Breaking News

ಹೆಣ್ಣು ಮಗುವಿಗೆ ಜನ್ಮ ನೀಡಿದ ಕೆಲವೇ ಗಂಟೆಗಳಲ್ಲಿ ಕೋವಿಡ್​ ಸೋಂಕಿತೆ ಸಾವು

Spread the love

ಮಂಡ್ಯ: ಹೆಣ್ಣು ಮಗುವಿಗೆ ಜನ್ಮ ನೀಡಿದ ಕೆಲವೇ ಗಂಟೆಗಳಲ್ಲಿ ಕೋವಿಡ್​ ಸೋಂಕಿತ ಗರ್ಭಿಣಿ ಮೃತಪಟ್ಟಿರುವ ಕರುಣಾಜನಕ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ.

ಗುಣಶ್ರೀ (35) ಸಾವಿಗೀಡಾದ ಮಹಿಳೆ. ಮಳವಳ್ಳಿ ತಾಲೂಕಿನ ಬೊಮ್ಮನದೊಡ್ಡಿ ಗ್ರಾಮದ ಗುಣಶ್ರಿ, ಅರೆತಿಪ್ಪೂರಿನ ಮನೋಹರಗೌಡರಿಗೆ ಮದುವೆ ಮಾಡಿಕೊಡಲಾಗಿತ್ತು. ಗುಣಶ್ರೀ, ಮಳವಳ್ಳಿಯ ಶಾಂತಿ ಪದವಿ ಪೂರ್ವ ಕಾಲೇಜಿನಲ್ಲಿ ವಾಣಿಜ್ಯ ಶಾಸ್ತ್ರ ಉಪನ್ಯಾಸಕಿಯಾಗಿದ್ದರು.

ಮದುವೆಯಾಗಿ 4 ವರ್ಷಗಳಾದರೂ ದಂಪತಿಗೆ ಮಕ್ಕಳಾಗಿರಲಿಲ್ಲ. ಏಳೂವರೆ ತಿಂಗಳ ಗರ್ಭಿಣಿಯಾಗಿದ್ದ ಗುಣಶ್ರೀ ಅವರಿಗೆ ಇತ್ತಿಚೆಗೆ ಕರೊನಾ ಸೋಂಕು ತಗುಲಿತ್ತು. ಇದೀಗ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಚಿಕಿತ್ಸೆ ಫಲಿಸದೆ ಗುಣಶ್ರೀ ಮೃತಪಟ್ಟಿದ್ದಾರೆ.


Spread the love

About Laxminews 24x7

Check Also

ಔತಣ ಕೂಟದಲ್ಲಿ ಪಾಲ್ಗೊಂಡು, ಡಿಕೆಶಿಗೆ ಅಭಿನಂದಿಸಿದ ಹೆಬ್ಬಾಳಕರ್, ಹಟ್ಟಿಹೊಳಿ

Spread the loveಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಹೊಟೇಲ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ