Breaking News
Home / ಜಿಲ್ಲೆ / ಬೆಂಗಳೂರು / ದೇಶದಲ್ಲಿ 8,840 ಜನರಲ್ಲಿ ಬ್ಲ್ಯಾಕ್ ಫಂಗಸ್ ಪತ್ತೆ

ದೇಶದಲ್ಲಿ 8,840 ಜನರಲ್ಲಿ ಬ್ಲ್ಯಾಕ್ ಫಂಗಸ್ ಪತ್ತೆ

Spread the love

ಬೆಂಗಳೂರು: ಕೊರೊನಾ ಭೀಕರತೆ ನಡುವೆ ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ಅಟ್ಟಹಾಸ ಹೆಚ್ಚುತ್ತಿದ್ದು, ಬ್ಲ್ಯಾಕ್ ಫಂಗಸ್ ಚಿಕಿತ್ಸೆಗಾಗಿ ಇದೀಗ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಇಂಜಕ್ಷನ್ ಹಂಚಿಕೆ ಮಾಡಲಾಗಿದೆ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕರ್ನಾಟಕಕ್ಕೆ ಬ್ಲ್ಯಾಕ್ ಫಂಗಸ್ ಗೆ ಇಂಜಕ್ಷನ್ ಹಂಚಿಕೆ ಮಾಡಲಾಗಿದೆ. ಆಂಫೊಟೆರಿಸಿನ್ ಬಿ 1,270 ವಯಲ್ಸ್ ಗಳನ್ನು ರಾಜ್ಯಕ್ಕೆ ನೀಡಲಾಗಿದೆ ಎಂದು ಹೇಳಿದರು.

ದೇಶದಲ್ಲಿ 8,840 ಜನರಲ್ಲಿ ಬ್ಲ್ಯಾಕ್ ಫಂಗಸ್ ಪತ್ತೆಯಾಗಿದ್ದು, ರಾಜ್ಯದಲ್ಲಿ 500 ಕೇಸ್ ಪತ್ತೆಯಾಗಿದೆ. ಬ್ಲ್ಯಾಕ್ ಫಂಗಸ್ ಪ್ರಕರಣ ಹೆಚ್ಚಿರುವ ರಾಜ್ಯಗಳಿಗೆ ಹೆಚ್ಚು ವಯಲ್ಸ್ ಹಂಚಲಾಗಿದ್ದು, ದೇಶದ ವಿವಿಧ ರಾಜ್ಯಗಳಿಗೆ 23,680 ವಯಲ್ಸ್ ನ್ನು ಕೇಂದ್ರ ಸರ್ಕಾರ ಹಂಚಿಕೆ ಮಾಡಿದೆ ಎಂದು ವಿವರಿಸಿದರು.


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ