Breaking News

ಸಬ್‌ ಇನ್ಸ್ ಪೆಕ್ಟರ್‌ ಅರ್ಜುನ್‌ ನ್ನು ಜೈಲಿಗೆ ಕಳಿಸಲು ಸಂಸದ ಹನುಮಂತಯ್ಯ ಒತ್ತಾಯ

Spread the love

ಬೆಂಗಳೂರು: ‘ವಿಚಾರಣೆ ನೆಪದಲ್ಲಿ ದಲಿತ ಯುವಕನನ್ನು ಠಾಣೆಗೆ ಕರೆದೊಯ್ದು ಮೂತ್ರ ನೆಕ್ಕಿಸಿರುವ ಚಿಕ್ಕಮಗಳೂರು ಜಿಲ್ಲೆ ಗೋಣಿಬೀಡು ಠಾಣೆಯ ಸಬ್‌ಇನ್ಸ್‌ಪೆಕ್ಟರ್‌ ಅರ್ಜುನ್‌ ಅವರನ್ನು ಬಂಧಿಸಿ ಜೈಲಿಗೆ ಕಳುಹಿಸಬೇಕು. ಜೊತೆಗೆ ಸೇವೆಯಿಂದಲೇ ವಜಾಗೊಳಿಸಬೇಕು’ ಎಂದು ರಾಜ್ಯಸಭಾ ಸದಸ್ಯ ಎಲ್‌.ಹನುಮಂತಯ್ಯ ಒತ್ತಾಯಿಸಿದ್ದಾರೆ.
‘ಕಿರುಗುಂದ ಗ್ರಾಮದ ಕೆ.ಎಲ್‌.ಪುನೀತ್‌ ಜೊತೆ ಅರ್ಜುನ್‌ ಅಮಾನುಷವಾಗಿ ನಡೆದುಕೊಂಡಿದ್ದಾರೆ. ಸರ್ಕಾರಿ ಅಧಿಕಾರಿಯಾಗಿ ಅವರು ನಡೆದುಕೊಂಡಿರುವ ರೀತಿ ಖಂಡನೀಯ.

ಅವರ ಕ್ರೂರ ವರ್ತನೆಯ ವಿರುದ್ಧ ಸಾಕಷ್ಟು ಟೀಕೆಗಳು ವ್ಯಕ್ತವಾದರೂ ಸರ್ಕಾರವು ಆರಂಭದಲ್ಲಿ ಯಾವುದೇ ಕ್ರಮ ಕೈಗೊಳ್ಳದಿದ್ದದ್ದು ವಿಷಾದನೀಯ. ಘಟನೆಯ ಬಗ್ಗೆ ಮಾಹಿತಿ ಸಿಕ್ಕ ಮೇಲೂ ಮೌನವಹಿಸಿದ್ದ ಚಿಕ್ಕಮಗಳೂರು ಜಿಲ್ಲೆಯ ಪೊಲೀಸ್‌ ವರಿಷ್ಠಾಧಿಕಾರಿ ಅಕ್ಷಯ್‌ ಎಂ.ಹಾಕೆ ಅವರನ್ನು ಹೊಣೆಗಾರರನ್ನಾಗಿಸಿ ಅಮಾನತುಗೊಳಿಸಬೇಕು. ಘಟನೆಯ ವೇಳೆ ಕರ್ತವ್ಯದಲ್ಲಿದ್ದ ಪೇದೆಗಳ ಮೇಲೂ ಎಫ್‌ಐಆರ್‌ ದಾಖಲಿಸಬೇಕು’ ಎಂದು ಆಗ್ರಹಿಸಿದ್ದಾರೆ. ‘ಇಂತಹ ಕ್ರೂರ ಘಟನೆಯನ್ನು ಸಾಮಾನ್ಯ ಪ್ರಕರಣವೆಂದು ಪರಿಗಣಿಸಿರುವ ಸರ್ಕಾರ ಇದನ್ನು ಮುಚ್ಚಿಹಾಕಲು ಪ್ರಯತ್ನಿಸುತ್ತಿರುವುದು ಮೇಲ್ನೋಟಕ್ಕೆ ಸಾಬೀತಾಗಿದೆ. ಕೋವಿಡ್‌ ಕಾಲದಲ್ಲೂ ದಲಿತರ ಮೇಲಿನ ದೌರ್ಜನ್ಯ ಹೆಚ್ಚುತ್ತಿದೆ. ಇದು ಸರ್ಕಾರದ ಬೇಜವಾಬ್ದಾರಿತನಕ್ಕೆ ಸಾಕ್ಷಿ. ಇನ್ನಾದರೂ ಸರ್ಕಾರ ಎಚ್ಚೆತ್ತುಕೊಳ್ಳಬೇಕು. ಮುಂದೆ ಇಂತಹ ಘಟನೆಗಳು ಮರುಕಳಿಸದಂತೆ ಕ್ರಮ ಕೈಗೊಳ್ಳಬೇಕು’ ಎಂದಿದ್ದಾರೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ