Breaking News

ಅಗ್ನಿಶಾಮಕ ದಳದ ಸಿಬ್ಬಂದಿಗೆಪಿಪಿಇ ಕಿಟ್ ಗಳನ್ನು ವಿತರಿಸಿದರಾಹುಲ್ ಜಾರಕಿಹೊಳಿ

Spread the love

ಗೋಕಾಕ: ಇಲ್ಲಿನ ನಗರಸಭೆ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗೆ ಯುವ ಮುಖಂಡರಾದ ರಾಹುಲ್ ಜಾರಕಿಹೊಳಿ ಅವರು ಇಂದು ನಗರದ ಹಿಲ್ ಗಾರ್ಡನ್ ಕಚೇರಿಯಲ್ಲಿ ಸ್ಯಾನಿಟೈಸರ್, ಮಾಸ್ಕ್ ಹಾಗೂ ಪಿಪಿಇ ಕಿಟ್ ಗಳನ್ನು ವಿತರಿಸಿದರು.

ನಂತರ ಮಾತನಾಡಿದ ಅವರು, “ಕೋವಿಡ್ ನಿಯಂತ್ರಣದಲ್ಲಿ ವಿವಿಧ ಇಲಾಖೆಗಳ ಸಿಬ್ಬಂದಿ ಕೊರೊನಾ ವಾರಿಯರ್ಸ್ ಗಳಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಕೊರೊನಾ ಹೋಗಲಾಡಿಸಲು ಇವರ ಪಾತ್ರ ಮಹತ್ವದ್ದಾಗಿದೆ‌. ವಾರಿಯರ್ಸ್ ಗಳಿಗೆ ಆತ್ಮಸ್ಥೈರ್ಯ ತುಂಬುವ ನಿಟ್ಟಿನಲ್ಲಿ ನಾವು‌‌ ಚಿಕ್ಕ ಸಹಾಯ ಮಾಡುತ್ತಿದ್ದೇವೆ. ವಾರಿಯರ್ಸ್ ಗಳು ಇದರ ಸದುಪಯೋಗ ಪಡೆಯಬೇಕು” ಎಂದು ಹೇಳಿದರು.

 

ನೆರವಿನ ಭರವಸೆ:

ಇದೇ ಸಂದರ್ಭದಲ್ಲಿ ರಾಹುಲ್ ಅವರು ನಗರಸಭೆ ಪೌರಾಯುಕ್ತ ಶಿವಾನಂದ ಹಿರೇಮಠ ಅವರೊಂದಿಗೆ ಕೊರೊನಾ ನಿಯಂತ್ರಣದ ಕುರಿತು ಚರ್ಚೆ ನಡೆಸಿದರು.

“ನಗರಸಭೆಯ ಸಿಬ್ಬಂದಿಗೆ ಎಲ್ಲ ರೀತಿಯ ಸಹಕಾರವನ್ನು ನೀಡಲು ನಾವು ಸಿದ್ಧರಿದ್ದೇವೆ. ತಾವು ಧೈರ್ಯದಿಂದ ತಮ್ಮ ಕರ್ತವ್ಯ ನಿರ್ವಹಿಸಿ” ಎಂದು ರಾಹುಲ್ ಅವರು ಭರವಸೆ ನೀಡಿದರು.


Spread the love

About Laxminews 24x7

Check Also

ಅಕ್ರವಾಗಿ ಜೂಜಾಟ ನಡೆಸುತ್ತಿದ್ದ ಅಡ್ಡೆಯ ಮೇಲೆ ಬೆಳಗಾವಿ ಪೊಲೀಸರು ದಾಳಿ ನಡೆಸಿ 12 ಆರೋಪಿಗಳನ್ನು ಬಂಧಿಸಿದ್ದಾರೆ.

Spread the loveಅಕ್ರವಾಗಿ ಜೂಜಾಟ ನಡೆಸುತ್ತಿದ್ದ ಅಡ್ಡೆಯ ಮೇಲೆ ಬೆಳಗಾವಿ ಪೊಲೀಸರು ದಾಳಿ ನಡೆಸಿ 12 ಆರೋಪಿಗಳನ್ನು ಬಂಧಿಸಿದ್ದಾರೆ. ನಂದಿಹಳ್ಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ