Breaking News

ಕೊರೊನಾ ಸೋಂಕಿತ ವ್ಯಕ್ತಿಯ ಜೇಬಿನಿಂದ 11 ಸಾವಿರ ರೂ. ನಗದನ್ನು ಕಳವು ಮಾಡಿದ ಆಸ್ಪತ್ರೆಯ ಮಹಿಳಾ ಸಿಬ್ಬಂದಿ

Spread the love

ಮಡಿಕೇರಿ: ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತ ವ್ಯಕ್ತಿಯ ಜೇಬಿನಿಂದ 11 ಸಾವಿರ ರೂ. ನಗದನ್ನು ಕಳವು ಮಾಡಿದ್ದ ಆಸ್ಪತ್ರೆಯ ತಾತ್ಕಾಲಿಕ ಡಿ ಗ್ರೂಪ್ ಸಿಬ್ಬಂದಿಯನ್ನು ಬಂಧಿಸುವಲ್ಲಿ ಮಡಿಕೇರಿ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ.

ಕೋವಿಡ್ ಆಸ್ಪತ್ರೆಯಲ್ಲಿ ಕಳೆದ 17 ವರ್ಷಗಳಿಂದ ಗುತ್ತಿಗೆ ಆಧಾರದಲ್ಲಿ ಡಿ ಗ್ರೂಪ್ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದ ಮಡಿಕೇರಿ ತಾಲೂಕಿನ ಜೋಡುಪಾಲ ನಿವಾಸಿ ದಿಲ್‍ಶಾದ್(45) ಬಂಧಿತ ಆರೋಪಿಯಾಗಿದ್ದಾಳೆ.

ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಕೂಡಿಗೆ ಗ್ರಾಮದ ರಜನಿಕಾಂತ್ ಎಂಬವರು ಉಸಿರಾಟದ ಸಮಸ್ಯೆಯಿಂದ ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ಬೇರೆ ಬೇರೆ ಜಿಲ್ಲೆಗಳಲ್ಲಿ ಬೆಡ್‍ಗಳ ಕೊರತೆ ಎದುರಾಗಿರುವುದರಿಂದ ಇಲ್ಲಿಯೂ ಆ ರೀತಿ ಏನಾದರೂ ಸಮಸ್ಯೆ ಆಗಬಹುದೆಂಬ ಅನುಮಾನದಿಂದ ಸೋಂಕಿತ ರಜನಿಕಾಂತ್‍ಗೆ ಅವರ ಕುಟುಂಬಸ್ಥರು 11 ಸಾವಿರ ರೂಪಾಯಿ ಹಣ ಕೊಟ್ಟು ಕಳುಹಿಸಿದ್ದರು.

ದಿನ ಕಳೆದಂತೆ ರಜನಿಕಾಂತ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗತೊಡಗಿತು. ಬಳಿಕ ಅವರನ್ನು ಐಸಿಯು ವಾರ್ಡ್‍ಗೆ ಸ್ಥಳಾಂತರ ಮಾಡಲಾಗಿತ್ತು. ಮೇ 20 ರಂದು ಬೆಳಗ್ಗೆ 5.30 ಗಂಟೆಗೆ ರಜನಿಕಾಂತ್ ತಮ್ಮ ಪತ್ನಿ ಶೋಭಾ ಅವರಿಗೆ ಕರೆ ಮಾಡಿ, ಬೆಳಗ್ಗೆ 4 ಗಂಟೆಗೆ ಡೈಪರ್ ಪ್ಯಾಡ್ ಬದಲಾಯಿಸಲು ಬಂದ ಆಸ್ಪತ್ರೆಯ ಮಹಿಳಾ ಸಿಬ್ಬಂದಿಯೊಬ್ಬರು ತನ್ನ ಜೇಬಿನಲ್ಲಿದ್ದ 11 ಸಾವಿರ ಹಣವನ್ನು ತೆಗೆದುಕೊಂಡಿದ್ದಾರೆ ಎಂದು ಹೇಳಿದ್ದರು. ಬಳಿಕ ಮೇ 23ರಂದು ರಜನಿಕಾಂತ್ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದರು.


Spread the love

About Laxminews 24x7

Check Also

ಪೌರ ಕಾರ್ಮಿಕರ ವಸತಿ-ಖಾಯಂ ಬೇಡಿಕೆಗಳಿಗಾಗಿ ಸಪಾಯಿ ಕರ್ಮಚಾರಿ ಸಮಿತಿಯಿಂದ ಪ್ರತಿಭಟನೆ

Spread the love ಪೌರ ಕಾರ್ಮಿಕರ ವಸತಿ-ಖಾಯಂ ಬೇಡಿಕೆಗಳಿಗಾಗಿ ಸಪಾಯಿ ಕರ್ಮಚಾರಿ ಸಮಿತಿಯಿಂದ ಪ್ರತಿಭಟನೆ ಅಧಿವೇಶನದಲ್ಲಿ ಪೌರ ಕಾರ್ಮಿಕರಿಂದ ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ