Breaking News

ಗೋವಾ : ಸಾವಂತ್ ನೇತೃತ್ವದ ಸರ್ಕಾರವನ್ನು ವಜಾಗೊಳಿಸಿ : ಗಿರೀಶ್ ಚೋಡಣಕರ್

Spread the love

ಪಣಜಿ : ರಾಜ್ಯದಲ್ಲಿ ಕೋವಿಡ್-19 ಸಾಂಕ್ರಾಮಿಕ ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ಆಡಳಿತ ಸರ್ಕಾರ ವಿಫಲವಾದ ಕಾರಣ ಮುಖ್ಯಮಂತ್ರಿ ಡಾ. ಪ್ರಮೋದ ಸಾವಂತ್ ನೇತೃತ್ವದ ಸರ್ಕಾರವನ್ನು ವಜಾಗೊಳಿಸುವಂತೆ ಗೋವಾ ರಾಜ್ಯ ಕಾಂಗ್ರೇಸ್ ಸಮೀತಿ ಅಧ್ಯಕ್ಷ ಗಿರೀಶ್ ಚೋಡಣಕರ್ ರಾಜ್ಯಪಾಲ ಭಗತ್‍ಸಿಂ ಗ್ ಕೋಶ್ಯಾರಿ ರವರಿಗೆ ಪತ್ರ ಬರೆದಿದ್ದಾರೆ.

ಇದನ್ನೂ ಓದಿ :https://laxminews24x7.com/laxminews-8217/

ರಾಜ್ಯದಲ್ಲಿ ವೆಂಟಿಲೇಟರ್ ಬೆಡ್, ಆಮ್ಲಜನಕ ಲಭ್ಯತೆಯಿಲ್ಲದೆಯೇ ಮತ್ತು ಅಗತ್ಯ ಔಷಧಿ, ಆಸ್ಪತ್ರೆ ಕೊರತೆಯಿಂದಾಗಿ 2000 ಕ್ಕೂ ಹೆಚ್ಚು ಜನರು ಕರೋನಾ ಸೋಂಕಿಗೆ ಬಲಿಯಾಗಿದ್ದಾರೆ, ಇನ್ನೂ ಬಲಿಯಾಗುತ್ತಿದ್ದಾರೆ. ಮುಖ್ಯಮಂತ್ರಿ ಪ್ರಮೋದ ಸಾವಂತ್ ಕೋವಿಡ್ ಸಾಂಕ್ರಾಮಿಕ ಪರಿಸ್ಥಿತಿಯಲ್ಲಿ “ಭಿವಪಾಚಿ ಗರಜ್ ನಾ” (ಹೆದರುವ ಅಗತ್ಯವಿಲ್ಲ) ಎಂದು ಹೇಳುವ ಮೂಲಕ ಜನರಲ್ಲಿ ತಪ್ಪು ನಂಬಿಕೆಯನ್ನು ಸೃಷ್ಠಿಸುತ್ತಿದ್ದಾರೆ. ಇದರಿಂದಾಗಿ ದೇಶದ ಇತರ ರಾಜ್ಯಗಳಿಂದ ಪ್ರವಾಸಿಗರನ್ನು ಗೋವಾಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಆಹ್ವಾನಿಸಿದರು ಎಂದು ರಾಜ್ಯಪಾಲರಿಗೆ ಬರೆದಿರುವ ಪತ್ರದಲ್ಲಿ ಚೋಡಣಕರ್ ಉಲ್ಲೇಖಿಸಿದ್ದಾರೆ.

ಅಸಮರ್ಥ ಮುಖ್ಯಮಂತ್ರಿ ನೇತೃತ್ವದ ಪ್ರಸ್ತುತ ರಾಜ್ಯ ಸರ್ಕಾರವು ಭಾರತ ಸಂವಿಧಾನದ 21 ನೇಯ ಪರಿಚ್ಛೇದದ ಅಡಿಯಲ್ಲಿ ಪ್ರತಿಪಾದಿಸಿರುವ ಜನರ ಮೂಲಭೂತ ಹಕ್ಕನ್ನು ರಕ್ಷಿಸಲು ತಮ್ಮ ಸಾಂವಿಧಾನಿಕ ಕರ್ತವ್ಯವನ್ನು ನಿರ್ವಹಿಸುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಪತ್ರದ ಮೂಲಕ ಆಕ್ರೊಶ ಹೊರ ಹಾಕಿದ್ದು, ಮುಖ್ಯಮಂತ್ರಿ ಸಾವಂತ್ ನೇತೃತ್ವದ ಸರ್ಕಾರವನ್ನು ವಜಾಗೊಳಿಸುವಂತೆ ರಾಜ್ಯಪಾಲರಲ್ಲಿ ಪತ್ರದ ಮೂಲಕ ಅವರು ಮನವಿ ಮಾಡಿದ್ದಾರೆ.


Spread the love

About Laxminews 24x7

Check Also

ಬೆಂಗಳೂರಲ್ಲಿ ಮುಂಬೈ ಮಾದರಿ ಕೊಳಗೇರಿ ಪ್ರದೇಶಗಳ ಪುನಶ್ಚೇತನಕ್ಕೆ ಸಮಿತಿ ರಚಿಸಿ: ಡಿಸಿಎಂ ಸೂಚನೆ

Spread the love ಬೆಂಗಳೂರು: ಮುಂಬೈ ಮಾದರಿಯಲ್ಲಿ ಕೊಳಗೇರಿ ಪ್ರದೇಶಗಳ ಪುನಶ್ಚೇತನಕ್ಕೆ ಸಮಿತಿ ರಚಿಸಲು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಜಿಬಿಎ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ