Breaking News

ರಾಜ್ಯದಲ್ಲಿ ಲಾಕ್ ಡೌನ್ ವಿಸ್ತರಣೆ ಬಹುತೇಕ ಖಚಿತ..?

Spread the love

ಬೆಂಗಳೂರು: ರಾಜ್ಯದಲ್ಲಿ ಲಾಕ್ ಡೌನ್ ವಿಸ್ತರಣೆ ಬಹುತೇಕ ಖಚಿತವಾಗಿದ್ದು, ಮೇ 24ರ ಬಳಿಕ ಕರ್ನಾಟಕದಲ್ಲಿ ಕಠಿಣ ಲಾಕ್ ಡೌನ್ ಜಾರಿಗೆ ಬರಲಿದೆ ಎಂದು ತಿಳಿದುಬಂದಿದೆ.

ರಾಜ್ಯದ ಭವಿಷ್ಯದ ಹಿತ ದೃಷ್ಟಿಯಿಂದ ಮುಂದಿನ 15 ದಿನಗಳ ಕಾಲ ರಾಜ್ಯದಲ್ಲಿ ಲಾಕ್ ಡೌನ್ ಜಾರಿ ಮಾಡಬೇಕು ಎಂದು ವಿಪತ್ತು ನಿರ್ವಹಣಾ ಅಧಿಕಾರಿಗಳ ತಂಡ ರಾಜ್ಯ ಸರ್ಕಾರವನ್ನು ಒತ್ತಾಯಿಸಿದೆ.

ಮುಖ್ಯಕಾರ್ಯದರ್ಶಿ ರವಿಕುಮಾರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ರಾಜ್ಯದಲ್ಲಿನ ಕೊರೊನಾ ಸ್ಥಿತಿಗತಿ, ಲಾಕ್ ಡೌನ್ ವಿಸ್ತರಣೆ ಕುರಿತು ಸುದೀರ್ಘ ಚರ್ಚೆ ನಡೆಸಲಾಗಿದ್ದು, ವಿಪತ್ತು ನಿರ್ವಹಣಾ ಅಧಿಕಾರಿಗಳು ಮುಂದಿನ 2 ವಾರಗಳ ಕಾಲ ರಾಜ್ಯದಲ್ಲಿ ಲಾಕ್ ಡೌನ್ ವಿಸ್ತರಿಸುವುದು ಒಳಿತು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸಿಎಂ ಜೊತೆ ಚರ್ಚಿಸಿವುದಾಗಿ ಮುಖ್ಯಕಾರ್ಯದರ್ಶಿ ಹೇಳಿದ್ದಾರೆ ಎನ್ನಲಾಗಿದೆ.

ಈ ನಡುವೆ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪ ಲಾಕ್ ಡೌನ್ ವಿಸ್ತರಣೆ ಬಗ್ಗೆ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗುವುದು. ಇಂದು ಸಂಜೆ ವೇಳೆಗೆ ಸಂಪೂರ್ಣ ಮಾಹಿತಿ ಸಗಲಿದ್ದು, ನಾಳೆ ನಡೆಯಲಿರುವ ಸಭೆಯಲ್ಲಿ ಮತ್ತೊಮ್ಮೆ ಚರ್ಚಿಸಿ ನಿರ್ಧರಿಸುವುದಾಗಿ ಹೇಳಿದ್ದಾರೆ.


Spread the love

About Laxminews 24x7

Check Also

ಮೈಸೂರಿನಿಂದ ಉದಯಪುರಕ್ಕೆ ತೆರಳುತ್ತಿದ್ದ ರೈಲಿನ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಯಾಗಿತ್ತು.

Spread the loveರಾಮನಗರ: ಬೊಂಬೆನಗರಿ ಚನ್ನಪಟ್ಟಣದ ಬಳಿ ಚಲಿಸುತ್ತಿದ್ದ ರೈಲಿನ ಇಂಜಿನ್​​ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಇಂದು (ಗುರುವಾರ) ನಡೆದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ