ಬೆಳಗಾವಿ – ಇಲ್ಲಿಯ ಬಿಮ್ಸ್ ಆಸ್ಪತ್ರೆಯ ನರ್ಸ್ ಒಬ್ಬರಿಗೆ ಕೊರೋನಾ ಸೋಂಕು ಪತ್ತೆಯಾಗಿದೆ. 2 ದಿನದ ಹಿಂದೆ ಕೊರೋನಾದಿಂದ ನಿಧನರಾಗಿರುವ ವ್ಯಕ್ತಿಗೆ ಚಿಕಿತ್ಸೆ ನೀಡಿದ್ದ ನರ್ಸ್ ಗೆ ಸೋಂಕು ದೃಢಪಟ್ಟಿದೆ.
ಆದರೆ ಅವರಲ್ಲಿ ಕೊರೋನಾದ ಯಾವ ಲಕ್ಷಣಗಳೂ ಕಾಣಿಸಿಕೊಂಡಿಲ್ಲ. ಟೆಸ್ಟ್ ಮಾಡಿದಾಗ ಪಾಸಿಟಿವ್ ಬಂದಿದೆ. ಇದೀಗ ಅವರ ಸಂಪೂರ್ಣ ಕುಟುಂಬವನ್ನು ಕ್ವಾರಂಟೈನ್ ಮಾಡಲಾಗಿದೆ.
ಮೃತ ವ್ಯಕ್ತಿಯ ಪ್ರಾಥಮಿಕ ಸಂಪರ್ಕವನ್ನು ಪತ್ತೆ ಮಾಡಿ ಅವರೆಲ್ಲರ ಗಂಟಲು ದ್ರವ ಪರೀಕ್ಷೆ ನಡೆಸಲಾಗುತ್ತಿದೆ.
ಇದೇ ವೇಳೆ ಪೊಲೀಸರು ಬಂಧಿಸಿರುವ ಕಳ್ಳನೊಬ್ಬನಲ್ಲೂ ಸೋಂಕು ಪತ್ತೆಯಾಗಿದ್ದು, ಪೊಲೀಸ್ ಠಾಣೆ ಮತ್ತು ಆತನನ್ನು ಇಡಲಾಗಿರುವ ಹಿಂಡಲಗಾ ಜೈಲಿನಲ್ಲೂ ಭೀತಿ ಉಂಟಾಗಿದೆ.
ಕೊರೋನಾ ದಿನದಿಂದ ದಿನಕ್ಕೆ ಅಪಾಯದ ಮಟ್ಟಕ್ಕೆ ಏರುತ್ತಿದೆ.