Breaking News

3.50 ಲಕ್ಷ ರೂ. ಮೌಲ್ಯದ ಗೋಮಾಂಸ ಸಾಗಾಟ ಮಾಡ್ತಿದ್ದವರ ಬಂಧನ

Spread the love

ಕಾರವಾರ: ಅಕ್ರಮವಾಗಿ ಗೋಮಾಂಸ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿ ಸೇರಿ ವಾಹನ ವಶಕ್ಕೆ ಪಡೆದ ಘಟನೆ ಉತ್ತರ ಕನ್ನಡ ಜಿಲ್ಲೆ ಕುಮಟಾ ತಾಲೂಕಿನ ಹಿರೇಗುತ್ತಿ ಚೇಕ್ ಪೋಸ್ಟ್ ಬಳಿ ನಡೆದಿದೆ.

ಆರೋಪಿಗಳನ್ನು ಅಮೂಲ (36), ಜಮೀರ್ ಸಯ್ಯದ್(29) ಎಂದು ಗುರುತಿಸಲಾಗಿದೆ. ಬೆಳಗಾವಿಯಿಂದ ಭಟ್ಕಳಕ್ಕೆ ಸಾಗಾಟವಾಗುತ್ತಿದ್ದ ಗೋಮಾಂಸವನ್ನು ರಾಷ್ಟ್ರೀಯ ಹೆದ್ದಾರಿ 66 ರ ಹಿರೆಗುತ್ತಿ ಚೆಕ್‍ ಪೋಸ್ಟ್ ನಲ್ಲಿ ಗೋಕರ್ಣ ಪಿಎಸ್‍ಐ ನವೀನ್ ಕುಮಾರ ನೇತೃತ್ವದ ತಂಡ ತಪಾಸಣೆ ನಡೆಸಿದ ವೇಳೆ 3.50.ಲಕ್ಷ ಬೆಲೆಯ ಎರಡು ಟನ್ ಗೋಮಾಂಸ ದೊರೆತಿದೆ.ಆರೋಪಿಗಳನು ಬಂಧಿಸಲಾಗಿದ್ದು, ವಾಹನವನ್ನು ವಶಕ್ಕೆ ಪಡೆಯಲಾಗಿದೆ. ಘಟನೆ ಸಂಬಂಧ ಗೋಕರ್ಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 


Spread the love

About Laxminews 24x7

Check Also

ಜೂನ್ ಒಳಗೆ ಜಿಲ್ಲಾ, ತಾಲೂಕು ಪಂಚಾಯಿತಿ ಚುನಾವಣೆ

Spread the loveಕಾರವಾರ: ಜೂನ್ ಒಳಗೆ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ