Breaking News

ನಾನು ಗರ್ಭಿಣಿ, ಹೊಟ್ಟೆ ನೋವು ಎಂದರೂ ಬಿಡುತ್ತಿಲ್ಲ: ಪೊಲೀಸರ ವಿರುದ್ಧ ಮಹಿಳೆ ಆರೋಪ

Spread the love

ಮೈಸೂರು, : ಕೊರೋನ ಲಾಕ್ ಡೌನ್ ಹಿನ್ನಲೆಯಲ್ಲಿ ವಾಹನ ತಪಾಸಣೆ ವೇಳೆ ಗರ್ಭಿಣಿ ಮಹಿಳೆ ಹಾಗೂ ಪೊಲೀಸರ ನಡುವೆ ವಾಗ್ವಾದ ನಡೆದು ಗರ್ಭಿಣಿ ಮಹಿಳೆ ಕಣ್ಣೀರಿಟ್ಟ ಘಟನೆ ಮೈಸೂರಿನಲ್ಲಿ ನಡೆದಿದೆ.

ನಗರದ ರಾಮಸ್ವಾಮಿ ವೃತ್ತದಲ್ಲಿ ವಾಹನ ತಪಾಸಣೆ ಮಾಡುವ ವೇಳೆ ಸಂಬಂಧಿಯೊಂದಿಗೆ ವಾಹನದಲ್ಲಿ ಬರುತ್ತಿದ್ದ ಗರ್ಭಿಣಿ ಮಹಿಳೆಯನ್ನು ಪೊಲೀಸರು ತಡೆದಿದ್ದಾರೆ. ನಾನು ಗರ್ಭಿಣಿ, ಆಸ್ಪತ್ರೆಗೆ ಹೋಗುತ್ತಿದ್ದೇನೆ ಎಂದರೂ ಲೇಡಿ ಸಬ್ ಇನ್ಸ್ ಪೆಕ್ಟರ್ ಬಿಡಲಿಲ್ಲ. ಇದರಿಂದ ಮಹಿಳೆ ಮತ್ತು ಮಹಿಳಾ ಸಬ್‍ ಇನ್ಸ್‍ಪೆಕ್ಟರ್ ನಡುವೆ ವಾಗ್ವಾದ ನಡೆಯಿತು.

ಇದರಿಂದ ಮತ್ತಷ್ಟು ಸಿಟ್ಟಾದ ಮಹಿಳೆ, ನಾನು ಗರ್ಭಿಣಿ ಹೊಟ್ಟೆ ನೋವುತ್ತಿದೆ, ಆಸ್ಪತ್ರೆಗೆ ಹೋಗುತ್ತಿದ್ದೇನೆ ಎಂದು ಹೇಳಿದರೂ ಬಿಡುತ್ತಿಲ್ಲ ಎಂದು ಆರೋಪಿಸಿದರು.

ಈ ಮಹಿಳಾ ಪೊಲೀಸ್ ತಮ್ಮ ಜೊತೆ ಅಸಭ್ಯವಾಗಿ ವರ್ತನೆ ಮಾಡುತ್ತಿದ್ದಾರೆ. ಹೊಟ್ಟೆ ನೋವು ಎಂದರೂ ಬಿಡುತ್ತಿಲ್ಲ ಎಂದು ಕಣ್ಣೀರಿಟ್ಟರು. ಕೊನೆಗೆ ಪೊಲೀಸರು ಮಹಿಳೆಯನ್ನು ಸಮಾಧಾನಪಡಿಸಿ ಕಳುಹಿಸಿದರು.


Spread the love

About Laxminews 24x7

Check Also

ದಾವಣಗೆರೆ, ಬಾಗಲಕೋಟೆ ವಿಧಾನಸಭೆ ಬೈಎಲೆಕ್ಷನ್: ಉಸ್ತುವಾರಿ ಸಮಿತಿ ರಚನೆ; 31 ಜನರಿಗೆ ಜವಾಬ್ದಾರಿ

Spread the loveಬೆಂಗಳೂರು: ದಾವಣಗೆರೆ ಮತ್ತು ಬಾಗಲಕೋಟೆ ವಿಧಾನಸಭೆ ಉಪ ಚುನಾವಣೆ  ಹಿನ್ನೆಲೆ  ಎರಡೂ ಕ್ಷೇತ್ರಕ್ಕೆ ಕಾಂಗ್ರೆಸ್ ಉಸ್ತುವಾರಿ ವೀಕ್ಷಕರ ನೇಮಿಸಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ