ಬೆಳಗಾವಿ: ಬೆಳಗಾವಿಯಲ್ಲಿ ಕೋವಿಡ್ ಅಟ್ಟಹಾಸಕ್ಕೆ ಮತ್ತೋರ್ವ ಶಿಕ್ಷಕಿ ಬಲಿಯಾಗಿದ್ದಾರೆ. ಹುದಲಿ ಸರಕಾರಿ ಪ್ರೌಢಶಾಲೆಯ ಶಿಕ್ಷಕಿ ಕೋವಿಡ್ ನಿಂದ ಮೃತಪಟ್ಟಿದ್ದಾರೆ.
ಮೃತ ಶಿಕ್ಷಕಿ 32 ವರ್ಷದ ಶ್ರೀದೇವಿ ಹುಕ್ಕೇರಿ ಎಂದು ತಿಳಿದುಬಂದಿದೆ. ಹುದಲಿ ಸರಕಾರಿ ಶಾಲೆಯ ಕನ್ನಡ ಭಾಷೆ ಶಿಕ್ಷಕಿಯಾಗಿ ಕೆಲಸಮಾಡುತ್ತಿದ್ದ ಶ್ರೀದೇವಿಯವರು, ರಾಜ್ಯ ಸಂಪನ್ಮೂಲ ವ್ಯಕ್ತಿಯಾಗಿ, ಬರಹಗಾರರಾಗಿಯೂ ಕಾರ್ಯ ನಿರ್ವಹಿಸುತ್ತಿದ್ದರು.
ಉಪಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದ ಶ್ರೀದೇವಿ ಅವರು ಕೆಲದಿನಗಳಿಂದ ಕೊರೊನಾ ಸೋಂಕಿನಿಂದ ಬಳಲುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ತಡರಾತ್ರಿ ಕೊನೆಯುಸಿರೆಳೆದಿದ್ದಾರೆ. ಶಿಕ್ಷಕಿ ಅಗಲಿಕೆಗೆ ವಿದ್ಯಾರ್ಥಿಗಳು, ಶಿಕ್ಷಕ ವೃಂದ ಕಂಬನಿ ಮಿಡಿದಿದೆ.
Laxmi News 24×7