Breaking News
Home / ರಾಜ್ಯ / ರೇಪ್​ ಕೇಸ್​ನಿಂದ ತೆಹಲ್ಕಾ ಮ್ಯಾಗಜಿನ್​ ಸಂಸ್ಥಾಪಕ ತರುಣ್​ ತೇಜ್​ಪಾಲ್​ ಖುಲಾಸೆ: ಗೋವಾ ನ್ಯಾಯಾಲಯ ಆದೇಶ

ರೇಪ್​ ಕೇಸ್​ನಿಂದ ತೆಹಲ್ಕಾ ಮ್ಯಾಗಜಿನ್​ ಸಂಸ್ಥಾಪಕ ತರುಣ್​ ತೇಜ್​ಪಾಲ್​ ಖುಲಾಸೆ: ಗೋವಾ ನ್ಯಾಯಾಲಯ ಆದೇಶ

Spread the love

ಪಣಜಿ, ಮೇ 21: ಗೋವಾದ ಸೆಷನ್ಸ್ ನ್ಯಾಯಾಲಯದಿಂದ ಶುಕ್ರವಾರದಂದು ಖ್ಯಾತ ಪತ್ರಕರ್ತ, ತೆಹಲ್ಕಾ ಸಹ ಸಂಸ್ಥಾಪಕ, ಸಂಪಾದಕ ತರುಣ್ ತೇಜಪಾಲ್ ಗೆ ನೆಮ್ಮದಿಯ ಸುದ್ದಿ ಸಿಕ್ಕಿದೆ. ತಮ್ಮ ಸಂಸ್ಥೆಯ ಮಹಿಳಾ ಸಹೋದ್ಯೋಗಿ ಅಸಭ್ಯವಾಗಿ ನಡೆದುಕೊಂಡ ಘಟನೆಗೆ ಸಂಬಂಧಿಸಿದ ಪ್ರಕರಣದಿಂದ ತೇಜಪಾಲ್ ಖುಲಾಸೆಗೊಂಡಿದ್ದಾರೆ.

ಗೋವಾದ ಸೆಷನ್ಸ್ ನ್ಯಾಯಾಲಯದ ಜಡ್ಜ್ ಕ್ಷಮಾ ಜೋಶಿ ಅವರು ಸಾಕ್ಷ್ಯಾಧಾರಗಳ ಕೊರತೆಯನ್ನು ಉಲ್ಲೇಖಿಸಿ, ತೇಜ್ ಪಾಲ್ ಅವರನ್ನು ಪ್ರಕರಣದಿಂದ ಖುಲಾಸೆಗೊಳಿಸಿ ಆದೇಶ ನೀಡಿದ್ದಾರೆ.

ಈ ಪ್ರಕರಣ ಬೆಳಕಿಗೆ ಬಂದ ಬಳಿಕ ನೈತಿಕ ಹೊಣೆ ಹೊತ್ತು ತಮ್ಮ ಹುದ್ದೆ ತೊರೆದಿದ್ದರು. ನಂತರ ಅವರನ್ನು ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ (ಇಜಿಐ) ಅಮಾನತು ಮಾಡಲಾಗಿತ್ತು. 2013ರ ಲೈಂಗಿಕ ಕಿರುಕುಳ ಪ್ರಕರಣದಿಂದ ಮುಕ್ತಿ ಬಯಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಲು ನಿರಾಕರಿಸಿರುವ ಸುಪ್ರೀಂಕೋರ್ಟ್, ” ತೇಜಪಾಲ್ ವಿರುದ್ಧದ ಆರೋಪ ಗಂಭೀರವಾಗಿದೆ ಹಾಗೂ ಸಂತ್ರಸ್ತೆಯ ಖಾಸಗಿತನ ಮೇಲಿನ ಆಕ್ರಮಣವಾಗಿದೆ ಎಂದು ಅಭಿಪ್ರಾಯಪಟ್ಟಿತ್ತು.

ಗೋವಾದ ನ್ಯಾಯಾಲಯದಲ್ಲಿ ತಮ್ಮ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣದ ಸಂಬಂಧ ನಡೆಯುತ್ತಿರುವ ವಿಚಾರಣೆಯನ್ನು ರದ್ದುಗೊಳಿಸುವಂತೆ ತರುಣ್ ತೇಜಪಾಲ್ ಅವರು ಸುಪ್ರೀಂಕೋರ್ಟಿನಲ್ಲಿ ಅರ್ಜಿ ಸಲ್ಲಿಸಿದ್ದರು.

2013ರಲ್ಲಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಗೋವಾದಲ್ಲಿ ತೇಜಪಾಲ್ ಹಾಗೂ ಕಿರಿಯ ಸಹದ್ಯೋಗಿಗೆ ಲೈಂಗಿಕ ಕಿರುಕುಳ ನೀಡಿದ್ದಲ್ಲದೆ, ಮೂರು ಬಾರಿ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿತ್ತು. ತನಗಾದ ಕಿರುಕುಳ ಬಗ್ಗೆ ಖಾಸಗಿ ಮಾಧ್ಯಮವೊಂದರಲ್ಲಿ ಮಹಿಳಾ ಉದ್ಯೋಗಿ ದುಃಖ ತೋಡಿಕೊಂಡಿದ್ದರು. ಗೋವಾದಲ್ಲಿ ಈ ಘಟನೆ ನಡೆದಿದ್ದರಿಂದ ಪಣಜಿ ಪೊಲೀಸರು ತೇಜ್ ಪಾಲ್ ವಿರುದ್ಧ ಐಪಿಸಿ ಸೆಕ್ಷನ್ 354, 354 ಎ, 341, 342, 276, 376(2)(ಎಫ್), 376(2)(ಕೆ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದರು.


Spread the love

About Laxminews 24x7

Check Also

ಬಹುಭಾಷಾ ನಟ ಪ್ರಕಾಶ್ ರೈ ಮತ ಚಲಾಯಿಸಿದ್ದು ಯಾರಿಗೆ ಗೊತ್ತಾ?

Spread the love ಲೋಕಸಭೆ ಚುನಾವಣೆ 2024 ರ ಎರಡನೇ ಹಂತದಲ್ಲಿ ಇಂದು ಶುಕ್ರವಾರ (ಏಪ್ರಿಲ್ 26) ಆರಂಭವಾಗಿದೆ. 13 …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ