Breaking News

ಖಾಸಗಿ ಆಸ್ಪತ್ರೆಗಳಲ್ಲಿ ಮಾತ್ರ: ಒಂದು ಡೋಸ್ ಕೊರೊನಾ ಲಸಿಕೆಗೆ 200 ರೂ. ಸೇವಾ ಶುಲ್ಕ!

Spread the love

ಬೆಂಗಳೂರು, ಮೇ 28: ಕರ್ನಾಟಕದಲ್ಲಿ ಕೊರೊನಾವೈರಸ್ ಲಸಿಕೆಯ ವಿತರಿಸುವ ಖಾಸಗಿ ಆಸ್ಪತ್ರೆಗಳಲ್ಲಿ 200 ರೂಪಾಯಿ ಸೇವಾ ಶುಲ್ಕವನ್ನು ಮಾತ್ರ ವಿಧಿಸುವಂತೆ ಗುರುವಾರ ಸರ್ಕಾರ ಅಧಿಕೃತ ಆದೇಶವನ್ನು ಹೊರಡಿಸಿದೆ.

ಕೊವಿಡ್-19 ಲಸಿಕೆ ಉತ್ಪಾದಕ ಕಂಪನಿಗಳು ಖಾಸಗಿ ಆಸ್ಪತ್ರೆಗಳಿಗೆ ನೀಡಿರುವ ಲಸಿಕೆ ದರದ ಮೇಲೆ ಸೇವಾಶುಲ್ಕ ವಿಧಿಸುವ ಬಗ್ಗೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿತ್ತು. ಕರ್ನಾಟಕ ಸರ್ಕಾರವು ಆರಂಭದಲ್ಲಿ 100 ರೂಪಾಯಿ ಸೇವಾ ಶುಲ್ಕ ವಿಧಿಸುವುದಕ್ಕೆ ಮಾತ್ರ ಅನುಮತಿ ನೀಡಿತ್ತು.

 

One Site ಲಸಿಕೆ ನೀಡಲು ಬೂತ್ ತೆರೆಯಬೇಕು, ಲಸಿಕೆ ನೀಡುವುದಕ್ಕಾಗಿ ಸಾಕಷ್ಟು ಸ್ಥಳಾವಕಾಶವನ್ನು ಕಲ್ಪಿಸಬೇಕು, ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವ ವ್ಯವಸ್ಥೆ ಮಾಡಬೇಕು ಹಾಗೂ ಲಸಿಕೆ ಖರೀದಿಸಲು ಮುಂಚಿತವಾಗಿ ಹಣ ಪಾವತಿಸಬೇಕಾದ ಹಿನ್ನೆಲೆ 300 ರೂಪಾಯಿ ಸೇವಾ ಶುಲ್ಕ ವಿಧಿಸುವುದಕ್ಕೆ ಅನುಮತಿ ನೀಡುವಂತೆ ಖಾಸಗಿ ಆಸ್ಪತ್ರೆಗಳು ಮತ್ತು ನರ್ಸಿಂಗ್ ಹೋಮ್ ಸಂಘವು ಸರ್ಕಾರಕ್ಕೆ ಮನವಿ ಸಲ್ಲಿಸಿತ್ತು.

ಖಾಸಗಿ ಆಸ್ಪತ್ರೆಗಳ ಮನವಿಗೆ ಸ್ಪಂದಿಸಿದ ಸರ್ಕಾರ:

ಕೊರೊನಾವೈರಸ್ ಲಸಿಕೆ ವಿತರಣೆಗೆ ಮೊದಲ ಆದ್ಯತೆಯನ್ನು ನೀಡುವ ಉದ್ದೇಶದಿಂದ ಸರ್ಕಾರವು ಕ್ರಮ ತೆಗೆದುಕೊಂಡಿದೆ. ಖಾಸಗಿ ಆಸ್ಪತ್ರೆಗಳು ಸಲ್ಲಿಸಿದ ಮನವಿಯನ್ನು ಕೂಲಂಕುಶವಾಗಿ ಪರಿಶೀಲಿಸಿ ಪ್ರತಿ ಡೋಸ್ ಲಸಿಕೆ ವಿತರಣೆಗೆ 200 ರೂಪಾಯಿ ಸೇವಾ ಶುಲ್ಕವನ್ನು ವಿಧಿಸುವುದಕ್ಕೆ ಸರ್ಕಾರ ಅನುಮತಿ ನೀಡಿದೆ. ಈ ನಿಗದಿತ ಸೇವಾ ಶುಲ್ಕಕ್ಕಿಂತ ಹೆಚ್ಚು ಮೊತ್ತವನ್ನು ಪಡೆದರೆ ರಾಜ್ಯ ವಿಪತ್ತು ನಿರ್ವಹಣಾ ಕಾಯ್ದೆಯಡಿ ನಿಯಮಾನುಸಾರ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಕರ್ನಾಟಕದಲ್ಲಿ ಲಸಿಕೆ ಪಡೆದವರ ಸಂಖ್ಯೆ:

ಕರ್ನಾಟಕದಲ್ಲಿ ಈವರೆಗೂ 7,13,480 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 4,68,437 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 5,83,603 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 2,05,637 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ. 45 ವರ್ಷಕ್ಕಿಂತ ಮೇಲ್ಪಟ್ಟ 82,28,534 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು 19,91,063 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. ರಾಜ್ಯದಲ್ಲಿ ಇದುವರೆಗೂ 1,27,54,056 ಫಲಾನುಭವಿಗಳಿಗೆ ಕೊವಿಡ್-19 ಲಸಿಕೆ ನೀಡಲಾಗಿದೆ.


Spread the love

About Laxminews 24x7

Check Also

ಸಂಧ್ಯಾ ಸುರಕ್ಷಾ ಯೋಜನೆಯಿಂದ ಹಿರಿಯ ನಾಗರಿಕರಿಗೆ ಅನುಕೂಲಗಳು ಏನೇನು?

Spread the love ಬೆಂಗಳೂರು: ವಯಸ್ಸಾದ ವೃದ್ಧರಿಗೆ ಮಕ್ಕಳೇ ಆಸರೆ. ಆದರೂ, ಹಿರಿಯ ಜೀವಗಳಿಗೆ ಹಲವು ಸಮಸ್ಯೆಗಳು ಎದುರಾಗುತ್ತವೆ. ಪ್ರತಿಯೊಂದಕ್ಕೂ ಮಕ್ಕಳನ್ನೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ