Breaking News

ರಸ್ತೆ ಬದಿಯಲ್ಲಿ ನಿಂತಿದ್ದ ಟ್ಯಾಂಕರ್ ಲಾರಿಗೆ ಢಿಕ್ಕಿ

Spread the love

ಮಂಗಳೂರು: ರಸ್ತೆ ಬದಿಯಲ್ಲಿ ನಿಂತಿದ್ದ ಟ್ಯಾಂಕರ್ ಲಾರಿಗೆ ಢಿಕ್ಕಿ ಪಡೆದ ಪರಿಣಾಮ ಓಮ್ನಿ ವ್ಯಾನ್ ನಲ್ಲಿದ್ದ ಇಬ್ಬರು ಸಾವನ್ನಪ್ಪಿ ಓರ್ವ ಗಂಭೀರ ಗಾಯಗೊಂಡಿರುವ ಘಟನೆ, ಶುಕ್ರವಾರ ಮಧ್ಯಾಹ್ನ ರಾಷ್ಟ್ರೀಯ ಹೆದ್ದಾರಿ 75ರ ಅಡ್ಯಾರ್ ಎಂಬಲ್ಲಿ ನಡೆದಿದೆ.

ಪುದು ಗ್ರಾಮದ ಅಮೆಮಾರ್ ನಿವಾಸಿ ದಾವೂದ್(22) ಹಾಗೂ ಕುಂಜತ್ಕಲ ನಿವಾಸಿ ಉನೈಸ್(27) ಅಪಘಾತದಲ್ಲಿ ಮೃತ ಪಟ್ಟ ದುರ್ದೈವಿಗಳು. ತೀವ್ರವಾಗಿ ಗಾಯಗೊಂಡಿರುವವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಮಂಗಳೂರಿನಿಂದ ಫರಂಗಿಪೇಟೆ ಕಡೆಗೆ ಬರುತ್ತಿದ್ದ ಓಮ್ನಿ ಕಾರು ಚಾಲಕನ ನಿಯಂತ್ರಣ ತಪ್ಪಿ ಅಡ್ಯಾರ್ ಮಾಂಡೋವಿ ಕಾರು ಶೋ ರೂಂ ಬಳಿ ರಸ್ತೆ ಬದಿಯಲ್ಲಿ ನಿಂತಿದ್ದ ಟ್ಯಾಂಕರ್ ಲಾರಿಗೆ ಢಿಕ್ಕಿ ಹೊಡದಿದ್ದು, ಅಪಘಾತದ ತೀವ್ರತೆಗೆ ಓಮ್ನಿ ಸಂಫೂರ್ಣ ನಜ್ಜುಗುಜ್ಜಾಗಿದೆ.


Spread the love

About Laxminews 24x7

Check Also

ದಾವಣಗೆರೆ, ಬಾಗಲಕೋಟೆ ವಿಧಾನಸಭೆ ಬೈಎಲೆಕ್ಷನ್: ಉಸ್ತುವಾರಿ ಸಮಿತಿ ರಚನೆ; 31 ಜನರಿಗೆ ಜವಾಬ್ದಾರಿ

Spread the loveಬೆಂಗಳೂರು: ದಾವಣಗೆರೆ ಮತ್ತು ಬಾಗಲಕೋಟೆ ವಿಧಾನಸಭೆ ಉಪ ಚುನಾವಣೆ  ಹಿನ್ನೆಲೆ  ಎರಡೂ ಕ್ಷೇತ್ರಕ್ಕೆ ಕಾಂಗ್ರೆಸ್ ಉಸ್ತುವಾರಿ ವೀಕ್ಷಕರ ನೇಮಿಸಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ