Breaking News
Home / ರಾಜಕೀಯ / ಈ ಗಂಭೀರ ಸ್ಥಿತಿಯನ್ನು ತಡೆಗಟ್ಟಲು ದೇಶದ 100 ಕೋಟಿ ಜನರಿಗೆ ಕೋವಿಡ್ ತಡೆ ಲಸಿಕೆ (ವ್ಯಾಕ್ಸಿನೆಷನ್) ಮಾಡುವುದೊಂದೆ ಶಾಶ್ವತ ಪರಿಹಾರ: ಎಂ.ಬಿ.ಪಾಟೀಲ್.

ಈ ಗಂಭೀರ ಸ್ಥಿತಿಯನ್ನು ತಡೆಗಟ್ಟಲು ದೇಶದ 100 ಕೋಟಿ ಜನರಿಗೆ ಕೋವಿಡ್ ತಡೆ ಲಸಿಕೆ (ವ್ಯಾಕ್ಸಿನೆಷನ್) ಮಾಡುವುದೊಂದೆ ಶಾಶ್ವತ ಪರಿಹಾರ: ಎಂ.ಬಿ.ಪಾಟೀಲ್.

Spread the love

ವಿಜಯಪುರ: ದೇಶದ ಆರ್ಥಿಕ ಸ್ಥಿತಿ ಗಂಭೀರವಾಗಿದೆ. ಈ ಗಂಭೀರ ಸ್ಥಿತಿಯನ್ನು ತಡೆಗಟ್ಟಲು ದೇಶದ 100 ಕೋಟಿ ಜನರಿಗೆ ಕೋವಿಡ್ ತಡೆ ಲಸಿಕೆ (ವ್ಯಾಕ್ಸಿನೆಷನ್) ಮಾಡುವುದೊಂದೆ ಶಾಶ್ವತ ಪರಿಹಾರ. ಆದಷ್ಟು ಬೇಗ ಲಸಿಕೆಯನ್ನು ನೀಡಬೇಕು ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ್ ಅಭಿಪ್ರಾಯಪಟ್ಟಿದ್ದಾರೆ.

ಕೊರೊನಾ ಮಹಾಮಾರಿ ಮೊದಲನೇ ಅಲೆ ಮುಗಿದು, ಸದ್ಯ ಎರಡನೇಯ ಅಲೆಯ ಹಾನಿಯನ್ನು ಅನುಭವಿಸುತ್ತಿರುವ ನಮ್ಮ ದೇಶಕ್ಕೆ ಮುಂದೆ 3ನೇ ಅಲೆ ಆತಂಕವೂ ಇದೆ. ಈ ಕಾರಣದಿಂದ ದೇಶದಲ್ಲಿ ಲಕ್ಷಾಂತರ ಕುಟುಂಬಗಳು ಬೀದಿಗೆ ಬಂದಿವೆ. ಕೇಂದ್ರ, ರಾಜ್ಯ ಸರ್ಕಾರಗಳು ಉಳಿದ ಎಲ್ಲ ವಿಷಯಗಳನ್ನು ಬದಿಗಿರಿಸಿ, ಅತೀ ಕಡಿಮೆ ಅವಧಿಯಲ್ಲಿ 100 ಕೋಟಿ ಜನರಿಗೆ ವ್ಯಾಕ್ಸಿನೆಷನ್ ಮಾಡಿಸುವ ಅಭಿಯಾನವನ್ನು ಕೈಗೊಂಡು, ಅದಕ್ಕೆ ಎಲ್ಲ ಅಗತ್ಯ ನೆರವು ಒದಗಿಸಿ, ವಿಶೇಷ ಆದ್ಯತೆಯನ್ನು ನೀಡಬೇಕಾದ ತುರ್ತು ಅಗತ್ಯವಿದೆ. ಆಗ ಮಾತ್ರ ಈ ಸಮಸ್ಯೆಗೆ ಸಂಪೂರ್ಣ ಮತ್ತು ಶಾಶ್ವತ ಪರಿಹಾರ ಸಾಧ್ಯ ಎಂದರು.

ಈಗಾಗಲೇ ವ್ಯಾಕ್ಸಿನೆಷನ್ ಮುಗಿಸಿರುವ ಅಮೇರಿಕಾ, ಯೂರೋಪಿಯನ್ ರಾಷ್ಟ್ರಗಳು, ಇಸ್ರೇಲ್‍ ಮತ್ತಿತರ ದೇಶಗಳು ಈ ಮಹಾಮಾರಿಯಿಂದ ಮುಕ್ತವಾಗಿ ಅಲ್ಲಿನ ಜನ-ಜೀವನ ಮುಂಚಿನಂತೆ ಸಾಮಾನ್ಯ ಸ್ಥಿತಿಗೆ ಮರಳುತ್ತಿದೆ. ಆ ಮಾದರಿಯಲ್ಲಿ ಭಾರತದಲ್ಲಿಯೂ 130 ಕೋಟಿ ಜನರಲ್ಲಿ ಕನಿಷ್ಠ 100 ಕೋಟಿ ಜನರನ್ನು ಗುರಿಯಾಗಿಸಿ, ಈ ಲಸಿಕೆ ಹಾಕಿಸಬೇಕು. ನಮ್ಮ ದೇಶದಲ್ಲಿಯೇ ಹೆಚ್ಚಿನ ಲಸಿಕೆ ಉತ್ಪಾದನೆ ಮಾಡಬೇಕು. ಅಗತ್ಯವಿರುವಷ್ಟು ಬೇರೆ ರಾಷ್ಟ್ರಗಳಿಂದ ಕೂಡ ಲಸಿಕೆ ಆಮದು ಮಾಡಿಕೊಂಡು, ಒಟ್ಟಾರೆ 100 ಕೋಟಿ ಜನರಿಗೆ ಲಸಿಕೆ ಹಾಕುವ ಗುರಿ ಹೊಂದಿ ನಮ್ಮ ಸರ್ಕಾರಗಳು ಕಾರ್ಯಪ್ರವೃತ್ತರಾಗ ಬೇಕು ಎಂದು ಎಂ.ಬಿ.ಪಾಟೀಲ್ ಸಲಹೆ ನೀಡಿದ್ದಾರೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ