Breaking News

50ಕ್ಕೂ ಹೆಚ್ಚು ಜನರನ್ನ ಕೊಲೆಗೈದ ಆರೋಪದಲ್ಲಿ ಆಯುರ್ವೇದ ವೈದ್ಯನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.

Spread the love

ಹೊಸದಿಲ್ಲಿ: ದಿಲ್ಲಿ ಸೇರಿದಂತೆ ಸುತ್ತಮುತ್ತಲಿನ ಪ್ರದೇಶದಲ್ಲಿ 50ಕ್ಕೂ ಹೆಚ್ಚು ಜನರನ್ನ ಕೊಲೆಗೈದ ಆರೋಪದಲ್ಲಿ ಆಯುರ್ವೇದ ವೈದ್ಯನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.

ಉತ್ತರ ಪ್ರದೇಶದ ಆಲಿಘರ್ ನಿವಾಸಿಯಾಗಿದ್ದ ದೇವೇಂದರ್ ಶರ್ಮಾ(62) ಬಂಧಿತ.

ಹಲವು ಅಪಹರಣ ಮತ್ತು ಕೊಲೆ ಪ್ರಕರಣಗಳಲ್ಲಿ ದೋಷಿ ಎಂದು ಪೊಲೀಸರು ತಿಳಿಸಿದ್ದಾರೆ. ಉತ್ತರ ಪ್ರದೇಶದಲ್ಲಿ ನಕಲಿ ಗ್ಯಾಸ್ ಏಜೆನ್ಸಿ ನಡೆಸುತ್ತಿದ್ದದ್ದಕ್ಕಾಗಿ ಬಂಧಿಸಲಾಗಿತ್ತು . ಕಿಡ್ನಿ ದಂಧೆ ಪ್ರಕರಣದಲ್ಲಿ ಜೈಪುರದ ಸೆಂಟ್ರಲ್ ಜೈಲಿನಲ್ಲಿ ಆತ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ. ಬಳಿ ತಪ್ಪಿಸಿಕೊಂಡಿದ್ದನು ಎಂದು ತಿಳಿಸಿದ್ದಾರೆ.

ಮಂಗಳವಾರ ಆತನ ವಿಚಾರಣೆ ನಡೆಸಿದ ವೇಳೆ ಸ್ಪೋಟಕ ಮಾಹಿತಿಯನ್ನು ಪೊಲೀಸರಿಗೆ ತಿಳಿಸಿದ್ದು, ಪೊಲೀಸ್ ಅಧಿಕಾರಿಗಳೆ ಬೆಚ್ಚಿ ಬಿಳುವಂತಿದೆ. ಸುಮಾರು  50ಕ್ಕೂ ಹೆಚ್ಚು ಕೊಲೆ ಪ್ರಕರಣಗಳಲ್ಲಿ ತನ್ನ ಕೈವಾಡವಿರುವುದಾಗಿ ಆತ ಒಪ್ಪಿಕೊಂಡಿದ್ದಾನೆ. 50 ಕೊಲೆಗಳ ನಂತರ ತನಗೆ ಲೆಕ್ಕವಿಟ್ಟುಕೊಳ್ಳಲು ಸಾಧ್ಯವಾಗಲಿಲ್ಲ ಎಂದು ಆತ ಬಾಯ್ಬಿಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.


Spread the love

About Laxminews 24x7

Check Also

ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಭಾಗವಹಿಸಲು ಕೇಂದ್ರ ಸಚಿವರಿಗೆ ಆಹ್ವಾನ

Spread the loveನವದೆಹಲಿ: ಕರ್ನಾಟಕದ ಕೈಗಾರಿಕೆ ಸಚಿವರಾದ ಎಂ.ಬಿ.ಪಾಟೀಲ್ ಅವರು ನವದೆಹಲಿಯಲ್ಲಿ ಬುಧವಾರ ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ