Breaking News

ಕ್ರಿಕೆಟ್ ಆಡಬೇಡಿ, ಮಾಸ್ಕ್ ಹಾಕ್ಕೊಳ್ಳಿ ಎಂದಿದ್ದಕ್ಕೆ ಪಿಡಿಒ ಮೇಲೆ ಯುವಕನಿಂದ ಹಲ್ಲೆ

Spread the love

ಹುಬ್ಬಳ್ಳಿ: ಕ್ರಿಕೆಟ್ ಆಡಬೇಡಿ, ಮಾಸ್ಕ್ ಹಾಕಿಕೊಳ್ಳಿ ಎಂದು ತಿಳಿ ಹೇಳಿದ್ದಕ್ಕೆ ಗ್ರಾಮ ಪಂಚಾಯತಿ ಪಿಡಿಒ ಮೇಲೆ ಯುವಕನೊಬ್ಬ ಹಲ್ಲೆ ಮಾಡಿದ ಘಟನೆ ಧಾರವಾಡ ಜಿಲ್ಲೆಯ ಹಳ್ಳಿಗೇರಿ ಗ್ರಾಮದಲ್ಲಿ ನಡೆದಿದೆ.

ಹಳ್ಳಿಗೇರಿ ಗ್ರಾಮ ಪಂಚಾಯತಿ ಪಿಡಿಒ ಮೃತ್ಯುಂಜಯ ಮೆಣಸಿನಕಾಯಿ ಅವರೇ ಹಲ್ಲೆಗೊಳಗಾದ ವ್ಯಕ್ತಿ. ಪಿಡಿಒ ಬುದ್ಧಿವಾದ ಹೇಳಿದ್ದಕ್ಕೆ ಪುಂಡ ಯುವಕನೊಬ್ಬ ಅವರ ಮೇಲೆ ಹಲ್ಲೆ ಮಾಡಿದ್ದಾನೆ.

ಗ್ರಾಮದ ಮೈದಾನದಲ್ಲಿ ಕೆಲ ಯುವಕರು ಕ್ರಿಕೆಟ್ ಆಡುತ್ತಿದ್ದರು. ಈ ವೇಳೆ ಲಾಕ್‍ಡೌನ್ ಇದೆ, ಕ್ರಿಕೆಟ್ ಆಡಬೇಡಿ, ಮನೆಗೆ ಹೋಗಿ, ಎಲ್ಲರೂ ಮಾಸ್ಕ್ ಧರಿಸಿಕೊಳ್ಳಿ ಎಂದು ಹೇಳಿದ್ದಕ್ಕೆ ಹಲ್ಲೆ ಮಾಡಿದ್ದಾನೆ. ಹಲ್ಲೆ ಮಾಡಿರುವುದು ಸಿಸಿ ಟಿವಿಯಲ್ಲಿ ಸೆರೆಯಾಗಿದ್ದು, ವೀಡಿಯೋ ಇದೀಗ ವೈರಲ್ ಆಗಿದೆ.


Spread the love

About Laxminews 24x7

Check Also

ಮಹಿಳೆಯರ ತಾಳಿ ಕಿತ್ತುಕೊಳ್ಳುತ್ತಿರುವ ಮೈಕ್ರೋ ಫೈನಾನ್ಸ್ ನಿಯಂತ್ರಣ ಮಾಡುವಲ್ಲಿ ಸರ್ಕಾರ ವಿಫಲ: ಬಸವರಾಜ ಬೊಮ್ಮಾಯಿ

Spread the loveಹುಬ್ಬಳ್ಳಿ: ರಾಜ್ಯದಲ್ಲಿ ಹೆಣ್ಣು ಮಕ್ಕಳ ತಾಳಿ ಕಿತ್ತುಕೊಳ್ಳುತ್ತಿರುವ ಮೈಕ್ರೋ ಫೈನಾನ್ಸ್ ಮೇಲೆ ಸರ್ಕಾರದ ನಿಯಂತ್ರಣ ತಪ್ಪಿದೆ. ಬಹಳಷ್ಟು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ