Breaking News

ತಿಂಗಳಾಂತ್ಯದವರೆಗೂ ಲಾಕ್ ಆಗಲಿದೆ ಕರುನಾಡು.!

Spread the love

ದಾವಣಗೆರೆ: ಕೊರೊನಾ ಅಟ್ಟಹಾಸ ನಿಯಂತ್ರಿಸಲು ರಾಜ್ಯದಲ್ಲಿ ಮೇ 24ರ ಬಳಿಕವೂ ಲಾಕ್ ಡೌನ್ ಮುಂದುವರೆಯುವುದು ಬಹುತೇಕ ಖಚಿತವಾಗಿದೆ. ಈ ಕುರಿತು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟಪಡಿಸಿದ್ದಾರೆ.

ದಾವಣಗೆರೆಯಲ್ಲಿ ಮಾತನಾಡಿದ ಆರೋಗ್ಯ ಸಚಿವರು, ರಾಜ್ಯದಲ್ಲಿ ಲಾಕ್ ಡೌನ್ ವಿಸ್ತರಣೆ ಬಗ್ಗೆ ಬಹುತೇಕ ಸಚಿವರು ಒಲವು ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪನವರ ಇಚ್ಛೆ ಕೂಡ ಅದೇ ಆಗಿದೆ. ಮೇ 22 ಅಥವಾ 23ರಂದು ಲಾಕ್ ಡೌನ್ ನಿರ್ಧಾರ ಪ್ರಕಟವಾಗಲಿದೆ ಎಂದರು.

 

ಗ್ರಾಮೀಣ ಪ್ರದೇಶಕ್ಕೂ ವ್ಯಾಪಿಸುತ್ತಿರುವ ಕೊರೊನಾ ಸೋಂಕು ನಿಯಂತ್ರಿಸಬೇಕು ಎಂದರೆ ರಾಜ್ಯದಲ್ಲಿ ಇನ್ನಷ್ಟು ದಿನಗಳ ಕಠಿಣ ಲಾಕ್ ಡೌನ್ ಅನಿವಾರ್ಯ. ಇದರಿಂದ ಸಾವು-ನೋವನ್ನು ತಡೆಯಬಹುದಾಗಿದೆ. ಇನ್ನು ರಾಜ್ಯದಲ್ಲಿ ರೆಮ್ ಡಿಸಿವಿರ್ ಕೊರತೆಯಿಲ್ಲ. 10 ಲಕ್ಷ ರೆಮ್ ಡಿಸಿವಿರ್ ತರಿಸಿಕೊಳ್ಳಲಾಗಿದೆ ಎಂದು ಹೇಳಿದರು.


Spread the love

About Laxminews 24x7

Check Also

ಗಣೇಶ, ಈದ್ ಮಿಲಾದ್ ಹಬ್ಬದ ಹಿನ್ನೆಲೆ ಹು-ಧಾ ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ಅವರ ನೇತೃತ್ವದಲ್ಲಿ ಅವಳಿನಗರದಲ್ಲಿನ 400 ಡ್ರಗ್ ಪೆಡ್ಲರ್ಸ್ ಹಾಗೂ ಸೇವನೆ ಮಾಡುವವರ ಪರೇಡ್

Spread the love ಗಣೇಶ, ಈದ್ ಮಿಲಾದ್ ಹಬ್ಬದ ಹಿನ್ನೆಲೆ ಹು-ಧಾ ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ಅವರ ನೇತೃತ್ವದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ