Breaking News

ಬ್ಲಾಕ್ ಫಂಗಸ್ ಚಿಕಿತ್ಸೆಗೆ ಎಂಫೋಟೆರಿಸಿನ್-ಬಿ ಔಷಧಿ ಕರ್ನಾಟಕಕ್ಕೆ ಹೆಚ್ಚುವರಿ 1221 ವೈಲ್ಸ್ ಹಂಚಿಕೆ

Spread the love

ಬೆಂಗಳೂರು, ಮೇ 26- ಬ್ಲಾಕ್ ಫಂಗಸ್ ಚಿಕಿತ್ಸೆಗೆ ಬಳಸುವ ಎಂಫೋಟೆರಿಸಿನ್-ಬಿ ಔಷಧಿ ಹಂಚಿಕೆಯಲ್ಲಿ ಅನ್ಯಾಯವಾಗಿದೆ ಎಂಬ ಆರೋಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಕೇಂದ್ರ ಸರ್ಕಾರ ಇಂದು ಹೆಚ್ಚುವರಿಯಾಗಿ 1221 ವೈಲ್ಸ್ ಗಳನ್ನು ಹಂಚಿಕೆ ಮಾಡಿದೆ.ಕೇಂದ್ರ ರಾಸಾಯನಿಕ ಹಾಗೂ ರಸಗೊಬ್ಬರ ಸಚಿವ ಡಿ.ವಿ.ಸದಾನಂದಗೌಡ ಅವರು, ದೇಶಾದ್ಯಂತ ವಿವಿಧ ರಾಜ್ಯಗಳಗೆ ಹಂಚಿಕೆ ಮಾಡಿರುವ ಔಷಧಿಗಳ ಬಗ್ಗೆ ಮಾಹಿತಿ ನೀಡಿದ್ದು, 481 ಕಪ್ಪು ಶಿಲೀಂದ್ರ ಪ್ರಕರಣಗಳಿರುವ ಕರ್ನಾಟಕಕ್ಕೆ 1221 ವೈಲ್ಸ್ ಗಳನ್ನು ಹಂಚಿಕೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಕರ್ನಾಟಕಕ್ಕೆ ಮೇ 21ರಂದು 1270 ವೈಲ್ಸ್ ಗಳನ್ನು, ಮೇ 24ರಂದು 1030 ವೈಲ್ಸ್ ಗಳನ್ನು ಹಂಚಿಕೆ ಮಾಡಲಾಗಿತ್ತು. ಔಷಧಿ ಹಂಚಿಕೆಯಲ್ಲಿ ಗುಜರಾತ್ ಮತ್ತು ಮಹಾರಾಷ್ಟ್ರ ರಾಜ್ಯಗಳು ಹೆಚ್ಚಿನ ಪಾಲು ಪಡೆದಿದ್ದವು. ಕರ್ನಾಟಕದಲ್ಲೂ ಬ್ಲಾಕ್ ಫಂಗಸ್ ಪ್ರಕರಣಗಳು ಹೆಚ್ಚಿದ್ದರೂ ಔಷಧಿ ಹಂಚಿಕೆಯಲ್ಲಿ ರಾಜ್ಯಕ್ಕೆ ತಾರತಮ್ಯ ಮಾಡಲಾಗಿದೆ ಎಂಬ ಆರೋಪಗಳು ಕೇಳಿ ಬಂದಿದ್ದವು.


Spread the love

About Laxminews 24x7

Check Also

ಅಪಘಾತದ ಕಥೆ ಕಟ್ಟಿ ಹಣ ಸುಲಿಗೆ; ವಯೋವೃದ್ಧ ಕಾರು ಚಾಲಕರೇ ಈತನ ಟಾರ್ಗೆಟ್!

Spread the loveಅಪಘಾತದ ಕಥೆ ಕಟ್ಟಿ ಹಣ ಸುಲಿಗೆ; ವಯೋವೃದ್ಧ ಕಾರು ಚಾಲಕರೇ ಈತನ ಟಾರ್ಗೆಟ್! ಬೆಂಗಳೂರು: ವಯೋವೃದ್ಧ ಕಾರು ಚಾಲಕರನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ