Breaking News

ಬ್ಲ್ಯಾಕ್ ಫಂಗಸ್ ಬೆನ್ನಲ್ಲೇ `ವೈಟ್ ಫಂಗಸ್’ ಆತಂಕ : ಬೆಳಗಾವಿಯ ಇಬ್ಬರಲ್ಲಿ ವೈಟ್ ಫಂಗಸ್ ಸೋಂಕು ಪತ್ತೆ!

Spread the love

ಬೆಳಗಾವಿ : ರಾಜ್ಯದಲ್ಲಿ ಕೊರೊನಾ ವೈರಸ್ ಜೊತೆಗೆ ಬ್ಲ್ಯಾಕ್ ಫಂಗಸ್ ಸೋಂಕಿನ ಆತಂಕ ಎದುರಾಗಿದ್ದು, ಇದೀಗ ಬೆಳಗಾವಿಯಲ್ಲಿ ವೈಟ್ ಫಂಗಸ್ ಸೋಂಕು ಕಾಣಿಸಿಕೊಂಡಿದ್ದು, ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ.

ಬೆಳಗಾವಿಯಲ್ಲಿ 2 ವೈಟ್ ಫಂಗಸ್ ಸೋಂಕಿನ ಪ್ರಕರಣಗಳು ಪತ್ತೆಯಾಗಿದ್ದು, ಬಯಾಪ್ಸಿ, ಪೊಟ್ಯಾಸಿಯಮ್ ಹೈಡ್ರಾಕ್ಸೈಡ್ ತಪಾಸಣೆಗೆ ಕಳಿಸಿದ್ದೇವೆ ಎಂದು ಡಿಹೆಚ್ ಒ ಡಾ.ಎಸ್.ವಿ ಮುನ್ಯಾಳ್ ಮಾಹಿತಿ ನೀಡಿದ್ದಾರೆ.

ಇನ್ನು ಬೆಳಗಾವಿ ಜಿಲ್ಲೆಯಲ್ಲಿ ಬ್ಲ್ಯಾಕ್ ಫಂಗಸ್ ಸೋಂಕಿನ ಅಬ್ಬರ ಮುಂದುವರೆದಿದ್ದು, ಈವರೆಗೆ 9 ಮಂದಿಯಲ್ಲಿ ಬ್ಲ್ಯಾಕ್ ಫಂಗಸ್ ಸೋಂಕು ಪತ್ತೆಯಾಗಿದ್ದು, ಸೋಂಕಿತರಿಗೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇಬ್ಬರು ಬ್ಲ್ಯಾಕ್ ಫಂಗಸ್ ನಿಂದ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ