Breaking News

ಉಚಿತ ವ್ಯಾಕ್ಸಿನ್ ನನ್ನು ಖಾಸಗಿ ಆಸ್ಪತ್ರೆಗಳಿಗೆ ಮಾರಾಟ ಮಾಡಿ, ಶಾಸಕರೇ ಕಮಿಷನ್ ಪಡೆಯುವ ದಂಧೆಗೆ ಇಳಿದಿದ್ದಾರೆ ಎಂಬ ಆರೋಪ.?

Spread the love

ಬೆಂಗಳೂರು: ಸರ್ಕಾರದಿಂದ ಕೊಡಲಾಗುತ್ತಿರುವ ಉಚಿತ ವ್ಯಾಕ್ಸಿನ್ ನನ್ನು ಖಾಸಗಿ ಆಸ್ಪತ್ರೆಗಳಿಗೆ ಮಾರಾಟ ಮಾಡಿ, ಶಾಸಕರೇ ಕಮಿಷನ್ ಪಡೆಯುವ ದಂಧೆಗೆ ಇಳಿದಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಬೆಂಗಳೂರಿನ ಬಸವನಗುಡಿ ಶಾಸಕ ರವಿ ಸುಬ್ರಹ್ಮಣ್ಯ ವಿರುದ್ಧ ಸಾಮಾಜಿಕ ಕಾರ್ಯಕರ್ತ ವೆಂಕಟೇಶ್ ಇಂತದ್ದೊಂದು ಆರೋಪ ಮಾಡಿದ್ದು, ಸರ್ಕಾರ ನೀಡುತ್ತಿರುವ ಉಚಿತ ಲಸಿಕೆಯನ್ನು ಖಾಸಗಿ ಆಸ್ಪತ್ರೆಗಳಿಗೆ ಮಾರಾಟ ಮಾಡುತ್ತಿದ್ದಾರೆ ಎಂದಿದ್ದಾರೆ.

ಶಾಸಕರು ವ್ಯಾಕ್ಸಿನ್ ಪಡೆದು ಅನುಗ್ರಹ ವಿಠಲ ಎಂಬ ಖಾಸಗಿ ಆಸ್ಪತ್ರೆಗೆ ಮಾರಾಟ ಮಾಡುತ್ತಿದ್ದು, ಪ್ರತಿ ಡೋಸ್ ಲಸಿಕೆಗೆ 700 ರೂಪಾಯಿಯಂತೆ ಕಮಿಷನ್ ಪಡೆದುಕೊಳ್ಳುತ್ತಿದ್ದಾರೆ. ಈ ಬಗ್ಗೆ ಆಸ್ಪತ್ರೆಯ ಸಿಬ್ಬಂದಿಯೇ ಬಾಯ್ಬಿಟ್ಟಿದ್ದಾಗಿ ಸಾಮಾಜಿಕ ಕಾರ್ಯಕರ್ತ ಆರೋಪಿಸಿದ್ದಾರೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ