನಾದಿಂದ ಗುಣಮುಖವಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆಯಿಂದ ಮಾಹಿತಿ ನೀಡಿದೆ. ಬುಧವಾರ ಒಂದೇ ದಿನ 4,46,642 ಮಂದಿಗೆ ಕೊರೊನಾ ಟೆಸ್ಟ್ ಮಾಡಿದ್ದು, ಈವರೆಗೂ ದೇಶದಲ್ಲಿ 1,81,90,382 ಪರೀಕ್ಷೆಗಳನ್ನು ನಡೆಸಿದೆ ಎಂದು ಐಸಿಎಂಆರ್ ಹೇಳಿಕೊಂಡಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ