ಬೆಂಗಳೂರು: ರೈತರ ತೋಟಗಾರಿಕೆ ಬೆಳೆಗಳಿಗೆ ಸರಿಯಾದ ಬೆಳೆ ಸಿಗ್ತಿಲ್ಲ ಹೀಗಾಗಿ ಸೂಕ್ತ ಮಾರುಕಟ್ಟೆ ಕಲ್ಪಿಸಿ ಎಂದು ಮಾಜಿ ಪ್ರಧಾನಿ ದೇವೇಗೌಡ ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ.
ಕೊರೊನಾ ಸಂಕಷ್ಟದ ಸಮಯದಲ್ಲಿ ಬೆಳೆಗಳಿಗೆ ಸೂಕ್ತ ಬೆಲೆ ಇಲ್ಲ. ಬೆಳೆಗಳನ್ನು ಮಾರುಕಟ್ಟೆಗೆ ಸಾಗಿಸುವುದು ಕಷ್ಟವಾಗಿದೆ. ಕೋಲಾರದಲ್ಲಿ ಅತಿ ಹೆಚ್ಚು ಟೊಮೊಟೋ ಬೆಳೆಯಲಾಗುತ್ತೆ. ಕೊಳ್ಳುವವರಿಲ್ಲದೆ ತಿಪ್ಪೆಗೆ ಎಸೆಯುತ್ತಿದ್ದಾರೆ. ಬೇರೆ ರಾಜ್ಯಗಳಲ್ಲೂ ಇದೇ ಪರಿಸ್ಥಿತಿಯಿದೆ. ಕಲ್ಲಂಗಡಿ ಬೆಳೆದ ರೈತರಿಗೂ ನಷ್ಟವಾಗಿದೆ. ಇನ್ನಿತರ ಬೆಳೆಗಳಿಗೂ ಬೆಲೆ ಇಲ್ಲ. ಈ ಬೆಳೆಗಳಿಗೆ ಎಂಎಸ್ಪಿ ದರವನ್ನ ನಿಗದಿ ಮಾಡಿ. ಸರ್ಕಾರವೇ ಮಾರಾಟಕ್ಕೆ ಸೂಕ್ತ ವ್ಯವಸ್ಥೆ ಕಲ್ಪಿಸಿ ಎಂದು ಮನವಿ ಮಾಡಿಕೊಂಡಿದ್ದಾರೆ.