Breaking News
Home / ರಾಜ್ಯ / : ಕೇಂದ್ರ ಸರ್ಕಾರದ ನೂತನ ಐಟಿ ನಿಯಮಗಳನ್ನು ಪ್ರಶ್ನಿಸಿ ಫೇಸ್ ಬುಕ್ ಒಡೆತನದ ವಾಟ್ಸ್ ಆಯಪ್ ದೆಹಲಿ ಹೈಕೋರ್ಟ್ ನಲ್ಲಿ ದೂರು

: ಕೇಂದ್ರ ಸರ್ಕಾರದ ನೂತನ ಐಟಿ ನಿಯಮಗಳನ್ನು ಪ್ರಶ್ನಿಸಿ ಫೇಸ್ ಬುಕ್ ಒಡೆತನದ ವಾಟ್ಸ್ ಆಯಪ್ ದೆಹಲಿ ಹೈಕೋರ್ಟ್ ನಲ್ಲಿ ದೂರು

Spread the love

ನವದೆಹಲಿ: ಕೇಂದ್ರ ಸರ್ಕಾರದ ನೂತನ ಐಟಿ ನಿಯಮಗಳನ್ನು ಪ್ರಶ್ನಿಸಿ ಫೇಸ್ ಬುಕ್ ಒಡೆತನದ ವಾಟ್ಸ್ ಆಯಪ್ ದೆಹಲಿ ಹೈಕೋರ್ಟ್ ನಲ್ಲಿ ದೂರು ದಾಖಲಿಸಿದೆ ಎಂದು ವರದಿ ತಿಳಿಸಿದೆ. ಅದಾಗ್ಯೂ ಈ ಮಾಹಿತಿ ಖಚಿತವಾಗಿಲ್ಲ.
ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವಾಲಯವು ನೂತನ ಐಟಿ ನಿಯಮಗಳನ್ನು ಜಾರಿ ಮಾಡಲು ಸಾಮಾಜಿಕ ಜಾಲತಾಣಗಳಿಗೆ ನೀಡಿರುವ ಗಡುವು ಬುಧವಾರ (26-5-2021) ಮುಗಿಯಲಿದ್ದು, ಇದಕ್ಕೆ ತಡೆ ಕೋರಿ ಕ್ಯಾಲಿಫೋರ್ನಿಯಾ ಮೂಲದ ವಾಟ್ಸಾಪ್ ಕಾನೂನು ಹೋರಾಟಕ್ಕಿಳಿದಿದೆ.

“ಮಾಹಿತಿಯ ಪ್ರಾಥಮಿಕ ಮೂಲವನ್ನು ಗುರುತಿಸಲು” ಕೆಲವೊಂದು ನಿಬಂಧನೆಗಳನ್ನು ಮಾಡಬೇಕಾಗಿದೆ, ಈ ಅಂಶವನ್ನು ಪ್ರಶ್ನಿಸಿ ವಾಟ್ಸಾಪ್ ದೆಹಲಿ ಹೈಕೋರ್ಟ್ ಮೊರೆ ಹೋಗಿದೆ.ಭಾರತದಲ್ಲಿ ಸುಮಾರು 400 ಮಿಲಿಯನ್ ಬಳಕೆದಾರರನ್ನು ಹೊಂದಿರುವ ವಾಟ್ಸಾಪ್ ನ್ಯಾಯಾಲಯದಲ್ಲಿ ದೂರು ದಾಖಲಿಸಿದೆ ಎಂದು ರಾಯಿಟರ್ಸ್ ಕೂಡ ವರದಿ ಮಾಡಿದ್ದು, ಆದರೆ ದೃಢೀಕರಿಸಲು ಸಾಧ್ಯವಿಲ್ಲ ಎಂದು ತಿಳಿಸಿದೆ.ಹೊಸ ನಿಯಮಗಳ ಜಾರಿಗೆ ಕಳೆದ ಫೆಬ್ರವರಿಯಲ್ಲೇ ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವಾಲಯವು ಮೇ 25ರ ಗಡುವು ನೀಡಿತ್ತು. ಆದರೆ, ವಾಟ್ಸ್‌ಆಯಪ್‌, ಫೇಸ್‌ ಬುಕ್‌, ಟ್ವಿಟರ್‌ ಸೇರಿದಂತೆ ಬಹುತೇಕ ತಾಣಗಳು ಈ ನಿಯಮಗಳನ್ನು ಅನುಷ್ಠಾನ ಮಾಡಿಲ್ಲ. ಟ್ವಿಟರ್‌ ಮಾದರಿಯ ಭಾರತದ ಆವೃತ್ತಿ “ಕೂ’ ಮಾತ್ರವೇ ಹೊಸ ಮಾರ್ಗಸೂಚಿಗಳನ್ನು ಪಾಲಿಸಿದೆ.

ಇದೇ ವೇಳೆ, ಅಮೆಜಾನ್‌ ಪ್ರೈಮ್‌, ನೆಟ್‌ಫ್ಲಿಕ್ಸ್ ನಂಥ ಒಟಿಟಿ ಪ್ಲಾಟ್‌ಫಾರಂಗಳಿಗೂ “ದೂರು ಪರಿಹಾರ ಅಧಿಕಾರಿ” ಗಳನ್ನು ನೇಮಕ ಮಾಡುವಂತೆ ಸರ್ಕಾರ ಸೂಚಿಸಿದೆ. ವಿವಿಧ ಸಚಿವಾಲಯಗಳ ಪ್ರತಿ ನಿಧಿಗಳನ್ನು ಒಳಗೊಂಡ ಸಮಿತಿ ರಚಿಸಿ, ಒಟಿಟಿ ಕಂಟೆಂಟ್‌ಗಳ ಮೇಲೆ ನಿಯಂತ್ರಣ ಹೇರಬೇಕು ಎಂದೂ ಹೇಳಿದೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ