Breaking News

ದಲಿತ ಯುವಕನಿಗೆ ಮೂತ್ರ ಕುಡಿಸಿದ ಆರೋಪ: ಪಿಎಸ್​ಐ ವಿರುದ್ಧ ಎಫ್​ಐಆರ್​ ದಾಖಲು

Spread the love

ಚಿಕ್ಕಮಗಳೂರು: ದಲಿತ ಯುವಕನಿಗೆ ಮೂತ್ರ ಕುಡಿಸಿದ ಆರೋಪ ಪ್ರಕರಣ ಸಂಬಂಧ ಮೂಡಿಗೆರೆ ತಾಲೂಕಿನ ಗೋಣಿಬೀಡು ಪಿಎಸ್​ಐ ಅರ್ಜುನ್​ ವಿರುದ್ಧ ಶನಿವಾರ ಎಫ್​ಐಆರ್​ ದಾಖಲಾಗಿದೆ.

ಯುವಕ ಪುನೀತ್ ನೀಡಿರುವ ದೂರಿನನ್ವಯ ಪ್ರಕರಣ ದಾಖಲಾಗಿದೆ. ಪುನೀತ್​ ಮೂಡಿಗೆರೆ ತಾಲೂಕಿನ ಕಿರುಗುಂದ ಗ್ರಾಮದ ನಿವಾಸಿ. ವಿವಾಹಿತ ಮಹಿಳೆಗೆ ಫೋನ್​ ಮಾಡಿದ ಆರೋಪ ಮೇಲೆ ಪುನೀತ್​ನನ್ನು ವಿಚಾರಣೆಗಾಗಿ ಅರ್ಜುನ್​ ಠಾಣೆಗೆ ಕರೆದೊಯ್ದಿದ್ದರು.

ವಿಚಾರಣೆ ಸಂದರ್ಭದಲ್ಲಿ ಜಾತಿನಿಂದನೆ ಮಾಡಿ, ಮೂತ್ರ ಕುಡಿಸಿದ್ದಾರೆಂದು ಅರ್ಜುನ್​ ವಿರುದ್ಧ ಪುನೀತ್​ ಗಂಭೀರ ಆರೋಪ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಅರ್ಜುನ್​ ವಿರುದ್ಧ ಐಪಿಸಿ ಸೆಕ್ಷನ್ 342, 323, 504, 506, 330 ಮತ್ತು 348 ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ದೌರ್ಜನ್ಯ ಪ್ರಕರಣದ ಅಡಿಯಲ್ಲಿ ಕೇಸು ದಾಖಲಾಗಿದೆ.


Spread the love

About Laxminews 24x7

Check Also

ಕೆಎಸ್ಆರ್​ಟಿಸಿಯಲ್ಲಿ ಲಂಚಾವತಾರಗೂಗಲ್ ಪೇ, ಫೋನ್ ಪೇ ಮೂಲಕ ಲಂಚ ಪಡೆದ ಅಧಿಕಾರಿಗಳು!

Spread the loveಬೆಂಗಳೂರು, ಆಗಸ್ಟ್ 25: ಈ ಹಿಂದೆ ಬಿಎಂಟಿಸಿಯಲ್ಲಿ ಕರ್ತವ್ಯ ವಹಿಸಲು ಅಧಿಕಾರಿಗಳು ಚಾಲಕ, ನಿರ್ವಾಹಕರಿಂದ ಲಕ್ಷಾಂತರ ರೂಪಾಯಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ