Home / Uncategorized / ಸಾಕ್ಷ್ಯಾಧಾರ ಕೊರತೆ ಹಿನ್ನೆಲೆಯಲ್ಲಿ ರಮೇಶ್ ಜಾರಕಿಹೊಳಿಯವರಿಗೆ ಕ್ಲೀನ್ ಚಿಟ್ ನೀಡಲು ಮುಂದಾಗಿದ್ದಾರೆಂದು ತಿಳಿದುಬಂದಿದೆ.

ಸಾಕ್ಷ್ಯಾಧಾರ ಕೊರತೆ ಹಿನ್ನೆಲೆಯಲ್ಲಿ ರಮೇಶ್ ಜಾರಕಿಹೊಳಿಯವರಿಗೆ ಕ್ಲೀನ್ ಚಿಟ್ ನೀಡಲು ಮುಂದಾಗಿದ್ದಾರೆಂದು ತಿಳಿದುಬಂದಿದೆ.

Spread the love

ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ದಿನದಿಂದ ದಿನಕ್ಕೆ ಹೊಸ ತಿರುವು ಪಡೆದು ಕೊಳ್ಳುತ್ತಿದು ಒಂದು ರೋಚಕ ವಿಷಯ ಹೊರ ಬಂದಿದೆ.ರಮೇಶ್ ಜಾರಕಿಹೊಳಿಯವರಿಗೆ ಕ್ಲೀನ್ ಚಿಟ್ ನೀಡಲು ಮುಂದಾಗಿದ್ದಾರೆಂದು ತಿಳಿದುಬಂದಿದೆ. 

ವಿವರಣೆ :

ಇಂಜಿನಿಯರಿಂಗ್ ಪದವೀಧರೆಯಾಗಿದ್ದ ಯುವತಿಗೆ ಕೆಲಸದ ಅಮಿಷೆ ಒಡ್ಡಿ ಲೈಂಗಿಕವಾಗಿ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂಬುದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಸಂತ್ರಸ್ತ ಯುವತಿ ಹೊರಸಿರುವ ಆರೋಪ. ವಿಪರ್ಯಾಸವೆಂದರೆ ಆಕೆ ಇಂಜಿನಿಯರಿಂಗ್ ಪದವಿ ಸೇರಿದ್ದು ಬಿಟ್ಟರೆ ಬರೋಬ್ಬರಿ 20 ಕ್ಕೂ ಹೆಚ್ಚು ವಿಷಯಗಳಲ್ಲಿ ಬ್ಯಾಕ್ ಲಾಕ್ ಇಟ್ಟುಕೊಂಡಿದ್ದಾಳೆ! ಇಂಜಿನಿಯರಿಂಗ್ ಪದವಿಯೂ ಮುಗಿಸಿರಲಿಲ್ಲ. ಇನ್ನು ಸರ್ಕಾರಿ ಕೆಲಸ ಕೇಳಿಕೊಂಡು ಸಂತ್ರಸ್ತ ಯುವತಿ ಹೋಗಿದ್ದು ಯಾಕೆ?
ಜಲ ಸಂಪನ್ಮೂಲ ಖಾತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅಶ್ಲೀಲ ಸಿಡಿ ಪ್ರಕರಣದ ಕೇಂದ್ರ ಬಿಂದು ಸಂತ್ರಸ್ತ ಯುವತಿ. ಆಕೆ ನೀಡಿದ ದೂರಿನಲ್ಲಿ ನಾನು ಇಂಜಿನಿಯರಿಂಗ್ ಪದವೀಧರೆ. ನಾನು ಕೆಲಸ ಕೇಳಿಕೊಂಡು ಹೋದರೆ, ಲೈಂಗಿಕವಾಗಿ ಬಳಸಿಕೊಂಡರು.

ನನ್ನ ಇಚ್ಛೆಗೆ ವಿರುದ್ಧವಾಗಿ ಲೈಂಗಿಕ ದೌರ್ಜನ್ಯ ನಡೆಸಿದ್ದರು ಎಂದು ಆರೋಪಿಸಿ ಸ್ವತಃ ಸಂತ್ರಸ್ತ ಯುವತಿ ದೂರು ನೀಡಿದ್ದಳು. ನ್ಯಾಯಾಲಯಕ್ಕೆ ಹಾಜರಾಗಿ ನ್ಯಾಯಾಧೀಶರ ಮುಂದೆಯೇ ಹೇಳಿಕೆ ದಾಖಲಿಸಿದ್ದಳು. ಸಂತ್ರಸ್ತ ಯುವತಿ ಪೋಷಕರೂ ಕೂಡ ತನ್ನ ಮಗಳು ಇಂಜಿನಿಯರಿಂಗ್ ಪದವೀಧರೆ, ಬೆಂಗಳೂರಿನಲ್ಲಿ ಒಳ್ಳೆ ಕೆಲಸದಲ್ಲಿ ಇದ್ದಾಳೆ ಎಂದೇ ಭಾವಿಸಿದ್ದರು. ಸಿಡಿ ಪ್ರಕರಣದ ಸಂತ್ರಸ್ತ ಯುವತಿ ಇಂಜಿನಿಯರಿಂಗ್ ಪದವಿಯೇ ಮಾಡಿಲ್ಲ. ಆಕೆ ಇಂಜಿನಿಯರಿಂಗ್ ಪದವಿಗೆ ಸೇರಿದರೂ, 20 ಕ್ಕೂ ಹೆಚ್ಚು ವಿಷಯಗಳಲ್ಲಿ ನಪಾಸು ಆಗಿದ್ದಾಳೆ. ಹೀಗಾಗಿ ಬೆಂಗಳೂರಿನಲ್ಲಿ ಟೆಲಿ ಕಾಲರ್ ಕೆಲಸ ಮಾಡುತ್ತಿದ್ದಳು.

ಪದವಿಯನ್ನೂ ಮಾಡದೇ ಸಂತ್ರಸ್ತ ಯುವತಿ ಮೊದಲು ಡ್ರೋಗ್ ಪ್ರಾಜೆಕ್ಟ್ ಹೆಸರಿನಲ್ಲಿ. ಕನಿಷ್ಠ ಪದವಿಯನ್ನೂ ಪಡೆಯದ ಈಕೆ ಸರ್ಕಾರಿ ಕೆಲಸ ಕೊಡಿಸಿ ಎಂಬ ನೆಪದಲ್ಲಿ ನಿರಂತರವಾಗಿ ಸಚಿವರನ್ನು ಭೇಟಿ ಮಾಡಿದ್ದಾರೆ. ಇಬ್ಬರ ನಡುವೆ ಅನೇಕ ದೂರವಾಣಿ ಕರೆಗಳ ಸಂಭಾಷಣೆ ನಡೆದಿದೆ. ಇಬ್ಬರೂ ಪರಸ್ಪರ ವಿಡಿಯೋ ಕಾಲ್ ಮಾಡಿಕೊಂಡಿದ್ದಾರೆ. ಸಂತ್ರಸ್ತ ಯುವತಿ ಸ್ವಯಂ ಪ್ರೇರಿತವಾಗಿ ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಕರೆ ಮಾಡಿ ಅಂಗಾಂಗ ಪ್ರದರ್ಶನ ಮಾಡಿರುವುದಕ್ಕೆ ಎಸ್‌ಐಟಿ ತನಿಖೆಯಲ್ಲಿ ಮಹತ್ವದ ಸಾಕ್ಷಾಧಾರಗಳು ಸಿಕ್ಕಿವೆ ಎನ್ನಲಾಗಿದೆ.
ಹೀಗಿರುವುವಾಗ ಕೆಲಸ ಕೊಡಿಸುವ ಪ್ರಮೇಯವೇ ಬಂದಿಲ್ಲ.

ಡ್ರೋನ್ ಪ್ರಾಜೆಕ್ಟ್ ಹೆಸರಿನಲ್ಲಿ ಪರಿಚಯಿಸಿಕೊಂಡು, ಸರ್ಕಾರಿ ಕೆಲಸದ ಹೆಸರಿನಲ್ಲಿ ಜಾರಕಿಹೊಳಿ ಸಂಪರ್ಕ ಮುಂದುವರೆಸಿದ್ದಳು. ಹನಿಟ್ರ್ಯಾಪ್ ಮಾಡುವ ಸಲುವಾಗಿಯೇ ಕೆಲಸದ ಹೆಸರು ಹೇಳಿಕೊಂಡು ಕಾರ್ಯಾಚರಣೆ ನಡೆಸಿದಳಾ ಎಂಬ ಅನುಮಾನ ಇದೀಗ ಹುಟ್ಟುಹಾಕಿದೆ. ಅಚ್ಚರಿ ಸಂಗತಿ ಏನೆಂದರೆ ಸಂತ್ರಸ್ತ ಯುವತಿ ಪೋಷಕರಿಗೆ ಈಕೆಯ ಓದಿನ ಮಾರ್ಜಾಲ ಹೆಜ್ಜೆ ವಿವರ ಗೊತ್ತಿರಲಿಲ್ಲ. ಎಸ್‌ಐಟಿ ತನಿಖೆಯಲ್ಲಿ ಹಲವು ರೋಚಕ ಸಂಗತಿಗಳು ಬೆಳಕಿಗೆ ಬಂದಿವೆ ಎನ್ನಲಾಗಿದೆ.ಪ್ರಕರಣ ಸಂಬಂಧ ಸಾಕ್ಷ್ಯಾಧಾರಗಳು ಸಿಗದ ಹಿನ್ನೆಲೆಯಲ್ಲಿ ಬಿ ರಿಪೋರ್ಟ್ ಸಲ್ಲಿಸಿ ಪ್ರಕರಣಕ್ಕೆ ಫುಲ್ ಸ್ಟಾಪ್ ಹಾಕಲು ಅಧಿಕಾರಿಗಳು ನಿರ್ಧರಿಸಿದ್ದಾರೆಂದು ಮೂಲಗಳು ತಿಳಿಸಿವೆ.

ಮಾರ್ಚ್ 26 ರಂದು ಮಹಿಳೆ ಪ್ರಕರಣ ದಾಖಲಿಸಿದ್ದು, ಈ ಹಿನ್ನೆಲೆಯಲ್ಲಿ ಜಾರಕಿಹೊಳಿ ವಿರುದ್ಧ 376 ಸಿ (ಅಧಿಕಾರದಲ್ಲಿದ್ದ ವ್ಯಕ್ತಿಯು ಲೈಂಗಿಕ ಸಂಭೋಗ), 354 ಎ (ಲೈಂಗಿಕ ಕಿರುಕುಳ), 504 (ಶಾಂತಿ ಪ್ರಚೋದನೆ), 506 (ಕ್ರಿಮಿನಲ್ ಬೆದರಿಕೆ), ಐಪಿಸಿಯ 417 (ಮೋಸ) ಮತ್ತು 67 ಎ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕಱಣ ಸಂಬಂಧ ಆರಂಭವಾಗಿದ್ದ ತನಿಖೆ ಪೂರ್ಣಗೊಂಡಿದೆ. ಜಾರಕಿಹೊಳಿ ವಿರುದ್ಧ ಯಾವುದೇ ಸಾಕ್ಷ್ಯಾಧಾರಗಳು ದೊರೆತಿಲ್ಲ. ಮಹಿಳೆಯೇ ಪದೇ ಪದೇ ಜಾರಿಹೊಳಿಯವರನ್ನು ಸಂಪರ್ಕಿಸಿದ್ದಾರೆ. ಸಾಕಷ್ಟು ಬಾರಿ ದೂರವಾಣಿ ಕರೆ ಮಾಡಿ ಪ್ರಚೋದನೆ ನೀಡುವ ರೀತಿಯಲ್ಲಿ ಮಾತನಾಡಿದ್ದಾರೆ. ಲಭ್ಯವಾಗಿರುವ ವಿಡಿಯೋದಲ್ಲಿ ಮಹಿಳೆಗೆ ಬಲವಂತ ಮಾಡಿರುವ, ದೌರ್ಜನ್ಯ ಎಸಗಿರುವ ಯಾವುದೇ ದೃಶ್ಯಗಳೂ ಕಂಡು ಬಂದಿಲ್ಲ. ಇಬ್ಬರ ಸಹಮತದಿಂದಲೇ ಕ್ರಿಯೆ ನಡೆದಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ಪ್ರಕರಣ ಸಂಬಂಧ ಸಾಕಷ್ಟು ಜನರ ಹೇಳಿಕೆಯನ್ನೂ ಎಸ್ಐಟಿ ಅಧಿಕಾರಿಗಳು ದಾಖಲು ಮಾಡಿಕೊಂಡಿದ್ದಾರೆ. ವಿಡಿಯೋದಲ್ಲಿ ಇರುವುದು ನಾನಲ್ಲ. ವಿಡಿಯೋ ನಕಲಿ ಸೃಷ್ಟಿಯಾಗಿದೆ ಎಂದು ಇಷ್ಟು ದಿನ ಹೇಳಿಕೊಂಡು ಬಂದಿದ್ದ ಜಾರಕಿಹೊಳಿಯವರು ಕೆಲ ದಿನಗಳ ಹಿಂದಷ್ಟೇ ಎಸ್ಐಟಿ ಮುಂದೆ ಹಾಜರಾಗಿ ವಿಡಿಯೋದಲ್ಲಿರುವುದು ನಾನೇ ಎಂದು ಒಪ್ಪಿಕೊಂಡಿದ್ದಾರೆಂದು ಮೂಲಗಳು ತಿಳಿಸಿವೆ.

ಎಲ್ಲಾ ಬೆಳವಣಿಗೆ ಬಳಿಕ ಜಾರಕಿಹೊಳಿಯವರು ಹನಿ ಟ್ರ್ಯಾಪ್’ಗೆ ಒಳಗಾಗಿದ್ದಾರೆಂದು ಹೇಳಲಾಗುತ್ತಿದ್ದು, ಈ ಸಂಬಂಧ ಎಸ್ಐಟಿ ಅಧಿಕಾರಿಗಳೂ ನ್ಯಾಯಾಲಯಕ್ಕೆ ಶೀಘ್ರದಲ್ಲಿಯೇ ಬಿ ರಿಪೋರ್ಟ್ ಸಲ್ಲಿಸಲಿದ್ದಾರೆಂದು ತಿಳಿದುಬಂದಿದೆ.

 


Spread the love

About Laxminews 24x7

Check Also

ಕುಸ್ತಿ ಗ್ರಾಮೀಣ ಭಾಗದ ಬಹುದೊಡ್ಡ ಕ್ರೀಡೆ

Spread the love ರಬಕವಿ-ಬನಹಟ್ಟಿ: ಕುಸ್ತಿ ಗ್ರಾಮೀಣ ಭಾಗದ ಬಹುದೊಡ್ಡ ಕ್ರೀಡೆ. ಗ್ರಾಮೀಣ ಭಾಗದ ಜನರು ಕುಸ್ತಿಗೆ ಬಹಳಷ್ಟು ಮಹತ್ವ ನೀಡುತ್ತಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ