Breaking News

ದ್ವಿತೀಯ ಪಿಯುಸಿ ಪರೀಕ್ಷೆ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ

Spread the love

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ನಡೆಸುವ ಕುರಿತಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ವರ್ಚುಯಲ್ ಸಭೆ ನಡೆಸಲಿದ್ದಾರೆ. ಶಿಕ್ಷಣ ತಜ್ಞರು, ಶಿಕ್ಷಕರು, ಶಾಲೆಗಳ ಆಡಳಿತ ಮಂಡಳಿ, ಪೋಷಕರೊಂದಿಗೆ ಸಚಿವರು ಶೀಘ್ರವೇ ಸಭೆ ನಡೆಸಲಿದ್ದು, ಸೋಂಕು ಕಡಿಮೆಯಾದ ಬಳಿಕ ಪರೀಕ್ಷೆ ನಡೆಸುವ ಬಗ್ಗೆ ಚರ್ಚೆ ನಡೆಸಲಿದ್ದಾರೆ.

ಪರೀಕ್ಷಾ ವಿಧಾನ ಹೇಗಿರಬೇಕು ಎಂದು ಸಚಿವರು ಅಭಿಪ್ರಾಯ ಸಂಗ್ರಹಿಸಲಿದ್ದಾರೆ. ಕಳೆದ ವರ್ಷ ಎಸ್‌ಎಸ್‌ಎಲ್ಸಿ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲಾಗಿದೆ. ಅದೇ ರೀತಿ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ನಡೆಸಲಾಗುತ್ತದೆ ಕೊರೋನಾ ನಿಯಂತ್ರಣಕ್ಕೆ ಬಂದ ನಂತರ ಪರೀಕ್ಷೆ ನಡೆಸುವ ಚಿಂತನೆ ಇದ್ದು, ಈ ಕುರಿತಂತೆ ತಜ್ಞರು, ಶಿಕ್ಷಕರು, ಪೋಷಕರ ಅಭಿಪ್ರಾಯ ಪಡೆಯಲಾಗುವುದು ಎನ್ನಲಾಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ