Breaking News
Home / ರಾಜ್ಯ / ಮೇ 25ರವರೆಗೆ ಹಾವೇರಿ ಜಿಲ್ಲೆಯಲ್ಲಿ ಸಂಪೂರ್ಣ ಲಾಕ್‌ಡೌನ್

ಮೇ 25ರವರೆಗೆ ಹಾವೇರಿ ಜಿಲ್ಲೆಯಲ್ಲಿ ಸಂಪೂರ್ಣ ಲಾಕ್‌ಡೌನ್

Spread the love

ಹಾವೇರಿ, ಮೇ 20: ಏಲಕ್ಕಿ ನಾಡು ಹಾವೇರಿಯಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಕಾರಣದಿಂದಾಗಿ ಕಠಿಣ ಲಾಕ್‌ಡೌನ್‌ಗೆ ಹಾವೇರಿ ಜಿಲ್ಲಾಡಳಿತ ಮುಂದಾಗಿದೆ.

ಜಿಲ್ಲಾದ್ಯಂತ ಕೋವಿಡ್ ಎರಡನೇ ಅಲೆ ನಿಯಂತ್ರಿಸುವ ಸಲುವಾಗಿ ಈ ಕುರಿತು ಆದೇಶ ಹೊರಡಿಸಿರುವ ಹಾವೇರಿ ಜಿಲ್ಲಾಧಿಕಾರಿ ಎಸ್.ಬಿ ಶೆಟ್ಟೆಣ್ಣನವರ ಅವರು ಇದೇ ಮೇ 21ರಿಂದ ಮೇ 25ರ ತನಕ ಹಾವೇರಿ ಜಿಲ್ಲೆಯಲ್ಲಿ ಎರಡು ಹಂತದಲ್ಲಿ ಸಂಪೂರ್ಣ ಲಾಕ್‌ಡೌನ್‌ ಜಾರಿಗೆ ತರಲಾಗಿದೆ ಎಂದು ತಿಳಿಸಿದ್ದಾರೆ.

ಮೊದಲ ಹಂತದಲ್ಲಿ ಮೇ 21ರ ಬೆಳಿಗ್ಗೆ 6 ಗಂಟೆಯಿಂದ ಮೇ 23ರ ಬೆಳಿಗ್ಗೆ 6ರವರೆಗೆ ಅಗತ್ಯ ವಸ್ತುಗಳಾದ ಹಾಲು, ಔಷಧ, ಆಂಬ್ಯುಲೆನ್ಸ್ ಸೇವೆ ಹೊರತುಪಡಿಸಿ ಎಲ್ಲ ಚಟುವಟಿಕೆಗಳನ್ನು ನಿಷೇಧಿಸಲಾಗಿದೆ.

ಎರಡನೇ ಹಂತದಲ್ಲಿ ಮೇ 23ರ ಬೆಳಿಗ್ಗೆ 6ರಿಂದ ಬೆಳಿಗ್ಗೆ 10ರವರೆಗೆ ಸರ್ಕಾರದ ಕೋವಿಡ್ ಮಾರ್ಗಸೂಚಿಯಂತೆ ದಿನಸಿ ಸೇರಿದಂತೆ ಅಗತ್ಯ ವಸ್ತುಗಳ ಖರೀದಿಗೆ ವಿನಾಯಿತಿ ನೀಡಲಾಗಿದೆ. ಇದನ್ನು ಹೊರತುಪಡಿಸಿ ಹಾವೇರಿ ಜಿಲ್ಲೆ ಕಂಪ್ಲೀಟ್ ಲಾಕ್ ಆಗಲಿದ್ದು, ತುರ್ತು ಮೆಡಿಕಲ್ ಸೇವೆ ಹೊರತುಪಡಿಸಿ, ವಾಹನ ಸಂಚಾರ ಹಾಗೂ ಜನ ಸೇರುವುದನ್ನು ಸಂಪೂರ್ಣ ಬಂದ್ ಮಾಡಲಾಗಿದೆ.

ರಾಜ್ಯದಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚುತ್ತಿದ್ದು, ಕಡಿಮೆಯಾಗುವ ಯಾವುದೇ ಲಕ್ಷಣಗಳು ಕಂಡುಬರುತ್ತಿಲ್ಲ. ಕೊರೊನಾ ವೈರಸ್ ಚೈನ್ ಲಿಂಕ್ ಕಟ್ ಆಗುವವರೆಗೆ ಇದಕ್ಕೆ ಪರಿಹಾರವಿಲ್ಲ ಎಂಬಂತಾಗಿದೆ.

ಕರ್ನಾಟಕದ ಕೋವಿಡ್ ಪರಿಸ್ಥಿತಿ ತಿಳಿದುಕೊಳ್ಳಲು ಪ್ರಧಾನಿ ನರೇಂದ್ರ ಮೋದಿಯೇ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ್ದರು. ಆಗ ಜಿಲ್ಲಾಧಿಕಾರಿಗಳೇ ಕೋವಿಡ್ ನಿಯಂತ್ರಿಸುವಲ್ಲಿ ಪ್ರಮುಖ ಪಾತ್ರ ವಹಿಸಬೇಕು ಎಂದು ಹೇಳಿದ್ದರು.

ಇದರ ಪರಿಣಾಮವಾಗಿ ರಾಜ್ಯ ಸರ್ಕಾರವು ಆಯಾ ಜಿಲ್ಲಾಧಿಕಾರಿಗಳಿಗೆ ಹೆಚ್ಚಿನ ಅಧಿಕಾರ ನೀಡಿದ್ದು, ಕೊರೊನಾ ಸೋಂಕು ನಿಯಂತ್ರಿಸುವಲ್ಲಿ ಯಾವ ಕ್ರಮ ಬೇಕೋ ಅದನ್ನು ತೆಗೆದುಕೊಳ್ಳಿ ಎಂದು ಸೂಚಿಸಿದೆ.

ಹಾಗಾಗಿ ಈಗಾಗಲೇ ಹಲವು ಜಿಲ್ಲಾಧಿಕಾರಿಗಳು ತಮ್ಮ ಜಿಲ್ಲೆ ವ್ಯಾಪ್ತಿಯಲ್ಲಿ 4ರಿಂದ 5 ದಿನಗಳ ಸಂಪೂರ್ಣ ಲಾಕ್‌ಡೌನ್ ಮಾಡಲು ಆದೇಶ ಹೊರಡಿಸಿದ್ದಾರೆ.


Spread the love

About Laxminews 24x7

Check Also

ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ.: ಲಕ್ಷ್ಮೀ ಹೆಬ್ಬಾಳ್ಕರ್

Spread the love ಬೆಳಗಾವಿ: ರಾಜ್ಯದ ರಾಜಕಾರಣ, ದೇಶದ ರಾಜಕಾರಣ ತಲೆ ತಗ್ಗಿಸುವ ಘಟನೆಯಿದು. ನಾಗರಿಕ ಸಮಾಜ ತಲೆ ತಗ್ಗಿಸುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ