Breaking News

ಹಿಲ್ ಗಾರ್ಡನ್ ಕಚೇರಿಯಲ್ಲಿ ಸ್ಯಾನಿಟೈಸರ್, ಮಾಸ್ಕ್ ಹಾಗೂ ಪಿಪಿಇ ಕಿಟ್ ಗಳನ್ನು ವಿತರಿಸಿದ ರಾಹುಲ್ ಜಾರಕಿಹೊಳಿ

Spread the love

ಗೋಕಾಕ: ಯಮಕನಮರಡಿ ಮತಕ್ಷೇತ್ರದ‌ 6 ಜಿಲ್ಲಾ ಪಂಚಾಯ್ತಿ ವ್ಯಾಪ್ತಿಯ ಕೊರೊನಾ ವಾರಿಯರ್ಸ್ ಗಳಿಗೆ ಯುವ ಮುಖಂಡರಾದ ರಾಹುಲ್ ಜಾರಕಿಹೊಳಿ ಅವರು ಇಂದು ನಗರದ ಹಿಲ್ ಗಾರ್ಡನ್ ಕಚೇರಿಯಲ್ಲಿ ಸ್ಯಾನಿಟೈಸರ್, ಮಾಸ್ಕ್ ಹಾಗೂ ಪಿಪಿಇ ಕಿಟ್ ಗಳನ್ನು ವಿತರಿಸಿದರು.

ನಂತರ ಮಾತನಾಡಿದ ಅವರು, “ಕೋವಿಡ್ ನಿಯಂತ್ರಣದಲ್ಲಿ ಕೊರೊನಾ ವಾರಿಯರ್ಸ್ ಗಳ ಪಾತ್ರ ಮಹತ್ವದ್ದಾಗಿದೆ. ವಾರಿಯರ್ಸ್ ಗಳು ಸಾರ್ವಜನಿಕರೊಂದಿಗೆ ಸಮನ್ವಯತೆಯಿಂದ ಕಾರ್ಯ ನಿರ್ವಹಿಸಬೇಕು. ಜನರು ಕೂಡ ಕೊರೊನಾ ವಾರಿಯರ್ಸ್ ಗಳೊಂದಿಗೆ ಸಹಕರಿಸಬೇಕು” ಎಂದು ಹೇಳಿದರು.

“ಪ್ರತಿ ಹಳ್ಳಿಯಲ್ಲೂ ಹೆಚ್ಚಿನ ಸಂಖ್ಯೆಯಲ್ಲಿ ಕೊರೊನಾ ಪರೀಕ್ಷೆ ನಡೆಸಿ, ಕೂಡಲೇ ಸೋಂಕಿತರನ್ನು ಕೋವಿಡ್ ಕೇಂದ್ರಗಳಲ್ಲಿ ಐಸೊಲೇಟ್ ಮಾಡಿ, ಸೂಕ್ತ ಚಿಕಿತ್ಸೆ ನೀಡಬೇಕು. ಅಂದಾಗ ಕೊರೊನಾ ತ್ವರಿತವಾಗಿ ನಿಯಂತ್ರಣಕ್ಕೆ ಬರುತ್ತದೆ” ಎಂದರು.

ಕೊರೊನಾ ವಾರಿಯರ್ಸ್ ಗಳ ನೆರವಿಗೆ ಸದಾ ಸಿದ್ಧ:

‘ಕೊರೊನಾ ವಾರಿಯರ್ಸ್ ಗಳ ನೆರವಿಗೆ ನಾವು ಸದಾ ಸಿದ್ಧರಿದ್ದೇವೆ. ತಾವು ಯಾವಾಗ ಬೇಕಾದರು ನಮ್ಮ ಸಹಾಯ ಪಡೆಯಬಹುದು” ಎಂದು ರಾಹುಲ್ ಅವರು ಭರವಸೆ ನೀಡಿದರು.

 

ಯಮಕನಮರಡಿ ವಿಧಾನಸಭಾ ಮತಕ್ಷೇತ್ರದ ಪಾಶ್ಚಾಪುರ, ದಡ್ಡಿ, ಕಾಕತಿ, ಹೆಬ್ಬಾಳ, ಕಡೋಲಿ ಹಾಗೂ ಹತ್ತರಗಿ ಜಿಲ್ಲಾ ಪಂಚಾಯ್ತಿ ವ್ಯಾಪ್ತಿಯ ಕೊರೊನಾ ವಾರಿಯರ್ಸ್ ಗಳಿಗೆ ರಾಹುಲ್ ಅವರು ಮಾಸ್ಕ್, ಸ್ಯಾನಿಟೈಸರ್ ಹಾಗೂ ಪಿಪಿಇ ಕಿಟ್ ಗಳನ್ನು ವಿತರಣೆ ಮಾಡಿದರು.

ಈ ಸಂದರ್ಭದಲ್ಲಿ ಮುಖಂಡರಾದ ಪಾಂಡು ಮನ್ನಿಕೇರಿ, ವಿಠ್ಠಲ ಪರಸನ್ನವರ, ಮಾರುತಿ ಗುಟುಗುದ್ದಿ, ಪ್ರಕಾಶ ಬಸಾಪುರೆ, ವಿನೋದ ಡೊಂಗ್ರೆ, ಪಾಂಡು ರಂಗಸುಬೆ, ಸುರೇಶ ನಾಯ್ಕ್, ಅಲ್ಲಾ ಖಾನ ಸೇರಿ ಇನ್ನಿತರರು ಇದ್ದರು.


Spread the love

About Laxminews 24x7

Check Also

ಗೋಕಾಕ ನಗರದ ಇತಿಹಾಸದಲ್ಲೇ ಪ್ರಥಮ ಬಾರಿಗೆ, ಗೋಕಾಕ ಇಂಜಿನಿಯರ್ಸ್ ಅಸೋಸಿಯೇಷನ್‌ ಅವರ ವತಿಯಿಂದ ಶ್ರೀ ಮಹಾಲಕ್ಷ್ಮಿ ಭವನದಲ್ಲಿ ಆಯೋಜಿಸಲಾದ “ಬಿಲ್ಡ್ ಟೆಕ್ – 2025” ಕಟ್ಟಡ ನಿರ್ಮಾಣ

Spread the love ಗೋಕಾಕ ನಗರದ ಇತಿಹಾಸದಲ್ಲೇ ಪ್ರಥಮ ಬಾರಿಗೆ, ಗೋಕಾಕ ಇಂಜಿನಿಯರ್ಸ್ ಅಸೋಸಿಯೇಷನ್‌ ಅವರ ವತಿಯಿಂದ ಶ್ರೀ ಮಹಾಲಕ್ಷ್ಮಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ