Breaking News

ಸಿ ಟಿ ರವಿ ವಿರುದ್ದ ಕಾಂಗ್ರೆಸ್‌ ನಿಂದ ಪೋಲೀಸ್‌ ದೂರು

Spread the love

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ಕಾಂಗ್ರೆಸ್‌ ವಿರುದ್ಧ ಆಧಾರರಹಿತ ಆರೋಪ ಮಾಡಿದ್ದು, ಅವರ ವಿರುದ್ಧ ಕೂಡಲೇ ಪ್ರಕರಣ ದಾಖಲಿಸುವಂತೆ ಒತ್ತಾಯಿಸಿ ಹನುಮಂತ ನಗರ ಬ್ಲಾಕ್ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಸಿ.ತೇಜೇಶ್ ಕುಮಾರ್ ಹೈಗ್ರೌಂಡ್ಸ್‌ ಠಾಣೆಗೆ ದೂರು ನೀಡಿದ್ದಾರೆ.

‘ಸಿ.ಟಿ.ರವಿ ಅವರು ಕೊರೊನಾ ವಿಚಾರವನ್ನು ಪ್ರಸ್ತಾಪಿಸಿ, ಕಾಂಗ್ರೆಸ್‌ ಪಕ್ಷದ ವಿರುದ್ಧ ಹಲವು ಸುಳ್ಳು ಆರೋಪಗಳನ್ನು ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ಸರ್ಕಾರದ ವಿರುದ್ಧ ಅಪಪ್ರಚಾರ ಮಾಡಲು ಟೂಲ್‌ಕಿಟ್ ರೂಪಿಸಿದೆ’ ಎಂಬ ಗಂಭೀರ ಆರೋಪ ಮಾಡಿದ್ದಾರೆ”ಇಡೀ ದೇಶ ಕೊರೊನಾದಿಂದ ತತ್ತರಿಸುತ್ತಿರುವಾಗ ಜನರಿಗೆ ಸುಳ್ಳು ಸಂದೇಶ ರವಾನಿಸಿ, ಅವರಲ್ಲಿ ಭಯ ಹುಟ್ಟಿಸುವಂತಹ ಹೇಳಿಕೆಗಳನ್ನು ನೀಡುತ್ತಿರುವ ರವಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಪತ್ರದಲ್ಲಿ ತಿಳಿಸಿದ್ದಾರೆ. ‘ಕೊರೊನಾ ಸೋಂಕಿತರಿಗೆ ಆಸ್ಪತ್ರೆಗಳಲ್ಲಿ ಹಾಸಿಗೆಗಳನ್ನು ಬ್ಲಾಕ್‌ ಮಾಡಿಸಿ, ಬೇರೆಯವರಿಗೆ ನೀಡುತ್ತಿದ್ದಾರೆ’ ಎಂದೂ ಸಿ.ಟಿ.ರವಿ ಹಾಗೂ ಸಂಸದ ತೇಜಸ್ವಿ ಸೂರ್ಯ ಅವರು ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ. ಇಬ್ಬರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ, ಅವರನ್ನು ಬಂಧಿಸಬೇಕು’ ಎಂದು ದೂರು ನೀಡಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ