ಬೆಂಗಳೂರು: ಕೇಂದ್ರ ಸರ್ಕಾರ ಅನ್‍ಲಾಕ್ 3ಗೆ ಮಾರ್ಗಸೂಚಿ ಪ್ರಕಟಿಸಿರುವ ಬೆನ್ನಲ್ಲೇ ರಾಜ್ಯ ಸರ್ಕಾರ ಯಥಾವತ್ತಾಗಿ ಜಾರಿಗೆ ತರಲು ನಿರ್ಧರಿಸಿದೆ. ಇದರ ಜೊತೆಗೆ ಸಂಡೇ ಲಾಕ್‍ಡೌನ್, ಶನಿವಾರ ರಜೆ ದಿನವನ್ನೂ ರದ್ದುಗೊಳಿಸಿದೆ.ಕೇಂದ್ರದ ಮಾರ್ಗಸೂಚಿಯಂತೆ ಆಗಸ್ಟ್ 1ರಿಂದ ನೈಟ್ ಕರ್ಫ್ಯೂ ರದ್ದು, ಆಗಸ್ಟ್ 5ರಿಂದ ಯೋಗ, ಜಿಮ್ ಓಪನ್ ಸೇರಿದಂತೆ ಆಗಸ್ಟ್ 31ರವರೆಗೆ ಶಾಲೆ ಕಾಲೇಜ್ ನಿರ್ಬಂಧ ಮುಂದುವರಿಕೆಯನ್ನು ಪಾಲಿಸಿದೆ. ಜೊತೆಗೆ ಥಿಯೇಟರ್, ಬಾರ್, ರೆಸ್ಟೋರೆಂಟ್, ಮೆಟ್ರೋಗೆ ಅವಕಾಶ ಇಲ್ಲ
ರಾಜಕೀಯ, ಧಾರ್ಮಿಕ ಸಮಾರಂಭ ಮಾಡುವಂತಿಲ್ಲ. ಅಂತರ್ ಜಿಲ್ಲೆ ಮತ್ತು ಅಂತರ್ ರಾಜ್ಯ ಸಂಚಾರ ನಿರ್ಬಂಧವಿಲ್ಲ. ಕಂಟೈನ್‍ಮೆಂಟ್ ಝೋನ್‍ನಲ್ಲಿ ಯಾವುದೇ ಚಟುವಟಿಕೆಗೆ ಅವಕಾಶ ಇಲ್ಲ. ಬಫರ್ ಝೋನ್‍ಗಳಲ್ಲಿ ಬಿಗಿ ನಿಯಮ ಅಂದಿದೆ. ಜೊತೆಗೆ ಸ್ವಾತಂತ್ರ್ಯ ದಿನಾಚರಣೆಗೂ ಅನುಮತಿ ನೀಡಿದೆ.
Laxmi News 24×7