Breaking News
Home / ರಾಜಕೀಯ / ಪುತ್ರನನ್ನು ಕಳೆದುಕೊಂಡ ತಂದೆ-1 ಕೋಟಿ ಪರಿಹಾರ ಕೊಟ್ಟ ಕೇಜ್ರಿವಾಲ್

ಪುತ್ರನನ್ನು ಕಳೆದುಕೊಂಡ ತಂದೆ-1 ಕೋಟಿ ಪರಿಹಾರ ಕೊಟ್ಟ ಕೇಜ್ರಿವಾಲ್

Spread the love

ನವದೆಹಲಿ: ಕೊರೊನಾ ವಾರಿಯರ್ ಆಗಿರುವ ವೈದ್ಯರೊಬ್ಬರು ಕೋವಿಡ್‍ಗೆ ಬಲಿಯಾಗಿದ್ದು, ಅವರ ಕುಟುಂಬಕ್ಕೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಬರೋಬ್ಬರಿ 1ಕೋಟಿ ರೂಪಾಯಿ ಹಣವನ್ನು ಪರಿಹಾರವಾಗಿ ಕೊಟ್ಟಿದ್ದಾರೆ.

ಡಾ. ಅನಾಸ್(26) ಮೃತ ವೈದ್ಯರಾಗಿದ್ದಾರೆ. ಇವರು ಕೊರೊನಾ ಸೋಂಕಿನಿಂದ ಇತ್ತೀಚೆಗಷ್ಟೇ ಮೃತಪಟ್ಟಿದ್ದರು. ಇವರ ಕುಟುಂಬಕ್ಕೆ ಅರವಿಂದ್ ಕೇಜ್ರಿವಾಲ್ ಅವರು ಸಹಾಯವನ್ನು ಮಾಡಿದ್ದಾರೆ.

ಮೃತ ಡಾ. ಅನಾಸ್ ಅವರ ಮನೆಗೆ ಭೇಟಿನೀಡಿ ಅವರ ತಂದೆಗೆ ಸಾಂತ್ವನ ಹೇಳಿರುವ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು 1 ಕೋಟಿ ರೂಪಾಯಿ ಮೌಲ್ಯದ ಚೆಕ್ ಹಸ್ತಾಂತರಿಸಿದ್ದಾರೆ. ನನ್ನ ಪುತ್ರ ಕರ್ತವ್ಯದ ಮೇಲಿದ್ದು, ಜನರ ಸೇವೆ ಮಾಡಿ ಜೀವ ಕಳೆದುಕೊಂಡಿದ್ದಾನೆ. ನನ್ನ ಇತರ ಮಕ್ಕಳು ಅವನಂತೆಯೇ ದೇಶಕ್ಕಾಗಿ ಸೇವೆ ಮಾಡಲಿ ಎಂದು ಬಯಸುತ್ತೇನೆ ಎಂದು ಅನಾಸ್ ಅವರ ತಂದೆ ಹೇಳಿದ್ದಾರೆ.


Spread the love

About Laxminews 24x7

Check Also

ಹೆಬ್ಬಾಳಕರ್ ಮನೆಗೆ ಭೇಟಿ ನೀಡಿ ಕೃತಜ್ಞತೆ ಸಲ್ಲಿಸಿದ ನೇಹಾ ಪೋಷಕರು

Spread the loveಬೆಳಗಾವಿ: ಮಗಳ ಹತ್ಯೆಯಾದ ಸಂದರ್ಭದಲ್ಲಿ ಮನೆಗೆ ಆಗಮಿಸಿ ಸಾಂತ್ವನ ಹೇಳಿದ್ದಲ್ಲದೆ ಸರ್ಕಾರದಿಂದ ಆಗಬೇಕಾದ ಕೆಲಸಗಳನ್ನು ಅತ್ಯಂತ ತ್ವರಿತವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ