ಬೆಳಗಾವಿ: ಬೆಳಗಾವಿಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಅಟ್ಟಹಾಸ ಹೆಚ್ಚುತ್ತಿದ್ದು, ಒಂದೇ ಕುಟುಂಬದ ಮೂವರು ಮಹಾಮಾರಿಗೆ ಬಲಿಯಾಗಿರುವ ಘಟನೆ ಹುಕ್ಕೇರಿ ತಾಲೂಕಿನ ಯೆಲಿಮುನೊಳಿ ಗ್ರಾಮದಲ್ಲಿ ನಡೆದಿದೆ.
ತಾಯಿ ಇಂದುಮತಿ ಹಾಗೂ ಇಬ್ಬರು ಗಂಡು ಮಕ್ಕಳು ಎರಡೇ ದಿನಗಳ ಅಂತರದಲ್ಲಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಮೃತರನ್ನು ಇಂದುಮತಿ (69) ಮಕ್ಕಳಾದ ಸತೀಶ್ (45) ಹಾಗೂ ಮಹೇಶ್ (47) ಎಂದು ತಿಳಿದುಬಂದಿದೆ.
ಇದರ ಬೆನ್ನಲ್ಲೇ ಇದೀಗ ಇಂದುಮತಿ ಪತಿ ಶಂಕರ್ ಅವರಿಗೂ ಸೋಂಕು ತಗುಲಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
Laxmi News 24×7