Breaking News

ನಾಯಕತ್ವ ಬದಲಾವಣೆ ವಿಚಾರ; ವಿರೋಧಿ ಬಣಕ್ಕೆ ಟಾಂಗ್ ಕೊಟ್ಟ ಸಿಎಂ ಯಡಿಯೂರಪ್ಪ

Spread the love

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ನಿಟ್ಟಿನಲ್ಲಿ ತೆರೆಮರೆಯಲ್ಲಿ ಕಸರತ್ತು ನಡೆಸುತ್ತಾ, ದೆಹಲಿಯಲ್ಲಿ ಬೀಡು ಬಿಟ್ಟಿದ್ದ ನಾಯಕರಿಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಬಿಸಿ ಮುಟ್ಟಿಸಿದ್ದಾರೆ.

 

ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪ, ಶಾಸಕಾಂಗ ಸಭೆ ವಿಚಾರದ ಬಗ್ಗೆ ಚರ್ಚಿಸುವ ಅಗತ್ಯವಿಲ್ಲ. ನನ್ನ ಮುಂದೆ ಇರುವುದು ಕೋವಿಡ್ ನಿಯಂತ್ರಣ ಮಾತ್ರ. ಜನರ ಹಿತ ಕಾಯುವುದು ನನ್ನ ಮೊದಲ ಆದ್ಯತೆ. ಯಾರು ದೆಹಲಿಗೆ ಹೋಗಿ ಬಂದಿದ್ದಾರೋ ಅವರಿಗೆ ಅಲ್ಲಿಯೇ ಉತ್ತರ ಕೊಟ್ಟು ಕಳುಹಿಸಿದ್ದಾರೆ ಎಂದು ಹೇಳುವ ಮೂಲಕ ವಿರೋಧಿ ಬಣಗಳಿಗೆ ಟಾಂಗ್ ನೀಡಿದ್ದಾರೆ.

ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದೆ, ಜನರು ಸಾವು ನೋವಿನಿಂದ ಪರದಾಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಸಚಿವರು, ಶಾಸಕರು ಎಲ್ಲರೂ ಒಗ್ಗಟ್ಟಾಗಿ ಜನರ ಸಂಕಷ್ಟ ನಿವಾರಿಸುವತ್ತ ಗಮನಕೊಡಬೇಕೇ ಹೊರತು ಬೇರೆ ವಿಚಾರಗಳ ಬಗ್ಗೆ ಅಲ್ಲ ಎಂದು ತಿರುಗೇಟು ನೀಡಿದರು.


Spread the love

About Laxminews 24x7

Check Also

ಮೂನ್ನೂರು ರೂಪಾಯಿ ಹಣಕ್ಕಾಗಿ ಕಲ್ಲು ಎತ್ತಿ ಹಾಕಿ ಅಪರಿಚಿತ ವ್ಯಕ್ತಿಯ ಕೊಲೆ

Spread the loveಬಳ್ಳಾರಿ: ಕುಡಿದ ಮತ್ತಿನಲ್ಲಿ ಹಣ ನೀಡಲಿಲ್ಲ ಎನ್ನುವ ಕಾರಣಕ್ಕೆ ಅಪರಿಚಿತ ವ್ಯಕ್ತಿಯೊಬ್ಬನ ಬಳಿ ಇದ್ದ ಮೂನ್ನೂರು ರೂಪಾಯಿ ಕಸಿದುಕೊಂಡು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ