Breaking News
Home / Uncategorized / ಆಗಸ್ಟ್‌ 31ರ ವರೆಗೆಮಹಾರಾಷ್ಟ್ರ ಸರ್ಕಾರ ರಾಜ್ಯಾದ್ಯಂತ ಲಾಕ್‌ಡೌನ್‌ಘೋಷಿಸಿದೆ.

ಆಗಸ್ಟ್‌ 31ರ ವರೆಗೆಮಹಾರಾಷ್ಟ್ರ ಸರ್ಕಾರ ರಾಜ್ಯಾದ್ಯಂತ ಲಾಕ್‌ಡೌನ್‌ಘೋಷಿಸಿದೆ.

Spread the love

ಮುಂಬೈ: ದೇಶದ ಆರ್ಥಿಕ ರಾಜಧಾನಿ ಮುಂಬೈನಲ್ಲಿ ಕೊರೋನಾ ಪ್ರಕರಣಗಳು ಊಹೆಗೂ ನಿಲುಕದಷ್ಟು ಏರುತ್ತಲೇ ಇದೆ. ಎಷ್ಟೇ ಪ್ರಯತ್ನಿಸಿದರೂ ಸೋಂಕು ಹರಡದಂತೆ ಪರಿಸ್ಥಿತಿಯನ್ನು ನಿಯಂತ್ರಿಸುವುದು ಅಸಾಧ್ಯವಾಗುತ್ತಿದೆ.
ಹೀಗಾಗಿ ಮಹಾರಾಷ್ಟ್ರ ಸರ್ಕಾರ ಆಗಸ್ಟ್‌ 31ರ ವರೆಗೆ ರಾಜ್ಯಾದ್ಯಂತ ಲಾಕ್‌ಡೌನ್‌ ಅನ್ನು ವಿಸ್ತರಿಸುತ್ತಿರುವುದಾಗಿ ಘೋಷಿಸಿದೆ. ಮಹಾರಾಷ್ಟ್ರದಲ್ಲಿ ಪ್ರಸ್ತುತ 4 ಲಕ್ಷ ಸೋಂಕಿತರಿದ್ದು ಭಾರತದಲ್ಲೇ ಅತ್ಯಧಿಕ ಸೋಂಕಿತರನ್ನು ಹೊಂದಿರುವ ರಾಜ್ಯ ಎಂಬ ಕುಖ್ಯಾತಿಗೆ ಒಳಗಾಗಿದೆ.ಈ ಕುರಿತು ಸ್ಪಷ್ಟನೆ ನೀಡಿರುವ ಸರ್ಕಾರದ ಮುಖ್ಯ ಕಾರ್ಯದರ್ಶಿ ಸಂಜಯ್‌ ಕುಮಾರ್‌, ಕೊರೋನಾ ಸೋಂಕನ್ನು ನಿಯಂತ್ರಿಸುವ ಸಲುವಾಗಿ ಆಗಸ್ಟ್‌ 31ರ ವರೆಗೆ ರಾಜ್ಯದಲ್ಲಿ ಲಾಕ್‌ಡೌನ್‌ ಷೋಷಿಸಿ ಅಧಿಸೂಚನೆ ಹೊರಡಿಸಲಾಗಿದೆ ಎಂದು ತಿಳಿಸಿದ್ದಾರೆ.
ಆದಾಗ್ಯೂ ಲಾಕ್‌ಡೌನ್‌ ಉಪಕ್ರಮದ ಭಾಗವಾಗಿ ಚಿತ್ರಮಂದಿರಗಳು, ಹೋಟೆಲ್‌ಗಳು, ನ್ಯಾಯಾಲಯಗಳು, ರೆಸ್ಟೋರೆಂಟ್‌ಗಳಿಲ್ಲದ ಮಾಲ್‌ಗಳು ಮತ್ತು ಮಾರುಕಟ್ಟೆ ಸಂಕೀರ್ಣಗಳು ಆಗಸ್ಟ್ 5 ರಿಂದ ಬೆಳಿಗ್ಗೆ 9 ರಿಂದ ಸಂಜೆ 7 ರವರೆಗೆ ಕಾರ್ಯನಿರ್ವಹಿಸಲಿವೆ ಎಂದು ಅಧಿಸೂಚನೆಯಲ್ಲಿ ತಿಳಿಸಿದೆ.
ಶಾಪಿಂಗ್ ಮತ್ತು ಹೊರಾಂಗಣ ವ್ಯಾಯಾಮದಂತಹ ಅನಿವಾರ್ಯವಲ್ಲದ ಚಟುವಟಿಕೆಗಳ ಉದ್ದೇಶಕ್ಕಾಗಿ ವ್ಯಕ್ತಿಗಳ ಸಾರ್ವಜನಿಕ ಪ್ರವೇಶವನ್ನು ನಿಷೇಧಿಸಲಾಗಿದೆ. ಇದಲ್ಲದೆ ಕೆಲಸದ ಸ್ಥಳಕ್ಕೆ ಚಲಿಸಲು ಮತ್ತು ವೈದ್ಯಕೀಯ ಕಾರಣಗಳಿಗಾಗಿ ಮಾತ್ರ ಮನೆಯಿಂದ ಹೊರಬರುಲು ಸೂಚಿಸಲಾಗಿದೆ. ಈ ವೇಳೆ ಕಡ್ಡಾಯವಾಗಿ ಮಾಸ್ಕ್‌ ಧರಿಸಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಇದಲ್ಲದೆ, ದೊಡ್ಡ ಮಟ್ಟ ಸಾರ್ವಜನಿಕ ಸಭೆ-ಸಮಾರಂಭಗಳನ್ನು ನಿಷೇಧಿಸಲಾಗಿದೆ. ಮದುವೆಗೆ ಹಾಗೂ ಯಾವುದೇ ವ್ಯಕ್ತಿಯ ಅಂತ್ಯಕ್ರಿಯೆಗೆ ಗರಿಷ್ಠ 50ಕ್ಕಿಂತ ಹೆಚ್ಚು ಜನ ಸೇರುವಂತಿಲ್ಲ ಮತ್ತು ಕಡ್ಡಾಯವಾಗಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು ಎಂದು ಸೂಚಿಸಲಾಗಿದೆ.
ಬುಧವಾರ ಮಹಾರಾಷ್ಟ್ರದಲ್ಲಿ 9,211 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, ಕೋವಿಡ್ -19 ಪ್ರಕರಣಗಳ ಸಂಖ್ಯೆ 4,00,651 ಕ್ಕೆ ತಲುಪಿದೆ. ಅಲ್ಲದೆ, ಸಾವಿನ ಸಂಖ್ಯೆ 14,463 ಕ್ಕೆ ಏರಿದ್ದು, ಬುಧವಾರ ಮಾತ್ರ 298 ರೋಗಿಗಳು ಸಾವನ್ನಪ್ಪಿದ್ದಾರೆ. ಈ ಪೈಕಿ 60 ಜನ ಮುಂಬೈ ನಿವಾಸಿಗಳು ಎಂಬುದು ಉಲ್ಲೇಖಾರ್ಹ.

Spread the love

About Laxminews 24x7

Check Also

ಧಾರವಾಡ ಕ್ಷೇತ್ರದ ಅಭ್ಯರ್ಥಿ ಬದಲಿಸುವಂತೆ ಸ್ವಾಮೀಜಿಗಳ ಒತ್ತಾಯ: ತಪ್ಪಾಗಿದ್ದರೆ ಕ್ಷಮೆ ಕೇಳಲು ಸಿದ್ಧ ಎಂದ ಪ್ರಹ್ಲಾದ್ ಜೋಶಿ

Spread the loveಹುಬ್ಬಳ್ಳಿ: ಮುಂಬರುವ ಲೋಕಸಭೆ ಚುನಾವಣೆಗೆ ಧಾರವಾಡ ಲೋಕಸಭಾ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿ ಶಿವಾನಂದ ಮುತ್ತಣ್ಣನವರ್ ನಿನ್ನೆ ಮಂಗಳವಾರ ಹುಬ್ಬಳ್ಳಿಯಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ