Breaking News

ಒನ್ ನೇಷನ್, ಒನ್ ರೇಷನ್ ‘ ಯೋಜನೆ : ಪಡಿತರ ಚೀಟಿದಾರರಿಗೆ ಮತ್ತೊಂದು ಗುಡ್ ನ್ಯೂಸ್

Spread the love

ಬೆಂಗಳೂರು : ಪಡಿತರ ಚೀಟಿದಾರರಿಗೆ ಮತ್ತೊಂದು ಸಿಹಿಸುದ್ದಿ ಸಿಕ್ಕಿದ್ದು, ಒಂದು ರಾಷ್ಟ್ರ, ಒಂದು ಪಡಿತರ ಯೋಜನೆಯಡಿ ರಾಜ್ಯದಲ್ಲಿ ಉದ್ಯೋಗ ಮತ್ತು ಇತರೆ ಜೀವನೋಪಾಯಕ್ಕಾಗಿ ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ವಲಸೆ ಬಂದಿರುವವರು ರಾಜ್ಯದ ಯಾವುದೇ ಸ್ಥಳದಲ್ಲಿ ಪಡಿತರ ಪಡೆಯಬಹುದು ಎಂದು ಆಹಾರ ಇಲಾಖೆ ತಿಳಿಸಿದೆ.

 

ಈ ಕುರಿತು ಮಾಹಿತಿ ನೀಡಿರುವ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಆಯುಕ್ತ ಶಮ್ಲಾ ಇಕ್ಬಾಲ್, ಅಂತ್ಯೋದಯ ಅಥವಾ ಪಡಿತರ ಚೀಟಿ ಹೊಂದಿರುವವರು ನ್ಯಾಯಬೆಲೆ ಅಂಗಡಿಗಳಿಗೆ ಹೋಗಿ ಪಡಿತರ ಪಡೆಯಬಹುದು.ಆಧಾರ್ ಸಂಖ್ಯೆ, ಪಡಿತರ ಚೀಟಿ ಸಂಖ್ಯೆ ಅಗತ್ಯವಿದ್ದರೆ ಬೆರಳು ಮುದ್ರೆ ನೀಡಬೇಕಾಗುತ್ತದೆ. ಪಡಿತರಕ್ಕಾಗಿ 14445 ಸಹಾಯವಾಣಿಯಲ್ಲಿ ನೋಂದಾಯಿಸಿಕೊಳ್ಳಬೇಕು ಎಂದು ಮಾಹಿತಿ ನೀಡಿದ್ದಾರೆ.

 

ಒಂದು ರಾಷ್ಟ್ರ, ಒಂದು ಪಡಿತರ ಯೋಜನೆಯಡಿ ದೇಶದ ಯಾವುದೇ ನ್ಯಾಯಬೆಲೆ ಅಂಗಡಿಗಳಲ್ಲಿ ವಲಸೆ ಕಾರ್ಮಿಕರು ಪಡಿತರ ಪಡೆದುಕೊಳ್ಳಲು ಅವಕಾಶವಿದ್ದು, ಮೇರಾ ರೇಷನ್ ಆಯಪ್ ಮೂಲಕ ಅಥವಾ 14445 ಸಹಾಯವಾಣಿಗೆ ಕರೆ ಮಾಡಿ ನೋಂದಾಯಿಸಿಕೊಳ್ಳಬಹುದು.

 

ಅಂತ್ಯೋದಯ ಕಾರ್ಡ್ ದಾರರಿಗೆ 35 ಕೆಜಿ ಅಕ್ಕಿ ನೀಡಲಾಗುವುದು. ನ್ಯಾಯಬೆಲೆ ಅಂಗಡಿಗಳು ಯಾರಿಗೂ ಪಡಿತರ ನಿರಾಕರಿಸುವಂತಿಲ್ಲ. ತಿರಸ್ಕರಿಸಿದರೆ ಸಹಾಯವಾಣಿ ಸಂಖ್ಯೆ 1967 ಗೆ ಕರೆ ಮಾಡಿ ದೂರು ನೀಡಬಹುದು ಎಂದು ತಿಳಿಸಿದ್ದಾರೆ.


Spread the love

About Laxminews 24x7

Check Also

ಚಾಮುಂಡಿ ಬೆಟ್ಟಕ್ಕೆ ಎಲ್ಲಾ ಧರ್ಮದವರಿಗೂ ಪ್ರವೇಶವಿದೆ: ಡಿಸಿಎಂ

Spread the loveಬೆಂಗಳೂರು : ಚಾಮುಂಡಿ ಬೆಟ್ಟಕ್ಕೆ ಎಲ್ಲ ಧರ್ಮದವರಿಗೂ ಪ್ರವೇಶವಿದೆ. ಎಲ್ಲಾ ಸಮಾಜದವರು ಚಾಮುಂಡಿ ಬೆಟ್ಟಕ್ಕೆ ಹೋಗುತ್ತಾರೆ, ದೇವರ ಬಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ