Breaking News

ಆತ್ಮಹತ್ಯೆಯಿಂದ ಪತ್ನಿ ಸತ್ತ ಬೆನ್ನಿಗೇ ನೇಣು ಹಾಕಿಕೊಂಡ ಪತಿ; 4 ತಿಂಗಳ ಹಿಂದಷ್ಟೇ ಮದುವೆ ಆಗಿದ್ದ ಪ್ರೇಮಿಗಳು.

Spread the love

ಬೆಂಗಳೂರು: ನಾಲ್ಕು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಪ್ರೇಮಿಗಳ ವೈವಾಹಿಕ ಜೀವನ ದುರಂತ ಅಂತ್ಯ ಕಂಡಿದೆ. ಆತ್ಮಹತ್ಯೆಯಿಂದ ಪತ್ನಿ ಸಾವಿಗೀಡಾದ ಬೆನ್ನಿಗೇ ಪತಿಯೂ ನೇಣು ಹಾಕಿಕೊಂಡಿದ್ದಾನೆ. ಪತಿ ಪುನೀತ್ (21) ಹಾಗೂ ಹರ್ಷಿತಾ (19) ಮೃತಪಟ್ಟ ದಂಪತಿ.

ಆತ್ಮಹತ್ಯೆ ಮಾಡಿಕೊಂಡಿರುವ ಸತಿ-ಪತಿ ಇಬ್ಬರೂ ಮಾಗಡಿ ಚೆನ್ನೇನಹಳ್ಳಿ ನಿವಾಸಿಗಳಾಗಿದ್ದು, ಮದುವೆ ಬಳಿಕ ಹೇರೋಹಳ್ಳಿಯಲ್ಲಿ ವಾಸವಾಗಿದ್ದರು. ಇಂದು ಸಂಜೆ ನಾಲ್ಕು ಗಂಟೆಗೆ ಪತಿ ಪುನೀತ್ ಮನೆಗೆ ಮರಳಿದಾಗ ಪತ್ನಿ ನೇಣು ಹಾಕಿಕೊಂಡಿದ್ದ ಸ್ಥಿತಿಯಲ್ಲಿ ಇರುವುದು ಕಂಡು ಬಂದಿತ್ತು. ಪುನೀತ್ ಕೂಡಲೇ ಸ್ಥಳೀಯರ ಸಹಾಯದಿಂದ ಪತ್ನಿಯನ್ನು ಆಸ್ಪತ್ರೆಗೆ ಕರೆದೊಯ್ದಿದ್ದ. ಆದರೆ ಆಕೆ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದರು.

ಪತ್ನಿಯ ಸಾವಿನಿಂದ ತೀವ್ರ ಆಘಾತಕ್ಕೆ ಒಳಗಾದ ಪುನೀತ್, ನಂತರ ಮನೆಗೆ ಬಂದು ತಾನೂ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮನೆಯಲ್ಲಿ ಹರ್ಷಿತಾ ಬರೆದಿರುವ ಡೆತ್​ ನೋಟ್ ಸಿಕ್ಕಿದೆ. ನಾವು ಆರು ವರ್ಷಗಳಿಂದ ಪ್ರೀತಿಸುತ್ತಿದ್ದು, ನಾಲ್ಕು ತಿಂಗಳ ಹಿಂದಷ್ಟೇ ಮದುವೆಯಾಗಿದ್ದೆವು. ಆದರೆ ಮನೆಯವರ ಕಿರುಕುಳ ಹೆಚ್ಚಾಗಿದೆ ಎಂದು ಅದರಲ್ಲಿ ಬರೆಯಲಾಗಿದೆ. ಪುನೀತ್ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದು, ಬ್ಯಾಡರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ